AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara: ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ನಾಳೆಯಿಂದಲೇ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಅಲ್ಲದೆ ಇಂದು ಗಾಂಧಿ ಜಯಂತಿ ಇದ್ದು ಕೆಲವೆಡೆ ಇಂದೂ ಕೂಡ ರಜೆ ನೀಡಲಾಗಿದೆ.

Mysuru Dasara: ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ
ಶಾಲಾ ವಿದ್ಯಾರ್ಥಿಗಳು
Vinay Kashappanavar
| Edited By: |

Updated on:Oct 02, 2024 | 8:59 AM

Share

ಬೆಂಗಳೂರು, ಅ.02: ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ (Mysuru Dasara 2024) ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು (School Holiday), ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಇದನ್ನೂ ಓದಿ: Dasara 2024: ಮೈಸೂರಿನಲ್ಲಿ ಮಾತ್ರವಲ್ಲ, ಕರ್ನಾಟಕದ ಈ ಭಾಗದಲ್ಲೂ ದಸರಾ ಸಂಭ್ರಮ ಬಲು ಜೋರು

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:49 am, Wed, 2 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್