ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ ಬಿಬಿಎಂಪಿ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಡಿಸಿಎಂ ಡಿಕೆ ಶಿವಕುಮಾರ್​
Edited By: ವಿವೇಕ ಬಿರಾದಾರ

Updated on: Aug 06, 2023 | 11:49 AM

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ (DK Shivakumar) ಬಿಬಿಎಂಪಿ (BBMP) ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ 2019 ರಿಂದ 2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಡಿಎ, ಬಿಬಿಎಂಪಿ ಅಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು ಹೆಚ್​​ಡಿ ಕುಮಾರಸ್ವಾಮಿ ಕೇವಲ ಮಾಧ್ಯಮಗಳ ಜೊತೆ ಮಾತನಾಡಿದರೆ ಸಾಲದು. ಈಗ ಪ್ರಧಾನ ಮಂತ್ರಿಗಳವರೆಗೂ ಹೋಗಿದ್ದಾರೆ. ಅದಕ್ಕೆ ತಕ್ಕಂತೆ ನಾನು ಉತ್ತರ ಕೊಡಬೇಕು. ನಾನು ಅದಕ್ಕೆ ತಕ್ಕಂತೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅಯಾಸಗೊಂಡಿದ್ದ ಡಿಕೆ ಶಿವಕುಮಾರ್​ರನ್ನು ಮತ್ತಷ್ಟು ದಣಿಸಿದ ಪುಲಿಕೇಶಿನಗರ ಶಾಸಕ ಮತ್ತು ಕಾರ್ಯಕರ್ತರು!

ಸಚಿವರು, ಶಾಸಕರ ಜೊತೆ ಸಿಎಂ, ಡಿಸಿಎಂ ಸಭೆ ವಿಚಾರವಾಗಿ ಮಾತನಾಡಿದ ಅವರು ನಾಳೆ ಸಿಎಂ, ನಾನು ಕೆಲ ಜಿಲ್ಲೆಗಳ ನಾಯಕರ ಸಭೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಗೆ ನಮ್ಮ ಕೆಲಸ ಪ್ರಾರಂಭ ಆಗಬೇಕಿದೆ. ಮಧ್ಯಾಹ್ನ ಅಲ್ಪಸಂಖ್ಯಾತ ಮುಖಂಡರ ಜತೆ ಸಭೆ ಮಾಡುತ್ತಿದ್ದೇವೆ. ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us