ಮೈತುಂಬ ಬಂಗಾರ ಹಾಕಿಕೊಂಡು, ಗ್ಯಾಂಗ್ ಕಟ್ಟಿಕೊಂಡು ಹವಾ ಮಾಡುತ್ತಿದ್ದ ದಾಸ ಅರೆಸ್ಟ್

ಮೈತುಂಬ ಬಂಗಾರ ಹಾಕಿಕೊಂಡು ತನ್ನ ಸುತ್ತಲೂ ಹುಡುಗರು ಇಟ್ಟುಕೊಂಡು ಫುಲ್​ ಹಮಾ ಮಾಡಿಕೊಂಡು ಓಡಾಡುತ್ತಿದ್ದ ದಾಸನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಯಾವಾಗಲು ಸೋಷಿಯಲ್​ ಮಿಡಿಯಾದಲ್ಲಿ ಹವಾ ಮಾಡುತ್ತಿದ್ದವನ ಬಂಧನಕ್ಕೆ ಕಾರಣ ಏನು..?

ಮೈತುಂಬ ಬಂಗಾರ ಹಾಕಿಕೊಂಡು, ಗ್ಯಾಂಗ್ ಕಟ್ಟಿಕೊಂಡು ಹವಾ ಮಾಡುತ್ತಿದ್ದ ದಾಸ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
Jagadish PB
| Updated By: ರಮೇಶ್ ಬಿ. ಜವಳಗೇರಾ

Updated on:Dec 08, 2023 | 8:56 AM

ಬೆಂಗಳೂರು, (ಡಿಸೆಂಬರ್ 08): ಸಾಮಾಜಿಕ ಜಾಲತಾಣಗಳಲ್ಲಿ (Social Media) ಹವಾ ಮಾಡಿದ್ದ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮೈತುಂಬ ಬಂಗಾರ ಹಾಕಿಕೊಂಡು ತನ್ನ ಸುತ್ತಲೂ ಹುಡುಗರು ಇಟ್ಟುಕೊಂಡು ಫುಲ್​ ಹಮಾ ಮಾಡಿಕೊಂಡು ಓಡಾಡುತ್ತಿದ್ದ ದಾಸನನ್ನು ಬೆಂಗಳೂರಿನ (Bengaluru)ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ದಾಸ ತನ್ನ ಸಹಚರರನ್ನು ಕಳುಹಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಬೇರೆಯವರ ಪ್ರಾಪರ್ಟಿ ಗಲಾಟೆ ನಡುವೆ ಯುವಕರ ಕಳುಹಿಸಿಕೊಟ್ಟ ಆರೋಪ ಹಿನ್ನಲೆ ಬಂಧನ.. ಮಹಿಳೆ ಹಾಗೂ ಓರ್ವ ವ್ಯಕ್ತಿ ನಡುವೆ ಜಾಗದ ಗಲಾಟೆ ಇತ್ತು. ಈ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ, ದಾಸನನ್ನು ಸಂಪರ್ಕಿಸಿ ಸಹಾಯಕೋರಿದ್ದ. ಅದರಂತೆ ದಾಸ ತನ್ನ ಹುಡುಗರ ಬಿಟ್ಟು ಮಹಿಳೆಗೆ ಧಮ್ಕಿ ಹಾಕಿಸಿದ್ದ. ಅಲ್ಲೇ ಹಲ್ಲೆ ಮಾಡಿಸಿದ್ದ ಎನ್ನುವ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಮಹಿಳೆ, ದಾಸನ ಯುವಕರು ಎಂದು ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಯಲಹಂಕ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು. ದೂರು ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ಪೊಲೀಸರು, ತನಿಖೆ ಕೈಗೊಂಡು ದಾಸನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು, ದಾಸನ ಪೂರ್ವ ಪರ ಹಾಗೂ ಇತರೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:40 am, Fri, 8 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ