ಬೆಂಗಳೂರು: ಸಿಲಿಂಡರ್​ ಸ್ಫೋಟಿಸಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಫ್ಲ್ಯಾಟ್

Bengaluru Fire Accident: ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಬೆಂಗಳೂರು: ಸಿಲಿಂಡರ್​ ಸ್ಫೋಟಿಸಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಫ್ಲ್ಯಾಟ್
ಹೊತ್ತಿ ಉರಿದ ಫ್ಲಾಟ್
Follow us
| Updated By: ganapathi bhat

Updated on:Sep 21, 2021 | 6:25 PM

ಬೆಂಗಳೂರು: ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ (Fire Accident) ಸಂಭವಿಸಿದ ಘಟನೆ ನಡೆದಿದೆ. ಬೆಂಗಳೂರಿನ ಅಪಾರ್ಟ್​ಮೆಂಟ್​ನ ಫ್ಲ್ಯಾಟ್​ ಒಂದರಲ್ಲಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಕ್ಕೆ ಒಂದು ಫ್ಲಾಟ್ ಹೊತ್ತಿ ಉರಿದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಇಲ್ಲಿನ ಆಶ್ರಿತ್ ಅಪಾರ್ಟ್ಮೆಂಟ್​ನಲ್ಲಿ (Ashrith Apartment) ಸಿಲಿಂಡರ್ ಸ್ಪೋಟ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಅಪಾರ್ಟ್​ಮೆಂಟ್​ನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಫ್ಲ್ಯಾಟ್‌ನಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹರಸಾಹಸ ಮಾಡಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯ ಸಾಗಿದೆ.

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ವ್ಯಕ್ತಿ ಸಜೀವದಹನ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ದೇವರಚಿಕ್ಕನಹಳ್ಳಿಯ ಆಶ್ರಿತ್​​ ಅಪಾರ್ಟ್​ಮೆಂಟ್​ನಲ್ಲಿ ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಈಗ ಬೆಂಕಿಯು ಮೂರು ಫ್ಲ್ಯಾಟ್​ಗಳಿಗೆ ಹೊತ್ತಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಬೆಂಕಿ ಬಿದ್ದ ಫ್ಲ್ಯಾಟ್‌ನಲ್ಲಿ ಸಿಲುಕಿ ಓರ್ವ ಮಹಿಳೆ ಪರದಾಟ ಪಡುತ್ತಿದ್ದಾರೆ. ಅಗ್ನಿ ಅವಘಡಕ್ಕೆ ಸಂಬಂಧಿಸಿ ಸುಟ್ಟುಕರಕಲಾದ ಒಂದು ಮೃತದೇಹ ಪತ್ತೆಯಾಗಿದೆ.

ಪ್ರತ್ಯಕ್ಷದರ್ಶಿ ಮಾಹಿತಿ ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ ದುರಂತದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ ಎಂಬ ಬಗ್ಗೆ ಟಿವಿ9ಗೆ ಪ್ರತ್ಯಕ್ಷದರ್ಶಿ ಅಕ್ಷಯ್‌ ಹೇಳಿಕೆ ನೀಡಿದ್ದಾರೆ. ಫ್ಲ್ಯಾಟ್‌ನಲ್ಲಿದ್ದ ಮೂವರು ಹೊರ ಓಡಿ ಬಂದು ಪಾರಾಗಿದ್ದಾರೆ. ಫ್ಲ್ಯಾಟ್‌ನಲ್ಲಿದ್ದ ಐವರ ಪೈಕಿ ಇಬ್ಬರು ಸಜೀವದಹನ ಆಗಿದ್ದಾರೆ. ಇಬ್ಬರು ಹೊರಬರಲು ಆಗದೆ ಸಜೀವದಹನವಾಗಿದ್ದಾರೆ. ವಾಕಿಂಗ್‌ ಮಾಡ್ತಿದ್ದ ವೃದ್ಧೆ ಸೇರಿ ಇಬ್ಬರು ಸಜೀವದಹನ ಆಗಿದ್ದಾರೆ.

ಅಪಾರ್ಟ್​ಮೆಂಟ್​ನ ಮೂರು ಫ್ಲ್ಯಾಟ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂರು ಫ್ಲ್ಯಾಟ್‌ಗಳ ಪೈಕಿ ಒಂದಕ್ಕೆ ಬೀಗ ಹಾಕಲಾಗಿದೆ. ಈ ವಿಚಾರಗಳ ಬಗ್ಗೆ ಟಿವಿ9ಗೆ ಪ್ರತ್ಯಕ್ಷದರ್ಶಿ ಅಕ್ಷಯ್‌ ಹೇಳಿಕೆ ನೀಡಿದ್ದಾರೆ. ಸದ್ಯಕ್ಕೆ ಇಬ್ಬರು ಮೃತಪಟ್ಟ ಬಗ್ಗೆ ತಿಳಿದು ಬಂದಿದೆ. ಪಾರಾದ ಮೂವರ ಪೈಕಿ ಒಬ್ಬರು ಗಾಯಗೊಂಡಿದ್ದಾರೆ. ಇಬ್ಬರು ಹೊರತುಪಡಿಸಿ ಬಹುತೇಕ ಎಲ್ಲರೂ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆಯ ಕೆಲ ವಿವರಗಳು ಲಭ್ಯ ಅಪಾರ್ಟ್ಮೆಂಟ್ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಅಕ್ಕಪಕ್ಕದ ಫ್ಲಾಟ್​ಗಳಿಗೂ ಬೆಂಕಿ ವ್ಯಾಪಿಸುತ್ತಿದೆ. ಅಪಾರ್ಟ್‌ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ವಿವರಗಳು ಲಭ್ಯವಾಗಿದೆ. ಸಂಜೆ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೊದಲಿಗೆ ಅಪಾರ್ಟ್​ಮೆಂಟ್​ನ 3ನೇ ಮಹಡಿಯಲ್ಲಿ ಒಂದು ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲಿಗೆ ಎರಡು ಅಗ್ನಿಶಾಮಕ ವಾಹನ ಘಟನಾ ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಪಕ್ಕದ ಮನೆಗೂ ಬೆಂಕಿ ಹತ್ತಿಕೊಂಡಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಹಲವರು ಅಪಾರ್ಟ್​ಮೆಂಟ್​ನಿಂದ ಹೊರಗೆ ಬಂದಿದ್ದಾರೆ.

ದೇವರಚಿಕ್ಕನಹಳ್ಳಿಯ ಆಶ್ರಿತ್​​ ಅಪಾರ್ಟ್​ಮೆಂಟ್​ನಲ್ಲಿ ಘಟನೆ ನಡೆದಿದೆ. 4 ಅಂತಸ್ತಿನ ಆಶ್ರಿತ್​​ ಅಪಾರ್ಟ್​ಮೆಂಟ್​ನಲ್ಲಿ ಅವಘಡ ಸಂಭವಿಸಿದೆ. 4 ಅಂತಸ್ತಿನಲ್ಲಿ ಒಟ್ಟು 72 ಫ್ಲ್ಯಾಟ್‌ ನಿರ್ಮಿಸಲಾಗಿತ್ತು. ಆಶ್ರಿತ್ ಶೆಲ್ಟರ್ಸ್ ಪ್ರೈವೆಟ್‌ ಲಿ. ಒಡೆತನದ ಅಪಾರ್ಟ್​ಮೆಂಟ್ ಇದಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಇದೀಗ ಅಪಾರ್ಟ್​ಮೆಂಟ್​ಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅನಾಹುತ ಸಂಭವಿಸದಂತೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ; ಆಂಬುಲೆನ್ಸ್​ಗೂ ದಾರಿ ಮಾಡಿಕೊಡದ್ದಕ್ಕೆ ಪೋಷಕರ ಆಕ್ರೋಶ 

ಇದನ್ನೂ ಓದಿ: ಅವಘಡ ಸಂಭವಿಸದಂತೆ ಎಚ್ಚರವಹಿಸಿ ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​ಗೆ ಮರಳು ಹಾಕಿದ ಕನ್ಸ್​ಟೇಬಲ್ಸ್​​; ಪೊಲೀಸ್ ಕಮಿಷನರ್​ನಿಂದ ಮೆಚ್ಚುಗೆ‌​

Published On - 5:31 pm, Tue, 21 September 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ