ಜ.3ರಿಂದ ಡಿಕೆ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ಜ.3ರಿಂದ ಡಿಕೆ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ
ಡಿಕೆ ಶಿವಕುಮಾರ್​ ಜನಸ್ಪಂದನಾ ಕಾರ್ಯಕ್ರಮ
Follow us
Vinayak Hanamant Gurav
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 29, 2023 | 9:25 PM

ಬೆಂಗಳೂರು, ಡಿ.29: ಜ.3 ರಿಂದ ಬೆಂಗಳೂರಿನಲ್ಲಿ ಜನಸ್ಪಂದನಾ(jana spandana) ಕಾರ್ಯಕ್ರಮ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivakumar) ಹೇಳಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು ‘ಸುಮಾರು 10 ದಿನ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಾನು, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದೇವೆ ಎಂದರು.

ಜನರು ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತೆ. ಇನ್ನು ಈ ಜನಸ್ಪಂದನಾ ಕಾರ್ಯಕ್ರಮಗಳು ಬಹುತೇಕ ಮೈದಾನಗಳಲ್ಲಿ  ನಡೆಯಲಿದೆ ಎಂದರು.

ಇದನ್ನೂ ಓದಿ:Siddaramaiah: ಒತ್ತವರಿ ಮಾಡಿಕೊಂಡ ವೃದ್ಧೆಯ ಜಮೀನು ಬಿಡಿಸಿಕೊಡುವಂತೆ ರಾಮನಗರ ಡಿಸಿಗೆ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ದೂರು ನೀಡಿದ್ರೂ ಪರಿಗಣಿಸಲಾಗುವುದು

ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ದೂರು ನೀಡಿದ್ರೂ ಪರಿಗಣಿಸ್ತೇವೆ, ಪೊಲೀಸ್, ಕಂದಾಯ, ಬೆಸ್ಕಾಂ, BWSSB ಸೇರಿ ಎಲ್ಲಾ ಇಲಾಖೆ ಸಂಬಂಧಿತ ದೂರು ಸ್ವೀಕರಿಸಲಾಗುತ್ತದೆ. ಜೊತೆಗೆ ಅಲ್ಲಿಯೇ  ಪರಿಹಾರ ನೀಡುತ್ತೇವೆ ಎಂದಿದ್ದಾರೆ. ನಂತರ ಬೆಂಗಳೂರಿನಲ್ಲಿ ತೆರಿಗೆ ಕಟ್ಟದಿದ್ರೆ, ಬಿಡಲ್ಲ. ಎಲ್ಲಾ ಕಡೆ ಬೀಗ ಹಾಕುತ್ತೇವೆ. ಟ್ಯಾಕ್ಸ್‌ನಿಂದಲೇ ಹಣ ಸಂಗ್ರಹ ಆಗುವುದು. ಅಭಿವೃದ್ಧಿಗೆ ಟ್ಯಾಕ್ಸ್ ಮೂಲ, ಯಾವುದೇ ಟ್ಯಾಕ್ಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಜೊತೆಗೆ ಕನ್ನಡದ ಪರ ಹೋರಾಟಗಳಿಗೆ ನಾವು ಸ್ಪಂದಿಸುತ್ತೇವೆ, ಆದ್ರೆ ಯಾರದೊ ಆಸ್ತಿಪಾಸ್ತಿ ಹಾಳು ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ