Bengaluru: ಸಿಲಿಂಡರ್ ಸ್ಫೋಟವಾಗಿ 7 ಜನರಿಗೆ ಗಾಯ; ಬೆಂಕಿ ನಂದಿಸುತ್ತಿರುವ 9ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ

ಗಾಯಾಳುಗಳು‌ ESI ಮತ್ತು Victoria ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 50 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಚರಣೆ ನಡೆಸಲಾಗುತ್ತಿದೆ.

Bengaluru: ಸಿಲಿಂಡರ್ ಸ್ಫೋಟವಾಗಿ 7 ಜನರಿಗೆ ಗಾಯ; ಬೆಂಕಿ ನಂದಿಸುತ್ತಿರುವ 9ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 03, 2022 | 10:59 PM

ಬೆಂಗಳೂರು: ಸಿಲಿಂಡರ್ ಸ್ಫೋಟವಾಗಿ 7 ಜನರಿಗೆ ಗಾಯವಾದ ಘಟನೆ ನಗರದ ಅತ್ತಿಗುಪ್ಪೆಯ 2ನೇ ಕ್ರಾಸ್ ನ ಮನೆಯೊಂದರಲ್ಲಿ ನಡೆದಿದೆ. ರಾತ್ರಿ 8:45ರ ಸುಮಾರಿಗೆ ಘಟನೆ ನಡೆದಿರುವ ಬಗ್ಗೆ ತಿಳಿದುಬಂದಿದೆ. ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟವಾಗಿದ್ದು 7 ಜನರಿಗೆ ಗಾಯ ಆಗಿದೆ. ಸುಕುಮಾರ್ (48), ಹರ್ಷ (41), ಗಾನಶ್ರೀ (13), ಹೇಮೇಶ್ವರ್ (7), ಕಟ್ಟಡದ ಮಾಲಿಕರಾದ ರಾಮಕ್ಕ (65), ಅನಿತಾ (31) ರಚನಾ (21) ಗೆ ಗಾಯವಾಗಿದೆ.

ಮನೆ ಮಾಲಿಕ ಹರ್ಷಾರ ಪತ್ನಿ ಅಡುಗೆ ಮನೆಗೆ ಹೋದಾಗ ಸಿಲಿಂಡರ್ ಸೋರಿಕೆಯಾಗಿರುವುದು ಪತ್ತೆ‌ ಆಗಿದೆ. ಸೋರಿಕೆಯಾದ ಗ್ಯಾಸ್ ದೇವರ ಕೋಣೆಯಲ್ಲಿದ್ದ ದೀಪಕ್ಕೆ ತಗುಲಿ ಸ್ಪೋಟಗೊಂಡಿದೆ. ಗಾಯಾಳುಗಳು‌ ESI ಮತ್ತು Victoria ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 50 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಚರಣೆ ನಡೆಸಲಾಗುತ್ತಿದೆ.

ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಲಾರಿ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬೆಳವಟಗಿ ಕ್ರಾಸ್ ಬಳಿ ರಸ್ತೆಯಲ್ಲಿ ನಡೆದಿದೆ. ಶಿವಯೋಗಪ್ಪ ಬೆಣ್ಣಿ ಎಂಬುವವರ ಲಾರಿ ಬೆಂಕಿಗಾಹುತಿ ಆಗಿದೆ. ಗೋವಿನ ಜೋಳ ಸಾಗಿಸುತ್ತಿದ್ದಾಗ ಲಾರಿ ಹೊತ್ತಿ ಉರಿದಿದೆ. ಚಾಲಕ, ಕ್ಲೀನರ್ ಲಾರಿಯಿಂದ ಜಿಗಿದು ಬಚಾವ್ ಆಗಿದ್ದಾರೆ. ನವಲಗುಂದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಾರ್ಟ್​​ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ ಶಾರ್ಟ್​​ ಸರ್ಕ್ಯೂಟ್​​ನಿಂದ ಕೆಮಿಕಲ್ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕುಂಬಳಗೂಡಿನಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸೋನಿ‌ ಇಂಡಸ್ಟ್ರಿಯಲ್ ಫ್ಯಾಕ್ಟರಿ ಬೆಂಕಿಗಾಹುತಿ ಆಗಿದೆ. ಫ್ಯಾಕ್ಟರಿಯಲ್ಲಿ ಎಲ್ಲ ಕಾರ್ಮಿಕರು‌ ಕೆಲಸ ಮುಗಿಸಿ ತೆರಳಿದ್ದರು. ಕೇವಲ ಮೂವರು ಮಾತ್ರ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇದ್ದರು. ಬೆಂಕಿ ಕಾಣಿಸಿಕೊಳ್ತಿದ್ದಂತೆ ಫ್ಯಾಕ್ಟರಿಯಿಂದ ಹೊರ ಓಡಿದ್ದರು ಎಂದು ತಿಳಿದುಬಂದಿದೆ. 3 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ.

ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಎದೆನೋವು; ನಿಯಂತ್ರಣ ತಪ್ಪಿ ಫುಟ್​ಪಾತ್ ಮೇಲೆ ಹರಿದ ಖಾಸಗಿ ಬಸ್ ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಎದೆನೋವು ಹಿನ್ನೆಲೆ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಫುಟ್​ಪಾತ್ ಮೇಲೆ ಹರಿದ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರ-ಹೆಣ್ಣೂರು ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೇವಲ ನಾಲ್ವರು ಮಾತ್ರ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಎದೆನೋವು ಕಾಣಿಸಿಕೊಂಡ ಚಾಲಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಡ್ಯ: ಕಾರು- ಬಸ್ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1290 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್