ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ: ಸಾರ್ವತ್ರಿಕ ರಜೆ ಘೋಷಿಸಿ, ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಸೋಮವಾರವೇ ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ರಂಜಾನ್ ಹಬ್ಬ ಆಚರಣೆಗೆ ಮೂನ್ ಕಮಿಟಿ ತೀರ್ಮಾನಿಸಿದ್ದು, ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರ ಬದಲು ಸೋಮವಾರವೇ ರಂಜಾನ್ ಹಬ್ಬವಿದ್ದು, ಸೋಮವಾರವೇ ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ರಂಜಾನ್ ಹಬ್ಬಕ್ಕೆ ಮತ್ತೆ ಕೊರೊನಾ 4ನೇ ಅಲೆಯ ಕರಿನೆರಳು! ಸರ್ಕಾರದಿಂದ ಟಫ್ ರೂಲ್ಸ್ ಜಾರಿ ಸಾಧ್ಯತೆ
ಕೊರೊನಾ (Coronavirus) ಕಾರಣದಿಂದ ಸರ್ಕಾರ (Government) ಎರಡು ವರ್ಷ ರಂಜಾನ್ ಹಬ್ಬಕ್ಕೆ ಕಠಿಣ ನಿಯಮಗಳನ್ನ ಜಾರಿಗೊಳಿಸಿತ್ತು. ಮಸೀದಿಯಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ ಟಫ್ ರೂಲ್ಸ್ ಜಾರಿಗೊಳಿಸಿತ್ತು. ಈ ಬಾರಿಯಾದರೂ ಯಾವುದೇ ಅಡಚಣೆಯಿಲ್ಲದೆ ಹಬ್ಬವನ್ನು ಆಚರಿಸಬಹುದು ಅಂತ ಯೋಚಿಸುತ್ತಿರುವಾಗ ಮತ್ತೆ ಕೊರೊನಾ ನಾಲ್ಕನೇ ಅಲೆ ಆತಂಕ ಶುರುವಾಗಿದೆ. ರಾಜ್ಯದಲ್ಲಿ ನಿಯಂತ್ರಣಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಈ ವರ್ಷವೂ ರಂಜಾನ್ ಹಬ್ಬಕ್ಕೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.
ರಂಜಾನ್ ವೇಳೆ ಮಸೀದಿಯಲ್ಲಿ ಗುಂಪು ಗುಂಪಾಗಿ ಸಾಕಷ್ಟು ಜನ ಸೇರುವ ಹಿನ್ನೆಲೆ ಕೊರೊನಾ ಸೋಂಕು ಹರಡುವಿಕೆ ಬಗ್ಗೆ ಸರ್ಕಾರಕ್ಕೆ ಆತಂಕ ಮೂಡಿದೆ. ಧಾರ್ಮಿಕ ಕೇಂದ್ರಗಳಿಗೆ ಅನ್ವಯ ಆಗುವಂತೆ ಸರ್ಕಾರ ರೂಲ್ಸ್ ಜಾರಿಗೊಳಿಸಿದರೆ ಮುಸ್ಲಿಂ ಬಾಂಧವರಿಗೆ ಭಾರೀ ನಿರಾಸೆ ಆಗುತ್ತದೆ. ಮೇ 3ರಂದು ನಡೆಯುವ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಸೋಂಕು ಉಲ್ಬಣಗೊಂಡರೆ ಸರಳವಾಗಿ ಹಬ್ಬ ಆಚರಿಸಲು ಸರ್ಕಾರ ಸೂಚನೆ ನೀಡುವ ಸಾಧ್ಯತೆಯಿದೆ.
ಭಾರತದಲ್ಲಿ 2541 ಮಂದಿಗೆ ಕೊರೊನಾ ಸೋಂಕು: ನಿನ್ನೆ (ಏಪ್ರಿಲ್ 25) ದೇಶದ ವಿವಿಧೆಡೆ ಒಟ್ಟು 2,541 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 30 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 43,06,008 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ 16,522 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,22,223ಕ್ಕೆ ಮುಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳು ಶೇ 0.04 ಆಗುತ್ತದೆ. ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಪ್ರಮಾಣವು ಶೇ 98.75 ಇದೆ.
ಇನ್ನು ಕರ್ನಾಟಕದಲ್ಲಿ ನಿನ್ನೆ(ಏಪ್ರಿಲ್ 25) 64 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ 1671 ಸಕ್ರಿಯ ಪ್ರಕರಣಗಳಿದ್ದು, 4637 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಸೋಂಕಿನಿಂದ 69 ಮಂದಿ ಚೇತರಿಸಿಕೊಂಡು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ಪ್ರಮಾಣ ಶೇ 1.38 ಇದೆ. ಇದು ವಾರದ ಸರಾಸರಿಗಿಂತಲೂ ಹೆಚ್ಚು ಎನ್ನುವುದು ಗಮನಾರ್ಹ ಸಂಗತಿ. ವಾರದ ಸರಾಸರಿ ಪಾಸಿಟಿವಿಟಿ ಪ್ರಮಾಣವು ಶೇ 0.96 ಇದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ