AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ. ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 17, 2022 | 4:30 PM

Share

ಬೆಂಗಳೂರು: ನೇಕಾರರಿಗೆ (weavers) 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ. ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಪವರ್​​ ಲೂಮ್​ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು ನೀಡಲಾಗುವುದು. ಮನೆಯಲ್ಲೇ ಕೆಲಸ ಮಾಡುವ ನೇಕಾರರು ಗುಡಿ ಕೈಗಾರಿಕೆ ವ್ಯಾಪ್ತಿಗೆ, ನೇಕಾರರು ಉತ್ಪಾದಿಸುವ ಬಟ್ಟೆಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿಂದಲೇ ಸಮವಸ್ತ್ರ ಖರೀದಿಸುವ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ. ಸಂಘಟಿತ ಕಾರ್ಮಿಕರ ನೆರವಿಗೆ ಸರ್ಕಾರದಿಂದ ನೆರವು. ಮುಂದಿನ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸಿಎಂ ಬೊಮ್ಮಾಯಿ ಅವರು ಡಿ. 16 ರಂದು ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ರೂ.5,000/- ಗಳಂತೆ ಒಟ್ಟು ರೂ.2343.20 ನೇಕಾರರ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆಗೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ನೇಕಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ನೇಕಾರ ಸಮ್ಮಾನ್ ಯೋಜನೆಗೆ ಡಿ. 16ರಂದು ಸಿಎಂ ಬೊಮ್ಮಾಯಿ ಚಾಲನೆ

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವು

2021-22 ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ ರೂ.990.88 ಲಕ್ಷಗಳನ್ನು ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗಿತ್ತು. 2022-23 ನೇ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ರೂ.2,000/- ಗಳಿಂದ ರೂ.5,000/- ಗಳಿಗೆ ಹೆಚ್ಚಿಸಿದೆ. ಇಲ್ಲಿಯವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ.

ಟ್ರಿಬ್ಯೂನಲ್ ರಚನೆಯಿಂದ ಸಮಸ್ಯೆಗಳಿಗೆ ಪರಿಹಾರ

ಇಂದು (ಡಿ.17) ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಸಭೆ ನಡೆದಿದ್ದು, ಸಿಎಂ ಬೊಮ್ಮಾಯಿ  ಸೇರಿದಂತೆ ಎಲ್ಲ ರಾಜ್ಯಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ಸಭೆಯ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಹಳಷ್ಟು ಜಿಎಸ್ಟಿ ಮೊಕದ್ದಮೆಗಳು ಹೈಕೋರ್ಟ್​ಗೆ ಹೋಗುತ್ತೇವೆ. ಪರ್ಯಾಯವಾಗಿ ಟ್ರೀಬ್ಯೂನಲ್ ರಚನೆ ಮಾಡುವ ಬಗ್ಗೆ ಚರ್ಚೆ ಆಗಿದೆ. ಟ್ರಿಬ್ಯೂನಲ್ ರಚನೆಯಿಂದ ಬಹಳ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ರಚನೆ ಮಾಡುವುದರ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧಾರ ಆಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.