AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ

ಬೆಂಗಳೂರಿನಲ್ಲಿ ಅಗ್ನಿ ಅವಘಡಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇತ್ತೀಚಿಗೆ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಇದೀಗ ರಾಜಧಾನಿಯ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ಎಲ್​ಪಿಜಿ ಸಿಲಿಂಡರ್​​​ ಸ್ಫೋಟಗೊಂಡಿದೆ.

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ
ಸಿಲಿಂಡರ್​ ಸ್ಫೋಟ
Follow us
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on: Nov 22, 2023 | 11:21 AM

ಬೆಂಗಳೂರು ನ.22: ಎಲ್​ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಐವರು ಗಾಯಗೊಂಡಿರವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು (ನ.22) ಮುಂಜಾನೆ 5:30 ರ ಸುಮಾರಿಗೆ ಲೈಟ್​ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್​ ಸ್ಫೋಟಗೊಂಡಿದೆ. (Cylinder explosion) ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಟ್ಟಡದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ

ಮೂರು ದಿನಗಳ ಹಿಂದೆ (ನ.19) ರಂದು ಬೆಂಗಳೂರಿನ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಲು ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿತ್ತು.

ಇದನ್ನೂ ಓದಿ: ಬೆಂಗಳೂರಿನ ಆನೇಕಲ್​ ಬಳಿ ಮತ್ತೊಂದು ಅಗ್ನಿ ಅವಘಡ: ಮನೆಯ ಸಿಲಿಂಡರ್​ ಸ್ಫೋಟ

ರವಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರೂ, ಸಿಬ್ಬಂದಿ ಒಂದು ಗಂಟೆ ತಡವಾಗಿ ಬಂದ ಹಿನ್ನೆಲೆಯಲ್ಲಿ ಬೆಂಕಿ ಮತ್ತಷ್ಟು ಹೆಚ್ಚಾಗಿತ್ತು.

ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?