AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್​​ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿ ಬಳಿಯಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ.ಸುಧಾಕರ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಇನ್ನೂ ಹಲವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್​​ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್
ಗೃಹಸಚಿವ ಡಾ.ಜಿ.ಪರಮೇಶ್ವರ್ Image Credit source: tv9 kannada
ರಾಮು, ಆನೇಕಲ್​
| Edited By: |

Updated on:Apr 27, 2026 | 4:06 PM

Share

ಆನೇಕಲ್, ಏಪ್ರಿಲ್​ 27: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್​​ಗೆ (D Sudhakar) ಚಿಕಿತ್ಸೆ ಮುಂದುವರೆದಿದೆ. ಶ್ವಾಸಕೋಶದ ಇನ್ಫೆಕ್ಷನ್ ಹಿನ್ನೆಲೆ ವೆಂಟಿಲೇಟರ್, ಎಕ್ಮೋ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಭಾನುವಾರ ಡಿಸಿಎಂ ಡಿಕೆ ಶಿವಕುಮಾರ್​ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್​​ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದರು. ಅವರ ಆರೋಗ್ಯ ಸಹಜಸ್ಥಿತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಅವರು ಗುಣಮುಖರಾಗಿ ಬರಬೇಕು: ಡಾ.ಜಿ.ಪರಮೇಶ್ವರ್

ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸಹಜಸ್ಥಿತಿಯಲ್ಲಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರು ಪಾಸಿಟಿವ್ ಆಗಿ ಹೇಳಿದ್ದಾರೆ. ಎಲ್ಲವೂ ದೇವರ ಇಚ್ಛೆ, ಅವರು ಗುಣಮುಖರಾಗಿ ಬರಬೇಕು. ಡಿ.ಸುಧಾಕರ್ ಬ್ರೈನ್ ನಾರ್ಮಲ್ ಆಗೋಕೆ ಸಮಯ ಹಿಡಿಯುತ್ತೆ. ಇನ್ನೂ ಪ್ರಜ್ಞೆ ಬಂದಿಲ್ಲ, ಪ್ರಜ್ಞೆ ಬರಲಿ ಎಂದು ವೈದ್ಯರು ಕಾಯುತ್ತಿದ್ದಾರೆ. ಸಚಿವ ಡಿ.ಸುಧಾಕರ್ ಗುಣಮುಖರಾಗಿ ಬರುತ್ತಾರೆ ಎಂದು ಹೇಳಿದ್ದಾರೆ.

ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದ ಪರಮೇಶ್ವರ್

ಡಿ ಸುಧಾಕರ್​​​ ಆರೋಗ್ಯ ವಿಚಾರವನ್ನು ಸರ್ಕಾರ ಮುಚ್ಚಿಡುತ್ತಿದೆ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಡಿ.ಸುಧಾಕರ್ ಆರೋಗ್ಯದ ವಿಚಾರದಲ್ಲಿ ಮುಚ್ಚಿಡುವುದು ಏನೂ ಇಲ್ಲ. ಹೆಚ್​ಡಿ ಕುಮಾರಸ್ವಾಮಿಗೆ ಗೊತ್ತಿರುವುದನ್ನು ಹೇಳುತ್ತಾರೆ. ಆ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದಿದ್ದಾರೆ.

ಸಚಿವ ಡಿ.ಸುಧಾಕರ್ ಕುಟುಂಬಸ್ಥರಿಗೆ ಧೈರ್ಯ ಹೇಳಿದ ಥಾವರ್ ಚಂದ್ ಗೆಹ್ಲೋಟ್​​

ಇನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಕೂಡ ​​ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದರು. ಚಿಕಿತ್ಸೆ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುಧಾಕರ್ ಕುಟುಂಬಸ್ಥರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧೈರ್ಯ ಹೇಳಿದ್ದಾರೆ. ಅದೇ ರೀತಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Mon, 27 April 26

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ