ವಿಶಾಖಪಟ್ಟಣಂ, ಒರಿಸ್ಸಾದ ದಕ್ಷಿಣ ಪ್ರದೇಶಗಳಿಗೆ ಅಪ್ಪಳಿಸಲಿದೆ ಸೈಕ್ಲೋನ್; ರಾಜ್ಯದಲ್ಲಿ ಇನ್ನು 3 ದಿನ ಸೈಕ್ಲೋನ್ ಸಾಧ್ಯತೆ

ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒರಿಸ್ಸಾದ ದಕ್ಷಿಣ ಪ್ರದೇಶಗಳಿಗೆ ಸೈಕ್ಲೋನ್ ಅಪ್ಪಳಿಸಲಿದೆ. ಮೇ 10 ನೇ ತಾರೀಕಿನ ವೇಳೆಗೆ ಸೈಕ್ಲೋನ್ ಅಪ್ಪಳಿಸುವ ಸಾಧ್ಯತೆ ಇದೆ. ಕರ್ನಾಟಕಕ್ಕೆ ಸೈಕ್ಲೋನ್ ಎಫೆಕ್ಟ್ ಇಲ್ಲ. ಈಗ ಆಗ್ತಿರುವ ಮಳೆಯ ಪ್ರಮಾಣವೇ ಮುಂದುವರಿಯಲಿದೆ.

ವಿಶಾಖಪಟ್ಟಣಂ, ಒರಿಸ್ಸಾದ ದಕ್ಷಿಣ ಪ್ರದೇಶಗಳಿಗೆ ಅಪ್ಪಳಿಸಲಿದೆ ಸೈಕ್ಲೋನ್; ರಾಜ್ಯದಲ್ಲಿ ಇನ್ನು 3 ದಿನ ಸೈಕ್ಲೋನ್ ಸಾಧ್ಯತೆ
ಮಳೆ
Follow us
TV9 Web
| Updated By: ಆಯೇಷಾ ಬಾನು

Updated on: May 08, 2022 | 11:36 AM

ಬೆಂಗಳೂರು: ದಕ್ಷಿಣ ಅಂಡಮಾನ್ನಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ವಾಯುಭಾರ ಕುಸಿತ ಇಂದು ಮಧ್ಯಾಹ್ನದ ಬಳಿಕ ಚಂಡಮಾರುತದ ರೂಪ ಪಡೆಯಲಿದೆ. ಗಾಳಿಯ ವೇಗ 60 ರಿಂದ 70 km ಇರಲಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒರಿಸ್ಸಾದ ದಕ್ಷಿಣ ಪ್ರದೇಶಗಳಿಗೆ ಸೈಕ್ಲೋನ್ ಅಪ್ಪಳಿಸಲಿದೆ. ಮೇ 10 ನೇ ತಾರೀಕಿನ ವೇಳೆಗೆ ಸೈಕ್ಲೋನ್ ಅಪ್ಪಳಿಸುವ ಸಾಧ್ಯತೆ ಇದೆ. ಕರ್ನಾಟಕಕ್ಕೆ ಸೈಕ್ಲೋನ್ ಎಫೆಕ್ಟ್ ಇಲ್ಲ. ಈಗ ಆಗ್ತಿರುವ ಮಳೆಯ ಪ್ರಮಾಣವೇ ಮುಂದುವರಿಯಲಿದೆ. ರಾಜ್ಯದಲ್ಲಿ ಮೂರು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ 3 ದಿನ ಕರ್ನಾಟಕದಲ್ಲಿ ವರುಣನ ಆರ್ಭಟ ಇರಲಿದೆ. ಬೆಂಗಳೂರು (Bengaluru Rain) ಮಾತ್ರವಲ್ಲದೆ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮೇ 10ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೆರಡು ದಿನ (ಮೇ 10ರವರೆಗೆ) ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಕೂಡ ಇದೆ.

ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆಯೂ ಜೋರಾಗಿ ಮಳೆ ಸುರಿದಿದ್ದು, ಇಂದು ಸಂಜೆಯ ನಂತರವೂ ಮಳೆ ಅಬ್ಬರಿಸುವ ನಿರೀಕ್ಷೆಯಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಿಗ್ಗೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ಮಳೆಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ