AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಸಿಎಂ ಕೋರಿಕೆ ಮೇರೆಗೆ ವೇಳಾಪಟ್ಟಿ ಬದಲಾವಣೆ; ಶಕ್ತಿ ಯೋಜನೆ ಉದ್ಘಾಟನೆಗೆ ಹಾಜರಾಗಲಿದ್ದಾರೆ ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯನವರ ಕೋರಿಕೆಯ ಮೇರೆಗೆ ತಮ್ಮ ಉಜ್ಜೈನಿ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡ ಡಿಕೆ ಶಿವಕುಮಾರ್ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.

ಆಯೇಷಾ ಬಾನು
|

Updated on:Jun 10, 2023 | 1:10 PM

Share

ಬೆಂಗಳೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ(Congress Guarantee) ಒಂದಾದ ಶಕ್ತಿ ಯೋಜನೆಯನ್ನು ಜೂನ್ 11 ರಂದು ಸಿಎಂ ಸಿದ್ದರಾಮಯ್ಯ(Siddaramaiah) ಲೋಕಾರ್ಪಣೆ ಮಾಡುತ್ತಿದ್ದಾರೆ. ಯೋಜನೆಯ ಫಲವನ್ನು ಪಡೆಯಲು ತುದಿಗಾಲಿನಲ್ಲಿ ನಿಂತಿರುವ ಮಹಿಳಾ ಸಮೂಹ ಈ ಸುವರ್ಣ ಕ್ಷಣಗಳಿಗಾಗಿ ಕಾಯುತ್ತಿದ್ದಾರೆ. ಇನ್ನು ಈ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಭಾಗವಹಿಸುವುದಿಲ್ಲ ಎಂದು ನಿನ್ನೆ ತಿಳಿದುಬಂದಿತ್ತು. ಡಿಕೆ ಶಿವಕುಮಾರ್ ಅವರು ಶನಿವಾರ ಮಧ್ಯಪ್ರದೇಶಕ್ಕೆ ತೆರಳಲಿದ್ದು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೆ ಸಿಎಂ ಸಿದ್ದರಾಮಯ್ಯನವರ ಕೋರಿಕೆಯ ಮೇರೆಗೆ ಕಾರ್ಯಕ್ರಮಕ್ಕೆ ಬರಲು ಒಪ್ಪಿದ್ದಾರೆ.

ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ 11.30ಕ್ಕೆ ಹೆಚ್​ಎಎಲ್​ನಿಂದ ವಿಶೇಷ ವಿಮಾನದ ಮಧ್ಯಪ್ರದೇಶದ ಗ್ವಾಲಿಯರ್​ಗೆ ತೆರಳ ನಂತರ ಭಗಲಾಮುಖಿ ದೇವಾಲಯದಲ್ಲಿ ವಿಶೇಷ ಪೂಜೆ, ಉಜ್ಜೈನಿ ಮಹಾಕಾಲ ಮಂದಿರದಲ್ಲಿ ಭಸ್ಮ ಆರತಿ ನೆರವೇರಿಸಲಿದ್ದರು. ಹೀಗಾಗಿ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದ್ದ ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂಬ ಮಾಹಿತಿ ಸಿಕ್ಕಿತ್ತು. ಆದ್ರೆ ಈಗ ಅವರ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಉಜ್ಜೈನಿ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 11.30ಕ್ಕೆ ಉಜ್ಜೈನಿಯಿಂದ ಬೆಂಗಳೂರಿಗೆ ವಾಪಸ್ಸಾಗಿ ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Shakti Scheme: ‘ಶಕ್ತಿ’ ಯೋಜನೆ ಉದ್ಘಾಟನೆಗೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ, ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌

ಕಾರ್ಯಕ್ರಮಕ್ಕೆ ನೀನೇ ಮುಹೂರ್ತ ಇಟ್ಟಿದ್ದೀಯಾ, ನೀನೇ ಇರದಿದ್ದರೆ ಹೇಗಪ್ಪ?

ಮಹಿಳೆಯರಿಗೆ ಉಚಿತ ‌ಪ್ರಯಾಣದ ಉದ್ಘಾಟನೆ ಕಾರ್ಯಕ್ರಮಕ್ಕೆ ಹಾಜರಾಗಲು ಉಜ್ಜೈನಿ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಘಾಟನೆ ಕಾರ್ಯಕ್ರಮಕ್ಕೆ ನೀನೇ ಮುಹೂರ್ತ ಇಟ್ಟಿದ್ದೀಯಾ. ಕಾರ್ಯಕ್ರಮಕ್ಕೆ ನೀನೇ ಇರದಿದ್ದರೆ ಹೇಗಪ್ಪ ಅಂತಾ ಸಿಎಂ ಹೇಳಿದ್ರು. ಹೀಗಾಗಿ ಸಮಯ ಬದಲಾವಣೆ ಮಾಡಿಕೊಂಡು ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ತಿಳಿಸಿದ್ದೇನೆ ಎಂದರು. ಸಿಎಂ ಕೋರಿಕೆ ಮೇರೆಗೆ ತಮ್ಮ ಪ್ರವಾಸದಲ್ಲಿ ಬದಲಾವಣೆ ಮಾಡಿಕೊಂಡು ಶಕ್ತಿ ಯೋಜನೆ ಕಾರ್ಯಕ್ರಮದಲ್ಲಿ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಗ್ವಾಲಿಯರ್​​ನಲ್ಲಿರುವ ಪೀಠಕ್ಕೆ ನಾನು ಹೋಗುತ್ತಿದ್ದೇನೆ. ಒಂದಷ್ಟು ಫಲಗಳು ಲಭಿಸಿದ ಮೇಲೆ ಬರುವುದಾಗಿ ನಾನು ದೇವರಲ್ಲಿ ಹೇಳಿಕೊಂಡಿದ್ದೆ. ಹೀಗಾಗಿ ಗ್ವಾಲಿಯರ್​ಗೆ ‌ತೆರಳುತ್ತಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ರಾಜ್ಯ ರಾಜಕೀಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:31 pm, Sat, 10 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್