ಬೆಂಗಳೂರು: ಸರ್ಜಾಪುರ ಇನ್ಸ್ಪೆಕ್ಟರ್ನ್ನು ಅಮಾನತುಗೊಳಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜು ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ಮಾಡಿದ್ದಾರೆ.
ಆನೇಕಲ್: ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜು (Inspector Manju) ವಿರುದ್ಧ ದಲಿತ ಸಂಘರ್ಷ ಸಮಿತಿ (Dalita Sangharsh samiti) ಪ್ರತಿಭಟನೆ ಮಾಡಿದ್ದಾರೆ. ಭೂಮಿ ವಿಚಾರದಲ್ಲಿ ದಲಿತರ ಮೇಲೆ ಇನ್ಸ್ಪೆಕ್ಟರ್ ಮಂಜು ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ದಲಿತ ಸಂಘರ್ಷ ಸಮಿತಿ ಸರ್ಜಾಪುರ ಸರ್ಕಲ್ನಿಂದ ಪೊಲೀಸ್ ಠಾಣೆಯವರೆಗೆ ಮೆರವಣಿಗೆ ಮಾಡಿದ್ದಾರೆ. ಕೂಡಲೆ ದೌರ್ಜನ್ಯವೆಸಗಿರುವ ಇನ್ಸ್ಪೆಕ್ಟರ್ ಮಂಜು ಅವರನ್ನು ಅಮಾನತು ಮಾಡುವಂತೆ ಒತ್ತಾಯ ಮಾಡಿದ್ದಾರೆ. ಪ್ರತಿಭಟನಾ ಮೆರವಣಿಗೆಯಿಂದ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ಜಾಮ್ ಆಗಿದೆ.
ಕ್ರೇನ್ ಹರಿದು ವಿದ್ಯಾರ್ಥಿನಿ ಸಾವು: ರಸ್ತೆ ತಡೆದು ಪ್ರತಿಭಟನೆ
ಬೆಂಗಳೂರು: ಕ್ರೇನ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಗೇಟ್ ಬಳಿ ನಡೆದಿದೆ. ನೂರ್ ಫಿಜ ಮೃತ ವಿದ್ಯಾರ್ಥಿನಿ. (ನ. 2) ರಂದು ವಿದ್ಯಾರ್ಥಿನಿ ನೂರ್ ಫಿಜ ಕಾಲೇಜಿನಿಂದ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದಳು. ಈ ವೇಳೆ ಹಿಂಬದಿಯಿಂದ ಬಂದ ಕ್ರೇನ್ ವಿದ್ಯಾರ್ಥಿನಿ ಮೇಲೆ ಹರಿದಿದೆ.
ಇದರಿಂದ ತೀರ್ವ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ವೈಟ್ ಫೀಲ್ಡ್ ಖಾಸಗಿ ಅಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ನಿನ್ನೆ (ನ. 3) ರಂದು ಸಾವನ್ನಪ್ಪಿದ್ದಾಳೆ.
ಈ ಸಂಬಂಧ ವೈಟ್ ಫೀಲ್ಡ್ ಹೊಸಕೋಟೆ ರಸ್ತೆಯ ಕನ್ನಮಂಗಲ ಬಳಿ ಸ್ಥಳಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಮಂಗಲ ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ನ್ನು ಅಧಿಕಾರಿಗಳು ಈ ಹಿಂದೆ ತೆರವುಗೊಳಿಸಿದ್ದರು. ಇದರಿಂದಲೇ ಅಪಘಾತ ಸಂಭವಿಸಿದೆ ಎಂದು ಸ್ಥಳಿಯರು ಆರೋಪಿಸುತ್ತಿದ್ದಾರೆ. ಈಗ ರಸ್ತೆಯ ಪುಟ್ ಪಾತ್ ಒತ್ತುವರಿ ತೆರವುಗೊಳಿಸಿ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳಿಯರು ಆಗ್ರಹಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:37 pm, Fri, 4 November 22