ಬೆಂಗಳೂರಿನಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯ ಪೋಲಮಸ್ ಹೋಟೆಲ್​ನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಬ್ಲಾಸ್ಟ್ ತೀವ್ರತೆಗೆ ಹೋಟೆಲ್‌ ರೋಲಿಂಗ್ ಶೆಟರ್ ಮುಂದೆ ಮಲಗಿದ್ದ ವೃದ್ಧ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ ಹೋಟೆಲ್​​ನಲ್ಲಿ ಬೆಂಕಿ ನಂದಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
ಸಿಲಿಂಡರ್​ ಸ್ಫೋಟಗೊಂಡ ಸ್ಥಳ
Follow us
Prajwal Kumar NY
| Updated By: ಆಯೇಷಾ ಬಾನು

Updated on:Aug 24, 2023 | 1:11 PM

ಬೆಂಗಳೂರು, ಆ.24: ಸಿಲಿಕಾನ್ ಸಿಟಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ(Cylinder Explosion). ನಗರದ ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯ ಪೋಲಮಸ್​​​ ಹೋಟೆಲ್​​ನಲ್ಲಿ ಬೆಳಿಗ್ಗೆ 9ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಹೋಟೆಲ್ ಶೆಟರ್​​​ ಮುಂದೆ ಮಲಗಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ(Death). ರವಿ(45) ಮೃತ ದುರ್ದೈವಿ. ಹೋಟೆಲ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೊದಲ ಮಹಡಿಯಲ್ಲಿರುವ ಪೋಲಮಸ್ ಹೋಟೆಲ್​ನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಬ್ಲಾಸ್ಟ್ ತೀವ್ರತೆಗೆ ಹೋಟೆಲ್‌ ರೋಲಿಂಗ್ ಶೆಟರ್ ಮುಂದೆ ಮಲಗಿದ್ದ ವ್ಯಕ್ತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ ಹೋಟೆಲ್​​ನಲ್ಲಿ ಬೆಂಕಿ ನಂದಿಸಿದ್ದಾರೆ.

ಇನ್ನು ಹೋಟೆಲ್​ನ ಕೆಳ ಮಹಡಿಯಲ್ಲಿ ಸಿಲಿಂಡರ್​ಗಳನ್ನ ಇಡಲಾಗುತ್ತಿತ್ತು. ಒಳ ಭಾಗದಲ್ಲಿ ಒಟ್ಟು 10 ಕಮರ್ಷಿಯಲ್ ಸಿಲಿಂಡರ್​ಗಳನ್ನ ಇಡಲಾಗಿತ್ತು. ಇಂದು ಬೆಳಿಗ್ಗೆ ಎಂದಿನಂತೆ ಎದ್ದು ಹೋಟೆಲ್ ತೆಗೆದು ಅಡುಗೆ ಭಟ್ಟರು ಟಿಫನ್​ಗೆ ರೆಡಿ ಮಾಡಿಕೊಳ್ಳುತ್ತಿದ್ದರು. ಮೊದಲ ಮಹಡಿಯಲ್ಲಿ ಅಡುಗೆ ಮಾಡುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೊದಲ ಮಹಡಿಯಲ್ಲಿದ್ದ ನಾಗರಾಜ್ ಹಾಗೂ ರಾಮಯ್ಯ ಚೋರ್ಲಾ ಮೂಲತಃ ಅಸ್ಸಾಂನವರು. ಮತ್ತೊಂದೆಡೆ ಸಿಲಿಂಡರ್ ಇಟ್ಟ ಜಾಗದಲ್ಲಿ ಮಲಗಿದ್ದ ರವಿ (45) ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಅದೃಷ್ಟವಶಾತ್ ಉಳಿದ ಸಿಲಿಂಡರ್ ಗಳು ಯಾವುದೇ ಹಾನಿಯಾಗಿಲ್ಲ.

ಇದನ್ನೂ ಓದಿ: Karnataka Breaking Kannada News Live: ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ ಬೇಕೆಂದು ಕೆರೆಗೆ ಇಳಿದ ತಂದೆ-ಮಗ ಸಾವು

ಸಿಲಿಂಡರ್ ಬ್ಲಾಸ್ಟ್ ಆಗಿಲ್ಲ, ಅನಿಲ ಸೋರಿಕೆ ಆಗಿದೆ

ಮತ್ತೊಂದೆಡೆ ಈ ಘಟನೆ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಮಾಹಿತಿ ನೀಡಿದ್ದಾರೆ. ಸಿಲಿಂಡರ್ ಬ್ಲಾಸ್ಟ್ ಆಗಿಲ್ಲ, ಅನಿಲ ಸೋರಿಕೆಯಿಂದ ಅವಘಡ ಸಂಭವಿಸಿದೆ. ಮೊದಲ ಮಹಡಿಯಲ್ಲಿ ಮೆಸ್ ಇದೆ. ಅದರ ಮೇಲ್ಮಹಡಿಯಲ್ಲಿ ಕಿಚನ್ ಇದೆ. ಕೆಳಮಹಡಿಯಲ್ಲಿ ಮೆಸ್ ನ ಸಿಬ್ಬಂದಿ ಹಾಗೂ ಒಂದಿಷ್ಟು ಗ್ಯಾಸ್ ಗಳನ್ನು ಸ್ಟೋರ್ ಮಾಡಿಟ್ಟಿದ್ದಾರೆ. ಯಾವುದೋ ಒಂದು ಪೈಪ್ ನಿಂದ ಗ್ಯಾಸ್ ಲೀಕ್ ಆಗಿರೋದು ಪತ್ತೆಯಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಂಡು ಬಂದ ಸಂಗತಿ ಇದು. ತಂಡ ಮತ್ತಷ್ಟು ಆಳವಾಗಿ ಪರಿಶೀಲಿಸುತಿದ್ದಾರೆ ಎಂದರು.

ಗ್ಯಾಸ್ ಲೀಕ್ ಆಗಿ ಬ್ಲಾಸ್ಟ್ ಆದ ಪರಿಣಾಮ ಅವಘಡ ಸಂಭವಿಸಿದೆ. ಹೊರಗಡೆ ರೆಸ್ಟ್ ಮಾಡುತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಒಳಗಡೆ ಇದ್ದ ಇಬ್ಬರಿಗೆ ಸುಟ್ಟ ಗಾಯವಾಗಿದೆ. ಅವರಿಬ್ಬರಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಸಹ ತಿಳಿಸಿದ್ದಾರೆ. ಗ್ಯಾಸ್ ಪೈಪ್ ಲೀಕ್ ಆಗಿದೆ. ಸಿಲಿಂಡರ್ ಗಳು ಹಾಗೆ ಇವೆ. ಬಹಳಷ್ಟು ದಿನಗಳಿಂದ ಸ್ಟೋರ್ ಆಗಿದ್ದು ಕಂಡು ಬಂದಿದೆ. ಯಾವಾಗ ಲೀಕ್ ಆರಂಭವಾಗಿದೆ ಅನ್ನೊದು ಪತ್ತೆ ಹಚ್ಚುತಿದ್ದೇವೆ. ಯಾರು ಈ ಘಟನೆಗೆ ಕಾರಣ ಅನ್ನೊ ಬಗ್ಗೆ ತನಿಖೆ ನಡೆಸುತಿದ್ದೇವೆ. ಸದ್ಯ ಯಾರ ಲೋಪದಿಂದಾಗಿದೆ ಅನ್ನೊ ತನಿಖೆ ನಡೆಯುತ್ತಿದೆ ಎಂದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:32 am, Thu, 24 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ