AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಾಲೇಲಿ ಮಕ್ಕಳಿಂದ ಟಾಯ್ಲೆಟ್‌ ಕ್ಲೀನಿಂಗ್‌: ಗಂಭೀರವಾಗಿ ಪರಿಗಣಿಸಿದ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯವನ್ನು ಕ್ಲೀನ್ ಮಾಡಿಸಿದ್ದು, ಈ ಪ್ರಕರಣವನ್ನು ಡಿಸಿಎಂ ಡಿಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನಲೆಯಲ್ಲಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟಬುತ್ತಿ.

ಬೆಂಗಳೂರು ಶಾಲೇಲಿ ಮಕ್ಕಳಿಂದ ಟಾಯ್ಲೆಟ್‌ ಕ್ಲೀನಿಂಗ್‌: ಗಂಭೀರವಾಗಿ ಪರಿಗಣಿಸಿದ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 22, 2023 | 3:10 PM

ಬೆಂಗಳೂರು, (ಡಿಸೆಂಬರ್ 22): ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ (Toilet Cleaning) ಮಾಡಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಇಂದು (ಡಿಸೆಂಬರ್ 22) ಮಧ್ಯಾಹ್ನ 3ಕ್ಕೆ ವಿಧಾನಸೌಧದಲ್ಲಿ ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡಲಿದ್ದು, ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿರುವುದ ವರದಿ ಪಡೆದುಕೊಳ್ಳಲಿದ್ದಾರೆ. ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸ್ಥಳಕ್ಕೆ ವಿರೋಧ ಪಕ್ಷದ ನಾಯಕ R.ಆಶೋಕ್ ಭೇಟಿ, ಏನಂದ್ರು ಗೊತ್ತಾ?

ಸಭೆಗೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಘಟನೆ ಸಂಬಂಧ ಮಧ್ಯಾಹ್ನ 3 ಗಂಟೆಗೆ ಸಭೆ ಕರೆದಿದ್ದೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ. ಶಾಲಾ ಮಕ್ಕಳನ್ನು ಯಾರೂ ದುರುಪಯೋಗ ಮಾಡಿಕೊಳ್ಳಬಾರದು. NSS ಇತ್ತು, ಗಿಡ ನೆಡುವುದು, ಸ್ವಚ್ಛತೆ ಮಾಡುವ ಕೆಲಸ ಮಾಡುತ್ತಿದ್ದರು. ಆದ್ರೆ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ ಎಂದು ಖಡಕ್ ಆಗಿ ಹೇಳಿದರು.

ಮಕ್ಕಳಿಗೆ ಶಕ್ತಿಕೊಡುವ ಕೆಲಸ ಮಾಡಬೇಕು. ಶಾಲೆಯಲ್ಲಿ ಕಮಿಟಿ ಇದೆ. ಸ್ವಚ್ಛತೆ ಮಾಡುವ ಸಂದರ್ಭದಲ್ಲಿ ಅವರು ಕ್ರಮ ವಹಿಸಬೇಕು. ಮಕ್ಕಳನ್ನು ದುರುಪಯೋಗ ಮಾಡುವುದನ್ನು ತಡೆಯಬೇಕಿದೆ. ಎನ್‌ಎಸ್‌ಎಸ್ ಆ ಜಾಗವನ್ನು ಸ್ವಚ್ಛತೆ ಮಾಡುವುದು, ಗಿಡ ನೆಡುವುದನ್ನು ಮಾಡುತ್ತಿದ್ದರು. ಈಗ ಶೌಚಾಲಯ ಸ್ವಚ್ಛತೆ ಮಾಡುವುದಕ್ಕೆ ಬಿಡೋದಿಲ್ಲ. ಮುಂದಕ್ಕೂ ಬಿಡುವುದಿಲ್ಲ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ