ದಲಿತ ಯುವಕನ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆಯಾಗಿದೆ; ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್​ ಗಂಭೀರ ಆರೋಪ

ರಾಜ್ಯದಲ್ಲಿ ಗೂಂಡಾಗಿರಿ ತಾಂಡವಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ರೆ ಇದಕ್ಕೆ ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

ದಲಿತ ಯುವಕನ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆಯಾಗಿದೆ; ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್​ ಗಂಭೀರ ಆರೋಪ
ಕಾಂಗ್ರೆಸ್​, ಬಿಜೆಪಿ
Follow us
TV9 Web
| Updated By: ಆಯೇಷಾ ಬಾನು

Updated on: Jul 12, 2023 | 9:51 AM

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಆಡಳಿತ ಪಕ್ಷ, ವಿಪಕ್ಷಗಳು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತ ಕಾಲೆಳೆದುಕೊಳ್ಳುತ್ತಿವೆ. ದಲಿತ ಯುವಕನನ್ನ ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ(BJP Karnataka) ವಿರುದ್ಧ ಆಡಳಿತಾರೂಢ ಕಾಂಗ್ರೆಸ್(Congress) ಗಂಭೀರ ಆರೋಪ ಮಾಡಿದೆ. ಮತ್ತೊಂದೆಡೆ ಕಾಂಗ್ರೆಸ್ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಇದರ ನಡುವೆ ಕಾಂಗ್ರೆಸ್​​​​​​​​​​​ ಕೊಲೆಗಡುಕ ಸರ್ಕಾರ ಎಂದು JDS ಸಿಡಿದೆದ್ದಿದೆ.

ಕಾಂಗ್ರೆಸ್ ವಿರುದ್ದ ಹೋರಾಟ ನಡೆಸಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಗೂಂಡಾಗಿರಿ ತಾಂಡವಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ರೆ ಇದಕ್ಕೆ ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಸಮರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕ್ರೈಂ ರೇಟ್ ಜಾಸ್ತಿ ಆಗಿದೆ. ಕಲಬುರಗಿಯಲ್ಲಿ ರಕ್ಷಣೆ ಕೊಡುವ ಪೊಲೀಸ್ ಪೇದೆಯ ಕೊಲೆಯಾಗಿದೆ. ಚಿಕ್ಕೋಡಿಯಲ್ಲಿ ಜೈನ ಮುನಿಯ ಬರ್ಬರ ಹತ್ಯೆಯಾಗಿದೆ. ಮೈಸೂರಿನಲ್ಲಿ ಹಿಂದೂ ಯುವಕನ ಕಗ್ಗೊಲೆಯಾಗಿದೆ.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪಾಕಿಸ್ತಾನ ಧ್ವಜಗಳು ಸಹ ಹಾರಾಡಿವೆ ಎಂದು ಸ್ವತ ಯತ್ನಾಳ್‌ ನಿನ್ನೆ ಸದನದಲ್ಲಿ ಪ್ರಸ್ತಾಪ ಮಾಡಿದ್ದರು. ಹೀಗಾಗಿ ಕಾನೂನು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಬಿಜೆಪಿ ರಣತಂತ್ರ ಹೆಣೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ. ಈಗಾಗಲೇ ಬಿಜೆಪಿ ಸತ್ಯಶೋಧನಾ ತಂಡಗಳಿಂದ ವರದಿ ತಯಾರಾಗಿದೆ. ನಿನ್ನೆ ಎರಡು ಬಿಜೆಪಿ ತಂಡಗಳು ಕೊಲೆ ಮಾಡಿದ ಜಿಲ್ಲೆಗಳಿಗೆ ತೆರಳಿ ವರದಿ ಸಿದ್ದಪಡಿಸಿವೆ. ಜೈನಮುನಿ ಹಾಗೂ ಹಿಂದೂ ಯುವಕ ವೇಣುಗೋಪಾಲ್‌ ಮನೆಗೆ ತೆರಳಿ ಎರಡು ಕೊಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಇಂದು ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಜೊತೆಗೆ ಸದನದ ಹೊರಗೂ ಒಳಗೂ ಪ್ರತಿಭಟನೆ ಮಾಡಲು ತಯಾರಿ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್​, ಬಿಜೆಪಿ ಎರಡೂ ಸರ್ಕಾರದಲ್ಲೂ ಹಿಂದೂ ಕಾರ್ಯಕರ್ತರ ಹತ್ಯೆ ಆಗಿದೆ: ಪ್ರಮೋದ್​ ಮುತಾಲಿಕ್​

ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಸಂಚಾಲಕನ ಹತ್ಯೆ ವಿಚಾರಕ್ಕೆ ಸಂಬಂಧಿಸಿ ದಲಿತ ಯುವಕನನ್ನ ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು. ದಲಿತರೆಂದರೆ ಬಿಜೆಪಿ ನಾಯಕರಿಗೆ ಯಾಕಿಷ್ಟು ಅಸಹನೆ? ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ? ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಆರೋಪ ಮಾಡಿದೆ.

ಇನ್ನು ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕೋರ್ಟ್‌ನಲ್ಲಿ ವಜಾ ಆಗಿದೆ. ಹೀಗಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಅಂತ ಕಾಂಗ್ರೆಸ್​ ನಾಯಕರು ಇವತ್ತು ಮೌನ ಪ್ರತಿಭಟನೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕೈ ನಾಯಕರು ಪ್ರತಿಭಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ​​, ರಣದೀಪ್​ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಬಿಜೆಪಿ ಬಳಿಕ ಕಾಂಗ್ರೆಸ್​​ ವಿರುದ್ಧ ಜೆಡಿಎಸ್ ಸಮರ

ಕಾಂಗ್ರೆಸ್​​​​​​​​​​​ ಕೊಲೆಗಡುಕ ಸರ್ಕಾರ ಎಂದು JDS ಆರೋಪಿಸಿದೆ. ಆರೋಪಿಗಳು ಮಹದೇವಪ್ಪ ಪುತ್ರ ಸುನಿಲ್ ಸಹಚರರೇ. ವೇಣುಗೋಪಾಲ್​​ ಹತ್ಯೆ ಆರೋಪಿಗಳು ಕಾಂಗ್ರೆಸ್​​ ಪಕ್ಷದವರೇ ಎಂದು ಸಚಿವ ಮಹದೇವಪ್ಪ ಪುತ್ರ, ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ಟಿ.ನರಸೀಪುರದಲ್ಲಿ ಇಂತಹ ಹೀನಾಯ ಕೃತ್ಯ ಮರುಕಳಿಸದಿರಲಿ ಎಂದು ಕಾಂಗ್ರೆಸ್​​​ ವಿರುದ್ಧ ಜೆಡಿಎಸ್ ಕರುನಾಡು ಎಂಬ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್ ಮಾಡುವ ​​​​​​ ಮೂಲಕ ಸಮರ ಸಾರಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ