AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ:ಡಿಕೆ ಶಿವಕುಮಾರ್

30 - 40 ಸೈಟ್ ಇರುವವರಿಗೆ, ಬಡವರಿಗೆ ರಿಯಾಯಿತಿ ಕೊಡಬೇಕೆಂಬ ಚಿಂತನೆ ಇದೆ. ಒಂದಷ್ಟು ರಿಯಾಯಿತಿ ಕೊಟ್ಟು ನಿಯಮದಲ್ಲಿ ತುಸು ಸಡಿಲ ಮಾಡಬೇಕೆಂದುಕೊಂಡಿದ್ದೇವೆ. ಬಡವರಿಗೆ ಸಮಸ್ಯೆಯಾಗದಂತೆ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಯಾರೂ ಕೂಡ ಟ್ಯಾಕ್ಸ್ ಬಗ್ಗೆ ಗಾಬರಿಯಾಗಬೇಡಿ . ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡಲು ಯತ್ನಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 16, 2024 | 4:32 PM

ಬೆಂಗಳೂರು, ಜನವರಿ 16: ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30″ x 40″ ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar)  ತಿಳಿಸಿದರು.

ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಮಂಗಳವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟೀಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲಾ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಜನವರಿ 19 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ: ರೋಡ್​ ಶೋ ಸಾಧ್ಯತೆ

2020 ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕುರಿತ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಈಗ ಆ ಕಾನೂನಿಗೆ ತಿದ್ದುಪಡಿ ತರಬೇಕಿದೆ. ಕೆಲ ದಿನಗಳಲ್ಲಿ ಈ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ನಮ್ಮ ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡಲಾಗುವುದು ಎಂದು ತಿಳಿಸಿದರು.

ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಯಾರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೋ, ಅವರಿಂದ ಅಷ್ಟು ಕಟ್ಟಿಸಿಕೊಳ್ಳಿ. ಯಾರಾದರೂ ಹೆಚ್ಚುವರಿ ತೆರಿಗೆ ಪಾವತಿ ಮಾಡಿದ್ದರೆ ಮುಂದಿನ ವರ್ಷ ಅದನ್ನು ಸರಿದೂಗಿಸಲು ಸೂಚಿಸಿದ್ದೇನೆ ಎಂದರು.

ಎಲ್ಲರೂ ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಬರಬೇಕು. ಜನರಿಗೂ ಅನುಕೂಲ ಆಗಬೇಕು, ಪಾಲಿಕೆಗೂ ಆದಾಯ ಬರಬೇಕು. ನಿಮ್ಮ ತೆರಿಗೆ ಹಣವಿಲ್ಲದೆ ಬೆಂಗಳೂರು ಅಭಿವೃದ್ಧಿ ಅಸಾಧ್ಯ. ನಾವು ಇಷ್ಟು ದಿನ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ ಅಳವಡಿಸಿಕೊಂಡು ಬಂದಿದ್ದೇವೆ. ಆದರೆ ಈ ವ್ಯವಸ್ಥೆಯಲ್ಲಿ ಜನ ತಮ್ಮ ಆಸ್ತಿಗೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಮೂರು ಅಂತಸ್ತಿನ ಮನೆ ಇದ್ದರೆ ಒಂದು ಅಂತಸ್ತು ಎಂದು ತೋರಿಸಿ ಕಡಿಮೆ ತೆರಿಗೆ ಕಟ್ಟುತ್ತಿದ್ದಾರೆ. ನಮ್ಮ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ.

ಅಧಿಕಾರಿಗಳು ನಿಮಗೆ ಸಹಕಾರ ನೀಡದ ಕಾರಣ ನೀವು ನಮ್ಮ ಬಳಿ ಬರುತ್ತೀರಿ. ನಿಮ್ಮ ವೈಯಕ್ತಿಕ ಸಮಸ್ಯೆ, ಏರಿಯಾ ಸಮಸ್ಯೆ ಹೊತ್ತು ತಂದಿದ್ದೀರಿ. ಎಲ್ಲರ ಸಮಸ್ಯೆಯನ್ನು ಆಲಿಸುತ್ತೇವೆ. ನಿಮ್ಮ ಅಹವಾಲುಗಳನ್ನು ನೋಂದಣಿ ಮಾಡಿಕೊಳ್ಳಿ. ನಿಮ್ಮ ಹೆಸರು, ಸಮಸ್ಯೆ ಹಾಗೂ ದೂರವಾಣಿ ಸಂಖ್ಯೆ ನಮೂದಿಸಿ. ನಿಮ್ಮ ಅಹವಾಲು ಬಗೆಹರಿಸಲು ಪ್ರತ್ಯೇಕ ತಂಡ ರಚಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ವಿಂಗಡಿಸಿ, ಅವುಗಳನ್ನು ಕಾನೂನು ವ್ಯಾಪ್ತಿಯಲ್ಲಿ ಬಗೆಹರಿಸುತ್ತೇವೆ. ನಿಮ್ಮ ದೂರವಾಣಿ ಸಂಖ್ಯೆಗೆ ಪಾಲಿಕೆ ಅಧಿಕಾರಿಗಳು ಸಂಪರ್ಕಿಸುತ್ತಾರೆ ಎಂದು ಹೇಳಿದರು.

ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. 2 ಸಾವಿರ ಕೋಟಿ ರೂ. ಮೌಲ್ಯದ ವೈಟ್ ಟ್ಯಾಪಿಂಗ್ ರಸ್ತೆಗಳ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನಲ್ಲಿ ನಿತ್ಯ 55 ಲಕ್ಷ ವಾಹನ ಸಂಚಾರ ಮಾಡುತ್ತಿವೆ ಎಂದು ಮಾಹಿತಿ ನೀಡಿದರು.

ತಳ್ಳುವ ಗಾಡಿಯಲ್ಲಿ ಮಾತ್ರ ಬೀದಿ ವ್ಯಾಪಾರಕ್ಕೆ ಅವಕಾಶ:

ಶಾಸಕ ಅಶ್ವತ್ ನಾರಾಯಣ ಅವರು ಆಸ್ತಿ ತೆರಿಗೆ ಮತ್ತು ಪಾದಚಾರಿ ಮಾರ್ಗ ವಿಚಾರವಾಗಿ ಗಮನ ಸೆಳೆದರು. ಈ ವಿಚಾರವಾಗಿ ಹೈಕೋರ್ಟ್ ಆದೇಶ ಕೂಡ ಬಂದಿದೆ. ಆ ಆದೇಶ ಪಾಲನೆ ಆಗದಿದ್ದರೆ ಪಾಲಿಕೆ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ. ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಎಂದು ಹೇಳುವುದಿಲ್ಲ. ನೀವು ನೋಂದಣಿ ಮಾಡಿಸಿಕೊಂಡು, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು. ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕಿಕೊಂಡರೆ ಜನ ಸಾಮಾನ್ಯರು ಎಲ್ಲಿ ಓಡಾಡಬೇಕು? ಎಂದು ಪ್ರಶ್ನಿಸಿದರು.

ಅನಧಿಕೃತ ಫ್ಲೆಕ್ಸ್ ವಿರುದ್ಧ ಪ್ರಕರಣ

ನಾವು ಅನಧಿಕೃತ ಜಾಹೀರಾತು ಫ್ಲೆಕ್ಸ್ ಗಳ ನಿಷೇಧ ಮಾಡಿದ್ದೇವೆ. ನನ್ನ ಮನೆ ಬಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಹಬ್ಬ, ಹೊಸವರ್ಷದ ಶುಭಾಶಯಗಳ ಫ್ಲೆಕ್ಸ್ ಹಾಕಲಾಗಿದೆ. ಇವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಯಾವುದೇ ಪಕ್ಷದವರಾಗಿರಲಿ, ನನ್ನ ಫೋಟೋ ಹಾಕಿರಲಿ ಅಥವಾ ಬೇರೆಯವರ ಫೋಟೋ ಹಾಕಿರಲಿ ಎಲ್ಲ ಅನಧಿಕೃತ ಫ್ಲೆಕ್ಸ್ ತೆರವು ಮಾಡಬೇಕು ಎಂದು ಸೂಚಿಸಿದ್ದೇನೆ. ಮುಂದೆ ಇದನ್ನು ನಿಯಂತ್ರಿಸಲು ಹೊಸ ಜಾಹೀರಾತು ನೀತಿ ತರಲಾಗುವುದು ಎಂದರು.

ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಇದರ ಹಿಂದೆ ಮಾಫಿಯಾ ಇದೆ. ಇದನ್ನು ನಾವು ಹತೋಟಿಗೆ ತರಬೇಕಿದೆ. ನೀವು ನಿಮ್ಮ ಮನೆ ಕಸವನ್ನು ಚರಂಡಿಯಲ್ಲಿ ಹಾಕಿದರೆ ಆಗುವುದಿಲ್ಲ. ನಮ್ಮ ನಗರದಲ್ಲಿ ಕಸ ವಿಲೇವಾರಿ ಹಾಗು ಸಂಚಾರ ದಟ್ಟಣೆ ನಿಯಂತ್ರಣ ಮಾಡಿದರೆ ಎಲ್ಲವೂ ಹತೋಟಿಗೆ ಬರುತ್ತದೆ ಎಂದು ವಿವರಿಸಿದರು.

ಮಾಧ್ಯಮ ಪ್ರತಿಕ್ರಿಯೆ

ಹಿಂದಿನ ಸರ್ಕಾರ ಬಡವರಿಗೆ 1 ಲಕ್ಷ ಮನೆ ಕಟ್ಟಿಕೊಡುವುದಾಗಿ ಹೇಳಿದ್ದು, ಯಾರಿಗೂ ಮನೆ ಸಿಕ್ಕಿಲ್ಲ. ಈ ವಿಚಾರವಾಗಿ ಅನೇಕರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ವಸತಿ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕೆಲವರು ಹಣ ಕಟ್ಟಿದ್ದು, ಮತ್ತೆ ಕೆಲವರು ಹಣ ಕಟ್ಟದೆ ವಿನಾಯಿತಿ ಕೇಳುತ್ತಿದ್ದಾರೆ. ಬಡವರಿಗೆ ವಸತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಕಾರ್ಯಕ್ರಮದಲ್ಲಿ ವಸತಿ ಬಗ್ಗೆ ಬಂದಿರುವ ಅರ್ಜಿಗಳನ್ನು ಲೆಕ್ಕ ಹಾಕಿ ಅರ್ಹರ ಬಗ್ಗೆ ಪರಿಶೀಲನೆ ಮಾಡಲಾಗುವುದು. ಗೃಹಲಕ್ಷ್ಮಿ, ಪಿಂಚಣಿ, ಖಾತೆ ವಿಚಾರವಾಗಿ ಅನೇಕರು ಮನವಿ ಸಲ್ಲಿಸುತ್ತಿದ್ದು, ಇಂತಹ ಅರ್ಜಿಗಳ ಬಗ್ಗೆ ಸ್ಥಳದಲ್ಲೇ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಕೇಳಿದಾಗ, “ಅವರ ಪಕ್ಷ, ಅವರ ಕರ್ತವ್ಯ. ಅವರು ಏನಾದರೂ ಮಾಡಿಕೊಳ್ಳಲಿ. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದವರು, ಈಗ ಅವರೇ ಗ್ಯಾರಂಟಿ ಪ್ರಚಾರ ಪಡೆಯುತ್ತಿದ್ದಾರೆ. ಅಧಿಕಾರಿಗಳ ಅಮಾನತು ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮ ಸಂಪೂರ್ಣವಾಗಿ ಮುಗಿದ ನಂತರ ಎಲ್ಲಾ ಪಟ್ಟಿ ಬಿಡುಗಡೆ ಮಾಡುತ್ತೇನೆ” ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Tue, 16 January 24

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ