ಬೆಂಗಳೂರು ನ.22: ಎಲ್ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಐವರು ಗಾಯಗೊಂಡಿರವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು (ನ.22) ಮುಂಜಾನೆ 5:30 ರ ಸುಮಾರಿಗೆ ಲೈಟ್ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟಗೊಂಡಿದೆ. (Cylinder explosion) ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೂರು ದಿನಗಳ ಹಿಂದೆ (ನ.19) ರಂದು ಬೆಂಗಳೂರಿನ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಲು ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿತ್ತು.
ಇದನ್ನೂ ಓದಿ: ಬೆಂಗಳೂರಿನ ಆನೇಕಲ್ ಬಳಿ ಮತ್ತೊಂದು ಅಗ್ನಿ ಅವಘಡ: ಮನೆಯ ಸಿಲಿಂಡರ್ ಸ್ಫೋಟ
ರವಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರೂ, ಸಿಬ್ಬಂದಿ ಒಂದು ಗಂಟೆ ತಡವಾಗಿ ಬಂದ ಹಿನ್ನೆಲೆಯಲ್ಲಿ ಬೆಂಕಿ ಮತ್ತಷ್ಟು ಹೆಚ್ಚಾಗಿತ್ತು.
ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ