ಬೆಂಗಳೂರಿನಲ್ಲಿ ಪಾರ್ಕ್‌ಗಳ ಸಮಯ ವಿಸ್ತರಣೆ, ಇಲ್ಲಿದೆ ಹೊಸ ಟೈಮಿಂಗ್ಸ್

|

Updated on: Jun 11, 2024 | 9:01 PM

ನಾಗರಿಕರ ಒತ್ತಾಯದಂತೆ ಬಿಬಿಎಂಪಿ (BBMP) ವ್ಯಾಪ್ತಿಯ ಎಲ್ಲಾ ಪಾರ್ಕ್ ತೆರೆಯುವ ಹಾಗೂ ಮುಚ್ಚುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ಮಾಹಿತಿ ನೀಡಿದ್ದಾರೆ. ಹಾಗಾದ್ರೆ, ಬೆಂಗಳೂರಿನ ಬಿಬಿಎಂಪಿ ಪಾರ್ಕ್​ಗಳ ಹೊಸ ಟೈಮಿಂಗ್ಸ್​ ಏನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಪಾರ್ಕ್‌ಗಳ ಸಮಯ ವಿಸ್ತರಣೆ, ಇಲ್ಲಿದೆ ಹೊಸ ಟೈಮಿಂಗ್ಸ್
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, (ಜೂನ್ 11): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಸರಹದ್ದಿನಲ್ಲಿರುವ ಎಲ್ಲಾ ಪಾರ್ಕ್ ಗಳ (parks) ಸಮಯ ವಿಸ್ತರಣೆ ಮಾಡಲಾಗಿದೆ. ಇನ್ನು ಮುಂದೆ ಪ್ರತಿದಿನ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಡಿಸಿಎಂ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ನಿರ್ವಹಣೆ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಇಂದುಶ (ಜೂನ್ 11) ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು. ಈ ವೇಳೆ ಪಾರ್ಕ್ ಗಳ ಸಮಯ ವಿಸ್ತರಣೆ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Bangalore Metro Recruitment 2024: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಹುದ್ದೆಗಳು, ಅರ್ಹತಾ ಮಾನದಂಡ, ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ

ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್‍ಗಳು ತೆರೆದಿರುತ್ತಿತ್ತು. ಬಳಿಕ ಮಧ್ಯಾಹ್ನ 1:30ರಿಂದ ರಾತ್ರಿ 8ರ ತನಕ ಪಾರ್ಕ್‍ಗಳನ್ನು ತೆರೆಯಲು ಅವಕಾಶ ಇತ್ತು. ಈಗ ನಾಗರಿಕರ ಒತ್ತಾಯದ ಮೇರೆಗೆ ಪಾರ್ಕ್ ತೆರೆಯುವ ಸಮಯ ಹೆಚ್ಚಳ ಮಾಡಿದ್ದೇವೆ. ಪಾರ್ಕ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇರುತ್ತೆ, ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ಆದ್ರೆ, ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್‍ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲಾ ಜವಾಬ್ದಾರಿಯುತ ನಾಗರಿಕರು ನಮ್ಮ ಉದ್ಯಾನವನಗಳನ್ನು ಅಡ್ಡುಕಟ್ಟಾಗಿ ಇಟ್ಟುಕೊಳ್ಳಲು ಬಿಬಿಎಂಪಿಯೊಂದಿಗೆ ಸಹಕರಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಎಲ್ಲಾ ಪಾರ್ಕ್‌ಗಳು ಬಿಬಿಎಂಪಿ ಅಡಿಯಲ್ಲಿ ಬಂದರೂ ಕೂಡ, ನಗರದ ಎರಡು ದೊಡ್ಡ ಉದ್ಯಾನವನಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ರಾಜ್ಯ ತೋಟಗಾರಿಕಾ ಇಲಾಖೆಯ ಅಡಿಯಲ್ಲಿ ಬರುತ್ತವೆ. ಹೀಗಾಗಿ ಎರಡು ಕಡೆ ಅದರದ್ದೇ ಆದ ಪ್ರತ್ಯೇಕ ಸಮಯವನ್ನು ಹೊಂದಿವೆ ಎಂದು ತಿಳಿಸಿದರು.

ಬೆಂಗಳೂರು 1200 ಕ್ಕೂ ಹೆಚ್ಚು ಉದ್ಯಾನವನಗಳನ್ನು ಹೊಂದಿದೆ. ಇದು ದೇಶದಲ್ಲೇ ಅತಿ ಹೆಚ್ಚು ಉದ್ಯಾನವನಗಳನ್ನು ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ. ಪ್ರತಿಯೊಂದು ವಾರ್ಡ್‌ನಲ್ಲಿಯೂ ಉದ್ಯಾನವನವಿದೆ. ನಾಗರಿಕರು ಈ ಸ್ಥಳಗಳನ್ನು ವಾಕಿಂಗ್, ಜಾಗಿಂಗ್, ವ್ಯಾಯಾಮ, ಸಾಮಾಜಿಕವಾಗಿ ಮತ್ತು ಮುಖ್ಯವಾಗಿ ಆಶ್ರಯಕ್ಕಾಗಿ ಬಳಸುತ್ತಾರೆ ಎಂದರು.

ಬಿಬಿಎಂಪಿ ವ್ಯಾಪ್ತಿಯ ಒಟ್ಟು 1,200 ಸಾರ್ವಜನಿಕ ಉದ್ಯಾನವನಗಳು ಇನ್ನು ಮುಂದೆ ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಮೊದಲು, ಉದ್ಯಾನವನಗಳು ಪ್ರತಿದಿನ ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತಿದ್ದವು. ನಿರ್ವಹಣೆ ಕಾರ್ಯವನ್ನು ಕೈಗೊಳ್ಳುವಾಗ ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಮುಚ್ಚಿರುತ್ತಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ