AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಆದೇಶದಂತೆಯೇ ಬಿಬಿಎಂಪಿ ಚುನಾವಣೆ; ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಭೆ ನಡೆಸಿದ ಬಳಿಕ ಡಿಕೆ ಶಿವಕುಮಾರ್

ಕರ್ನಾಟಕ ಹೈಕೋರ್ಟ್ ಆದೇಶದ ಪ್ರಕಾರ ಬಿಬಿಎಂಪಿ ಚುನಾವಣೆ ನಡೆಸಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಹೈಕೋರ್ಟ್​ ಆದೇಶದಂತೆಯೇ ಬಿಬಿಎಂಪಿ ಚುನಾವಣೆ; ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಭೆ ನಡೆಸಿದ ಬಳಿಕ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Anil Kalkere
| Edited By: |

Updated on: Jul 03, 2023 | 10:11 PM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಆದೇಶದ ಪ್ರಕಾರ ಬಿಬಿಎಂಪಿ ಚುನಾವಣೆ (BBMP Elections) ನಡೆಸಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸೋಮವಾರ ಸಂಜೆ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಬೆಂಗಳೂರಿನ ಬಿಎಂಆರ್​ಡಿಎ ಕಚೇರಿಯಲ್ಲಿ ಶಾಸಕರು, ಅಧಿಕಾರಿಗಳು ಮತ್ತು ಸಚಿವರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನ್ಯಾಯಾಲಯದ ಆದೇಶದಂತೆಯೇ ಬಿಬಿಎಂಪಿ ಚುನಾವಣೆ ನಡೆಸಲಿದ್ದೇವೆ. ಗ್ಯಾರಂಟಿ ಜಾರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಯೋಜನೆಗಳಿಗೆ ಬಿಜೆಪಿಯವರು ಒಳ್ಳೆ ಪ್ರಚಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಡಿಕೆ ಶಿವಕುಮಾರ್ ನಡೆಸಿದ ಸಭೆಯಲ್ಲಿ ಬೆಂಗಳೂರು ಶಾಸಕರು, ಅಧಿಕಾರಿಗಳು, ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಸಂಸದ ಡಿ.ಕೆ.ಸುರೇಶ್, ಶಾಸಕ ರಿಜ್ವಾನ್ ಅರ್ಷದ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಈ ಹಿಂದೆಯೂ ಡಿಕೆ ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಹಲವು ಸಭೆಗಳನ್ನು ನಡೆಸಿದ್ದು, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಮಳೆ; ಬನ್ನೇರುಘಟ್ಟ ಪಾರ್ಕ್​ನಲ್ಲಿ ಪ್ರವಾಸಿಗರ ಪರದಾಟ

ಬಿಬಿಎಂಪಿ ವಾರ್ಡ್​​ಗಳ ಪುನರ್ ವಿಂಗಡಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಆ ನಂತರ ಚುನಾವಣೆ ನಡೆಯಲಿದೆ. ವಾರ್ಡ್ ಪುನರ್ ವಿಂಗಡಣೆ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ಆದೇಶ ನೀಡಿದ್ದು, ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದೆ. ಅದರಂತೆ ವಾರ್ಡ್ ಪುನರ್ ವಿಂಗಡಣೆ ಕುರಿತು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ಸರ್ಕಾರ ರಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ