ಬೆಂಗಳೂರು, (ಜನವರಿ 16): ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ (Siddaramaiah), ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಸಿಎಂ, ಕರ್ತವ್ಯ ಲೋಪಗಳಾದರೆ ಅದಕ್ಕೆ ಡಿಸಿಪಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಕಳ್ಳತನ ಪ್ರಕರಣಗಳು (Theft Cases) ಹೆಚ್ಚಾಗುತ್ತಲಿವೆ ಎಂದರೆ ಗಸ್ತು ವ್ಯವಸ್ಥೆ, ಹೊಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರಿರು ಕರ್ತವ್ಯ ಲೋಪವಾದರೆ ಡಿಸಿಪಿಗಳನ್ನು ಹೊಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ, ಕಳ್ಳತನಗಳಂತಹ ಪ್ರಕರಣಗಳನ್ನು ನಡೆಯಲು ಬಿಡಬಾರದು. ಈ ನಿಟ್ಟಿನಲ್ಲಿ ಪೊಲೀಸರು ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಮಹತ್ವದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ, ಏನೇನು? ಇಲ್ಲಿದೆ ವಿವರ
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು.
ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಹಾಗೇ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು.
ಇನ್ನು ಇದೇ ವೇಳೆ ಪೊಲೀಸರ ವರ್ಗಾವಣೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ತಿಳಿ ಹೇಳಿದರು.
ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:56 pm, Tue, 16 January 24