ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಬಿಬಿಎಂಪಿ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ಬಿಬಿಎಂಪಿ (BBMP) ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ 2019 ರಿಂದ 2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಡಿಎ, ಬಿಬಿಎಂಪಿ ಅಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು ಹೆಚ್ಡಿ ಕುಮಾರಸ್ವಾಮಿ ಕೇವಲ ಮಾಧ್ಯಮಗಳ ಜೊತೆ ಮಾತನಾಡಿದರೆ ಸಾಲದು. ಈಗ ಪ್ರಧಾನ ಮಂತ್ರಿಗಳವರೆಗೂ ಹೋಗಿದ್ದಾರೆ. ಅದಕ್ಕೆ ತಕ್ಕಂತೆ ನಾನು ಉತ್ತರ ಕೊಡಬೇಕು. ನಾನು ಅದಕ್ಕೆ ತಕ್ಕಂತೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಅಯಾಸಗೊಂಡಿದ್ದ ಡಿಕೆ ಶಿವಕುಮಾರ್ರನ್ನು ಮತ್ತಷ್ಟು ದಣಿಸಿದ ಪುಲಿಕೇಶಿನಗರ ಶಾಸಕ ಮತ್ತು ಕಾರ್ಯಕರ್ತರು!
ಸಚಿವರು, ಶಾಸಕರ ಜೊತೆ ಸಿಎಂ, ಡಿಸಿಎಂ ಸಭೆ ವಿಚಾರವಾಗಿ ಮಾತನಾಡಿದ ಅವರು ನಾಳೆ ಸಿಎಂ, ನಾನು ಕೆಲ ಜಿಲ್ಲೆಗಳ ನಾಯಕರ ಸಭೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಗೆ ನಮ್ಮ ಕೆಲಸ ಪ್ರಾರಂಭ ಆಗಬೇಕಿದೆ. ಮಧ್ಯಾಹ್ನ ಅಲ್ಪಸಂಖ್ಯಾತ ಮುಖಂಡರ ಜತೆ ಸಭೆ ಮಾಡುತ್ತಿದ್ದೇವೆ. ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ