ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ ವಿಚಾರ: ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆ ಅಸ್ತು, ಶಿಫಾರಸುಗಳು ಹೈಕೋರ್ಟ್​ಗೆ

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ವಿಚಾರವಾಗಿ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ವರದಿಯಲ್ಲಿನ ಶಿಫಾರಸುಗಳನ್ನು ಹೈಕೋರ್ಟ್​ಗೆ ಸಲ್ಲಿಸಲು ನಿರ್ಧರಿಸಲಾಗಿದೆ.

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯ ವಿಚಾರ: ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆ ಅಸ್ತು, ಶಿಫಾರಸುಗಳು ಹೈಕೋರ್ಟ್​ಗೆ
ದತ್ತ ಪೀಠ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 01, 2022 | 8:16 PM

ಬೆಂಗಳೂರು: ದತ್ತ ಪೀಠದಲ್ಲಿ (Datta peetha) ಪೂಜಾ ಕೈಂಕರ್ಯ ನೆರವೇರಿಸುವ ವಿಚಾರವಾಗಿ ಜೆ.ಸಿ.ಮಾಧುಸ್ವಾಮಿ (JC Madhuswamy) ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಂಪುಟ ಸಭೆಯಲ್ಲಿ (Cabinet Meeting) ಅನುಮೋದನೆ ದೊರೆತಿದ್ದು, ವರದಿಯಲ್ಲಿನ ಶಿಫಾರಸುಗಳನ್ನು ಹೈಕೋರ್ಟ್​ಗೆ  (High Court) ಸಲ್ಲಿಸಲು ನಿರ್ಧರಿಸಲಾಗಿದೆ. ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಹಿಂದೂ ಸಂಪ್ರದಾಯದ ಪೂಜಾ ಕೈಂಕರ್ಯಗಳನ್ನು ನೆರವೇರಿಸಬೇಕು ಎಂದು ಹೇಳಿದೆ. ರಾಜ್ಯ ಸರ್ಕಾರ 2018ರ ಮಾರ್ಚ್ 19ರಂದು ಮುಸ್ಲಿಂ (Muslim) ಸಮುದಾಯದ ಮುಜಾವರ್ ನೇಮಿಸಿತ್ತು. ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಶ್ರೀಗುರು ದತ್ತಾತ್ರೇಯ ದೇವಸ್ಥಾನ ಸಂವರ್ಧನಾ ಸಮಿತಿ ಅರ್ಜಿ ಸಲ್ಲಿಸಿತ್ತು.

ಇದನ್ನು ಓದಿ:  ಅಕ್ರಮ ಆಸ್ತಿಗಳಿಕೆ: ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ಐಯ್ಯರ್‌ಗೆ 4 ವರ್ಷ ಜೈಲುಶಿಕ್ಷೆ, ಜೊತೆಗೆ 1 ಕೋಟಿ ರೂಪಾಯಿ ದಂಡ

ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪಾಲಿಸಲು ಸಚಿವರ ಸಮಿತಿ ರಚನೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಸರ್ಕಾರ ಮೂವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿತ್ತು. ಈಗ ಉಪಸಮಿತಿ ಸಲ್ಲಿಸಿದ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಇದನ್ನು ಓದಿ:  ಆಗಸ್ಟ್ 10 -22 ರವರೆಗೆ ಹಾಸನದಲ್ಲಿ ನಡೆಯಲಿದೆ ಅಗ್ನಿಪಥ್ ನೇಮಕಾತಿ: ಇದು 14 ಜಿಲ್ಲೆಗಳಿಗೆ ಅನ್ವಯ

ವರದಿಯಲ್ಲಿನ ಶಿಫಾರಸುಗಳು: – ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳ ದಿನಚರಿ ರೂಪಿಸಲು ವ್ಯವಸ್ಥಾಪನಾ ಸಮಿತಿಗೆ ಜವಾಬ್ದಾರಿ – ದರ್ಗಾ ಪೂಜೆ ಹಾಗೂ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಎರಡು ಸಮುದಾಯಕ್ಕೆ ಅವಕಾಶ – ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿ ಜವಾಬ್ದಾರಿ – ವ್ಯವಸ್ಥಾಪನಾ ಸಮಿತಿಯಿಂದ ಊರೂಸ್ ಹಾಗೂ ಪೂಜಾ ಪುನಸ್ಕಾರಗಳ ಮೇಲ್ವಿಚಾರಣೆ – ಪೂಜೆ ಮಾಡಲು ಅರ್ಚಕರು ಹಾಗೂ ಮುಜಾವರರಿಗೆ ಅವಕಾಶ

Published On - 8:14 pm, Fri, 1 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು