ದೀಪಾವಳಿ ಮೊದಲ ದಿನವೇ ಹೆಚ್ಚಿದ ಪಟಾಕಿ ಅವಘಡಗಳು: ನಾರಾಯಣ ನೇತ್ರಾಲಯದಲ್ಲಿ 7, ಮಿಂಟೋದಲ್ಲಿ ನಾಲ್ವರಿಗೆ ಚಿಕಿತ್ಸೆ

| Updated By: ಆಯೇಷಾ ಬಾನು

Updated on: Oct 24, 2022 | 2:07 PM

ಪಟಾಕಿ ಅವಘಡದಿಂದ ಬಳಲುತ್ತಿದ್ದ 7 ಜನರು ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿಂದು ಚಿಕಿತ್ಸೆ ಪಡೆದಿದ್ದಾರೆ. ಹಾಗೂ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದೀಪಾವಳಿ ಮೊದಲ ದಿನವೇ ಹೆಚ್ಚಿದ ಪಟಾಕಿ ಅವಘಡಗಳು: ನಾರಾಯಣ ನೇತ್ರಾಲಯದಲ್ಲಿ 7, ಮಿಂಟೋದಲ್ಲಿ ನಾಲ್ವರಿಗೆ ಚಿಕಿತ್ಸೆ
ಪಟಾಕಿಯಿಂದಾಗಿ ಮುಖ ಸುಟ್ಟುಕೊಂಡ ಬಾಲಕ
Follow us on

ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ(Deepavali 2022) ಹಬ್ಬದ ಸಂಭ್ರಮ ಮನೆ ಮಾಡಿದೆ. ಆದ್ರೆ ಪಟಾಕಿ ಅವಘಡಗಳು ಹೆಚ್ಚುತ್ತಿವೆ. ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿಯಿಂದ ಗಾಯಗೊಂಡು ರಾಜಾಜಿನಗರ ಬಳಿ ಇರುವ ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿ(Narayana Nethralaya) 7 ಜನರು ಚಿಕಿತ್ಸೆ ಪಡೆದಿದ್ದಾರೆ. ಹಾಗೂ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ(Minto Eye Hospital) ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಾಜಿನಗರದ ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿ

ಪಟಾಕಿ ಅವಘಡದಿಂದ ಬಳಲುತ್ತಿದ್ದ 7 ಜನರು ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿಂದು ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಇಬ್ಬರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ನಾರಾಯಣ ನೇತ್ರಾಲಯ ಆಸ್ಪತ್ರೆಯ ಡಾ.ಭುಜಂಗಶೆಟ್ಟಿ ಮಾಹಿತಿ ನೀಡಿದ್ದಾರೆ.

ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಾಲ್ವರಿಗೆ ಚಿಕಿತ್ಸೆ

ಪಟಾಕಿ ಅವಘಡದಿಂದ ಗಾಯಗೊಂಡ ನಾಲ್ವರಿಗೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಡಾ.ವಿದ್ಯಾ ತಿಳಿಸಿದ್ದಾರೆ. ಈಗಾಗಲೇ ಮೂವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. 15 ವರ್ಷದ ಬಾಲಕನ ಮುಖ ಸುಟ್ಟು ಹೋಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಪಟಾಕಿ ಅವಘಡದಿಂದಾಗಿ ಥಣಿಸಂದ್ರದ 7 ವರ್ಷದ ಬಾಲಕನ ಎಡಗಣ್ಣಿಗೆ ಹಾಗೂ ಫ್ರೇಜರ್​​ಟೌನ್​ನ 7 ವರ್ಷದ ಬಾಲಕನ ಬಲಗಣ್ಣಿಗೆ ಹಾನಿಯಾಗಿದೆ. ಸದ್ಯ ಬಾಲಕರ ಕಣ್ಣಿಗೆ ಯಾವುದೇ ತೊಂದರೆ ಇಲ್ಲ.

ಮಿಂಟೋ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ಮಿಂಟೋ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ದುರಂತಕ್ಕೆ ಆಸ್ಪದ ಬೇಡ ಕಣ್ಣಿನ ಸುರಕ್ಷತೆ ಬಗ್ಗೆ ಜನ ಜಾಗೃತಿ ಮತ್ತು ಸುರಕ್ಷತೆ ಸಂದೇಶ ಸಾರುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಹಾಗೂ ಕಣ್ಣಿನ ಚಿಕಿತ್ಸೆಗಾಗಿ ಹಾಸ್ಪಿಟಲ್ ನಲ್ಲಿ ವಿಶೇಷ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆ ಚಿಕಿತ್ಸೆ ಲಭ್ಯವಿರುತ್ತದೆ ಎಂದು ಆಸ್ಪತ್ರೆಯ ನಿರ್ದೇಶಕಿ ಸುಜಾತಾ ರಾಥೋಡ್ ತಿಳಿಸಿದ್ದಾರೆ.

ಪಟಾಕಿ ಹಚ್ಚುವ ವೇಳೆ ಉಂಟಾಗುವ ಅಪಘಾತಗಳ ಬಗ್ಗೆ ಜಾಗೃತಿ ಅಗತ್ಯ. ಪಟಾಕಿ ಅನಾಹುತ ಆಗೋದು ಮಕ್ಕಳಲ್ಲಿ ಹೆಚ್ಚು. ಹೀಗಾಗಿ ಪೋಷಕರು ಮುಂಜಾಗ್ರತೆ ವಹಿಸೋದು ಒಳ್ಳೆದ್ದು. ಕಣ್ಣಿಗೆ ಏನಾದರೂ ತೊಂದರೆಯಾದರೆ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಆದಷ್ಟು ಪಟಾಕಿ ಸಿಡಿಸದೆ ಹಬ್ಬ ಮಾಡುವುದು ಆರೋಗ್ಯ ಮತ್ತು ಪರಿಸರಕ್ಕೆ ಒಳ್ಳೆಯದು ಎಂದು ಮಿಂಟೊ ಕಣ್ಣಿನ ಆಸ್ಪತ್ರೆ ಡಿ.ಎಂ.ಇ.& ನಿರ್ದೇಶಕಿ ಡಾ.ಸುಜಾತ ರಾಥೋಡ್ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ