ಸದ್ಯಕ್ಕೆ ಶಾಲೆ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ; ಟಿವಿ9ಗೆ ಸಚಿವ ಬಿಸಿ ನಾಗೇಶ್ ಹೇಳಿಕೆ

| Updated By: sandhya thejappa

Updated on: Nov 29, 2021 | 10:31 AM

ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದೆ.

ಸದ್ಯಕ್ಕೆ ಶಾಲೆ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ; ಟಿವಿ9ಗೆ ಸಚಿವ ಬಿಸಿ ನಾಗೇಶ್ ಹೇಳಿಕೆ
ಶಿಕ್ಷಣ ಸಚಿವ ಬಿಸಿ ನಾಗೇಶ್
Follow us on

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಗುಲಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ತಗುಲುವ ಸಾಧ್ಯತೆ ಹೆಚ್ಚಿರುತ್ತದೆ ಅಂತ ಈ ಹಿಂದೆ ತಜ್ಞರು ತಿಳಿಸಿದ್ದರು. ಹೀಗಾಗಿ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ತಮ್ಮ ತಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸದ್ಯಕ್ಕೆ ಶಾಲೆ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ. ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಅಂತ ತಿಳಿಸಿದ್ದಾರೆ.

ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಸದ್ಯ ಶಾಲೆ-ಕಾಲೇಜುಗಳಲ್ಲಿ ಸೋಂಕು ಗಂಭೀರವಾಗಿ ಹರಡಿಲ್ಲ ಅಂತ ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಕೊವಿಡ್ ರೂಪಾಂತರಿ ‘ಒಮಿಕ್ರಾನ್’ ವೈರಸ್ ಆತಂಕ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ತಪಾಸಣೆಯನ್ನು ಚುರುಕುಗೊಳಿಸಿದೆ. ತಲಪಾಡಿ ಗಡಿಯಲ್ಲಿ ವಾಹನಗಳ ತಪಾಸಣೆ ಚುರುಕಾಗಿದೆ. ಜಿಲ್ಲೆ ಪ್ರವೇಶಕ್ಕೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಇದನ್ನೂ ಓದಿ

Farm Laws Repeal ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ: ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ, ಎಂಎಸ್​ಪಿ ಕಾಯ್ದೆಗೆ ವಿಪಕ್ಷ ಆಗ್ರಹ

ಡಿಸೆಂಬರ್​ಗೆ ಕೊರೊನಾ 3ನೆಯ ಅಲೆ; ಜನ ಇನ್ನೂ ‘ನಮಗೆ ಬ್ಯಾಡಾ ಕೊರೊನಾ ಲಸಿಕೆ’ ಅಂತಿದ್ದಾರೆ- ಎಚ್ಚರಿಕೆ ಇರಲಿ

Published On - 10:27 am, Mon, 29 November 21