ದೀಪಾವಳಿ ಪಟಾಕಿ ಅವಘಡ; ಬೆಂಗಳೂರಿನಲ್ಲಿ 60ಕ್ಕೂ ಅಧಿಕ ಮಂದಿಗೆ ಗಾಯ, ಹಲವರ ಕಣ್ಣಿಗೆ ಹಾನಿ

ಈ ಬಾರಿ ಬೆಂಗಳೂರು ನಗರದಾದ್ಯಂತ ಹಸಿರು ಪಟಾಕಿಗಳಿಗೆ ಮಾರಾಟ ಮತ್ತು ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೂ ಈ ಬಾರಿ ಅದೆಷ್ಟೋ ಜನರು ಪಟಾಕಿ ಹಚ್ಚಲು ಹೋಗಿ ಪಟಾಕಿ ಸಿಡಿದು ಗಾಯಗೊಂಡಿದ್ದಾರೆ. ಭಾನುವಾರದಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ.

ದೀಪಾವಳಿ ಪಟಾಕಿ ಅವಘಡ; ಬೆಂಗಳೂರಿನಲ್ಲಿ 60ಕ್ಕೂ ಅಧಿಕ ಮಂದಿಗೆ ಗಾಯ, ಹಲವರ ಕಣ್ಣಿಗೆ ಹಾನಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Nov 15, 2023 | 9:37 AM

ಬೆಂಗಳೂರು, ನ.15: ಬೆಳಕಿನ ಹಬ್ಬ ದೀಪಾವಳಿ (Deepavali) ಅಂದರೆ ಸಡಗರ ಸಂಭ್ರಮ ಮನೆ ಮಾಡಿರುತ್ತೆ. ಆದರೆ ಜನರ ಬಾಳಲ್ಲಿ ಬೆಳಕಾಗಬೇಕಾಗಿದ್ದ ಇದೇ ದೀಪಾವಳಿ ಹಬ್ಬ ಕೆಲವರ ಬಾಳನ್ನ ಕತ್ತಲಾಗಿಸುತ್ತಿದೆ. ಪ್ರತಿ ವರ್ಷದ ಹಾಗೇ ಈ ಬಾರಿ ಕೂಡ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಲ್ಲಿ ಪಟಾಕಿ ಸಿಡಿದು ನಿನ್ನೆ ಒಂದೇ ದಿನ 13 ಜನರಿಗೆ ಗಾಯಗಳಾಗಿವೆ.

ಭಾನುವಾರದಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ. ಶ್ರೀರಾಂಪುರದಲ್ಲಿ 18 ವರ್ಷದ ಯುವಕ ಭಾನುವಾರ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು ಆತನ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಧರ್ಮಾವರಂನ 10 ವರ್ಷದ ಬಾಲಕಿ ಮತ್ತು ಬೆಂಗಳೂರಿನ 22 ವರ್ಷದ ಯುವಕಿಗೂ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಇದರಿಂದಾಗಿ ಅವರಿಗೆ ದೃಷ್ಟಿ ಸಮಸ್ಯೆ ಎದುರಾಗಿದೆ. ಮಿಂಟೋ ಆಸ್ಪತ್ರೆಯ ನಿರ್ದೇಶಕ ಜಿ.ನಾಗರಾಜು ಮಾತನಾಡಿ, ಮೂವರಿಗೂ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದೀರ್ಘಾವಧಿ ಚಿಕಿತ್ಸೆ ಅಗತ್ಯವಿದೆ. ಸೋಮವಾರ ಸಂಜೆಯವರೆಗೆ ಮಿಂಟೋದಲ್ಲಿ ಒಟ್ಟು ಒಂಬತ್ತು ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನವೆಂಬರ್ 12 ರಂದು ಬಿಹಾರದಲ್ಲಿ ಬಿಹಾರಿ ಕುಟುಂಬ ಮೂಲದ ಆರು ವರ್ಷದ ಬಾಲಕ ಕೂಡ ಪಟಾಕಿ ಸಿಡಿಸಿ ಗಾಯಗೊಂಡಿದ್ದು ಬಾಲಕನಿಗೆ ಸ್ಥಳೀಯ ಚಿಕಿತ್ಸಾಲಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಅವನನ್ನು ನಾರಾಯಣ ನೇತ್ರಾಲಯಕ್ಕೆ ಶಿಫ್ಟ್ ಮಾಡಲಾಗಿದೆ ಎಂದರು.

ಆಸ್ಪತ್ರೆಯ ಅಧ್ಯಕ್ಷ ರೋಹಿತ್ ಶೆಟ್ಟಿ ಮಾತನಾಡಿ, ಮಗು ದೃಷ್ಟಿ ಕಳೆದುಕೊಳ್ಳಬಹುದು ಎಂಬ ಆತಂಕದಲ್ಲಿ ಕುಟುಂಬಸ್ಥರು ತಕ್ಷಣವೇ ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದು ಆಸ್ಪತ್ರೆಗೆ ಸೇರಿಸಿದ್ದಾರೆ. ಅವರು ತಮ್ಮ ಲೆಗೇಜ್​ನೊಂದಿಗೆ ರೈಲ್ವೆ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ಬಂದರು. ಅದೃಷ್ಟವಶಾತ್, ಹುಡುಗನಿಗೆ ಗಂಭೀರವಾದ ಗಾಯವಾಗಿಲ್ಲ ಮತ್ತು ನಾವು ಅವನಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದರು. ನಾರಾಯಣ ನೇತ್ರಾಲಯದಲ್ಲಿ ಈ ವರ್ಷ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಕ್ರಮವಾಗಿ 28 ಮತ್ತು ಮೂರು ಪ್ರಕರಣಗಳು ದಾಖಲಾಗಿವೆ. ಆಸ್ಪತ್ರೆಯಲ್ಲಿ ಕಂಡುಬರುವ 24 ಪ್ರಕರಣಗಳಲ್ಲಿ 13 ಪ್ರಕರಣಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಎಂದು ಡಾ. ಶೆಟ್ಟಿ ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಟಾಕಿ ಅವಘಡ, ದೀಪಾವಳಿಯ 2ನೇ ದಿನ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ

ಸುಮಾರು 90% ಪ್ರಕರಣಗಳು ಪಟಾಕಿ ಸಿಡಿಸುವುದನ್ನು ನೋಡಿ ಗಾಯಗೊಂಡವರೇ ಆಗಿದ್ದಾರೆ, “ಮೂರು ವರ್ಷದ ಮಗು ಸೇರಿದಂತೆ ಆರು ಮಕ್ಕಳು ಬಳಲುತ್ತಿದ್ದಾರೆ. ಕಾಟನ್‌ಪೇಟೆಯ ಟೈಲರ್‌ ಸೇರಿದಂತೆ ಇಬ್ಬರು ಪೇದೆಗಳು ಆಂತರಿಕ ಆಘಾತಕ್ಕೆ ಒಳಗಾಗಿದ್ದಾರೆ. ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಗಾಳಿಯಿಂದ ಹಾರಿ ಬಂದ ಪಟಾಕಿಯೊಂದು ಅವರ ಬಳಿ ಸಿಡಿದಿದೆ. ಅವರು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಡಾ. ಶೆಟ್ಟಿ ಮಾಹಿತಿ ನೀಡಿದರು.

ಉಳಿದವರಿಗೆ ಕಣ್ಣಿನ ರೆಪ್ಪೆಯ ಮೇಲೆ ಸುಟ್ಟಗಾಯಗಳು ಅಥವಾ ಕಣ್ಣಿಗೆ ಗಾಯಗಳಾಗಿವೆ. ಚಿಕ್ಕ ಚಿಕ್ಕ ರಸ್ತೆಗಳಲ್ಲಿ, ಜನ ಹೆಚ್ಚಾಗಿ ಓಡಾಡುವ ಸ್ಥಳಗಳಲ್ಲಿ ಪಟಾಕಿ ಸಿಡಿಸಲು ಸರ್ಕಾರ ಅನುಮತಿ ನೀಡಬಾರದು. ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವವರು ಗಾಯಗೊಳ್ಳದಂತೆ ರಕ್ಷಿಸಲು ಸಹಾಯ ಮಾಡುತ್ತದೆ ಎಂದರು. ಶಂಕರ ಕಣ್ಣಿನ ಆಸ್ಪತ್ರೆಯ ಕಾರ್ನಿಯಾ, ಕಣ್ಣಿನ ಪೊರೆ ಮತ್ತು ವಕ್ರೀಕಾರಕ ಸೇವೆಗಳ ಸಲಹೆಗಾರ ಆನಂದ್ ಬಾಲಸುಬ್ರಮಣ್ಯಂ ಮಾತನಾಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 28 ಪ್ರಕರಣಗಳಲ್ಲಿ 1 ವರ್ಷ ವಯಸ್ಸಿನ ಇಬ್ಬರು ಮಕ್ಕಳು, ಮೂವರು ಗಂಡು ಮಕ್ಕಳು (6, 10, ಮತ್ತು 12) ಮತ್ತು ಇಬ್ಬರು ಹುಡುಗಿಯರಿದ್ದಾರೆ (4 ವರ್ಷ). ಯಾವುದೇ ಗಾಯಗಳು ಗಂಭೀರ ಸ್ವರೂಪದಲ್ಲಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ