AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆಗೆ ಚಿಂತನೆ ನಡೆಸಿರೋದಾಗಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಬೆಂಗಳೂರು ಟೆಕ್ ಸಮ್ಮಿಟ್ ಮೂಲಕ ಕರ್ನಾಟಕದ ತಂತ್ರಜ್ಞಾನ, ಸ್ಟಾರ್ಟಪ್‌ಗಳು ಮತ್ತು ಮಾನವ ಸಂಪನ್ಮೂಲಗಳನ್ನು ಉತ್ತೇಜಿಸಲಾಗುವುದು. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಿ, ರಾಜ್ಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಿದ್ಧಗೊಳಿಸುವುದು ಸರ್ಕಾರದ ಗುರಿ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:Nov 18, 2025 | 12:50 PM

Share

ಬೆಂಗಳೂರು, ನ.18: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ. ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ‌. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸೇರಿ ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ಅವರಿಗೆ ನಮ್ಮ ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್​ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ನೀವು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕು ಎಂದು ನಮ್ಮ ಮುಂದಿನ ಪೀಳಿಗೆಗೆ ನಾನು ಸದಾ ಹೇಳುತ್ತಿರುತ್ತೇನೆ. ಹೊಸ ಆಲೋಚನೆಗಳು ಬಂದರೆ ಸ್ಟಾರ್ಟ್ ಅಪ್ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಈಗಾಗಲೇ ತಿಳಿಸಿದ್ದೇನೆ. ನಮ್ಮನ್ನು ನಂಬಿ ಬಂದವರಿಗೆ ಉತ್ತಮ ಅವಕಾಶ ನೀಡುವುದು ನಮ್ಮ ಕೆಲಸ. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಸರ್ಜರಿ ಸಸ್ಪೆನ್ಸ್​, ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾಲು ಸಾಲು ನಾಯಕರು

ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಜವಾಬ್ದಾರಿ ಹೊತ್ತಿರುವ ಶರತ್ ಬಚ್ಚೇಗೌಡರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ನಾವೆಲ್ಲರೂ ಇದ್ದೇವೆ. ಬೆಂಗಳೂರಿನ ವಾತಾವರಣವೇ ಎಲ್ಲದಕ್ಕೂ ಅನುಕೂಲಕರವಾಗಿದೆ. 25 ಲಕ್ಷ ಐಟಿ ಪರಿಣಿತರು ಇಲ್ಲಿದ್ದಾರೆ. ನಮ್ಮಲ್ಲಿರುವ ಮಾನವ ಸಂಪನ್ಮೂಲಗಳು ಬೇರೆ ಎಲ್ಲೂ ಇಲ್ಲ. ಈ ಸಮ್ಮೇಳನ ಮೂಲಕ ಮೂರು ದಿನಗಳ ಕಾಲ ಭವಿಷ್ಯದ ಬಗ್ಗೆ ಚರ್ಚೆ ಮಾಡಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಎಲ್ಲಾ ಕ್ಷೇತ್ರಗಳಿಗೆ ಅದರದೇ ಆದ ನೀತಿ ರೂಪಿಸಿ, ಪ್ರೋತ್ಸಾಹ ನೀಡುತ್ತಿದೆ ಎಂದರು.

‘ಹೊಗಳಿಕೆ, ಟೀಕೆ ಎರಡಕ್ಕೂ ಸ್ವಾಗತ’

ರಸ್ತೆಗಳ ದುರಸ್ತಿ ಕಾರ್ಯಕ್ಕೆ ಹಲವಾರು ಕಂಪೆನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಾವು ನಮ್ಮ ಕೆಲಸ ಮಾಡಿದ್ದೇವೆ. ಟೀಕೆ ಮಾಡಿದರೂ ಸ್ವಾಗತ, ಹೊಗಳಿದರೂ ಸ್ವಾಗತ. ಜನಸೇವೆ ಮಾಡುವುದೇ ಮೊದಲ ಆದ್ಯತೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Tue, 18 November 25

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್