AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ, ವಾರಾಂತ್ಯ, ದಸರಾ ಹಿನ್ನಲೆ ಬೆಂಗಳೂರಿನಿಂದ ಬೀದರ್​​ಗೆ ವಿಶೇಷ ರೈಲು: 4 ಜಿಲ್ಲೆಗಳ ಜನರಿಗೆ ಅನುಕೂಲ

Dasara Special Train: ದಸರಾ ಹಬ್ಬ ಹಾಗೂ ವಾರಾಂತ್ಯದ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ಬೀದರ್​​ಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ. ಈ ವಿಶೇಷ ರೈಲು ಬೆಂಗಳೂರು-ಬೀದರ್ ನಡುವೆ ಎರಡು ಬಾರಿ ಓಡಾಟ ನಡೆಸಲಿದ್ದು, ಅವುಗಳ ಸಂಚಾರ ಸಮಯ ಮತ್ತು ನಿಲ್ದಾಣಗಳ ಕುರಿತ ಮಾಹಿತಿ ಇಲ್ಲಿದೆ.

ವಾರಾಂತ್ಯ, ವಾರಾಂತ್ಯ, ದಸರಾ ಹಿನ್ನಲೆ ಬೆಂಗಳೂರಿನಿಂದ ಬೀದರ್​​ಗೆ ವಿಶೇಷ ರೈಲು: 4 ಜಿಲ್ಲೆಗಳ ಜನರಿಗೆ ಅನುಕೂಲ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on:Oct 07, 2026 | 4:21 PM

Share

ಬೆಂಗಳೂರು, ಅಕ್ಟೋಬರ್​​ 07: ವಾರಾಂತ್ಯ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯ ಹಿನ್ನಲೆಯಲ್ಲಿ ಜನರ ಅನುಕೂಲ ಮತ್ತು ಸುಗಮ ಪ್ರಯಾಣಕ್ಕಾಗಿ ನೈಋತ್ಯ ರೈಲ್ವೆ (SWR) ಬೆಂಗಳೂರು-ಬೀದರ್ ಮಾರ್ಗಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ. ಬೆಂಗಳೂರು ಕಂಟೋನ್ಮೆಂಟ್-ಬೀದರ್ ಮಾರ್ಗದಲ್ಲಿ ಈ ವಿಶೇಷ ರೈಲು ಸಂಚಾರ ನಡೆಸಲಿದ್ದು, ಈ ರೂಟ್​​ನಲ್ಲಿ ಹೆಚ್ಚುವರಿ ಬೇಡಿಕೆ ಹಿನ್ನೆಲೆ ಎರಡು ಟ್ರಿಪ್​​ ಓಡಾಟ ನಡೆಸಲಿದೆ.

ವಿಶೇಷ ರೈಲಿನ ಸಂಚಾರ ಸಮಯ

ರೈಲು ಸಂಖ್ಯೆ 06589 ಬೆಂಗಳೂರು ಕಂಟೋನ್ಮೆಂಟ್-ಬೀದರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 9 ಮತ್ತು 16ರಂದು ರಾತ್ರಿ 11 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಮರುದಿನ ಮಧ್ಯಾಹ್ನ 2.15ಕ್ಕೆ ಬೀದರ್ ತಲುಪಲಿದೆ. ಹಿಂತಿರುಗುವ ಮಾರ್ಗದಲ್ಲಿ ರೈಲು ಸಂಖ್ಯೆ 06590 ಬೀದರ್-ಬೆಂಗಳೂರು ಕಂಟೋನ್ಮೆಂಟ್ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 10 ಮತ್ತು 17ರಂದು ಸಂಜೆ 4 ಗಂಟೆಗೆ ಬೀದರ್‌ನಿಂದ ಹೊರಟು, ಮರುದಿನ ಬೆಳಗ್ಗೆ 9.45ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

LIVE TV

ಇದನ್ನೂ ಓದಿ: ಬೆಂಗಳೂರು – ಬೆಳಗಾವಿ ನಡುವೆ ವಿಶೇಷ ರೈಲು: ಆರೇಳು ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲ

ವಿಶೇಷ ರೈಲಿಗೆ ಎಲ್ಲೆಲ್ಲಿ ಇರಲಿದೆ ನಿಲುಗಡೆ?

ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂಟಕಲ್, ಅದೋನಿ, ಮಂತ್ರಾಲಯಂ ರಸ್ತೆ, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ ಮತ್ತು ಹುಮ್ನಾಬಾದ್ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಿರಲಿದೆ. ಈ ರೈಲಿನಲ್ಲಿ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, ಮೂರು ಜನರಲ್ ಸೆಕೆಂಡ್ ಕ್ಲಾಸ್ ಸೇರಿದಂತೆ ಒಟ್ಟು 19 ಬೋಗಿಗಳಿರಲಿವೆ ಎಂದು ನೈಋತ್ವ ರೈಲ್ವೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:12 pm, Wed, 7 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!