AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಪಟಾಕಿಯಿಂದ ಅವಾಂತರ: ಬೆಂಗಳೂರಿನಲ್ಲಿ 90ಕ್ಕೂ ಜನರ ಕಣ್ಣಿಗೆ ಹಾನಿ, ಗಾಳಿ ಗುಣಮಟ್ಟ ಕುಸಿತ

ಬೆಳಕಿನ ಹಬ್ಬ. ದೀಪಾವಳಿ ಅಂದ್ರೆ ದೀಪಗಳನ್ನ ಬೆಳಗಿಸೋ ಹಬ್ಬ. ಆದ್ರೆ ಇದೇ ಹಬ್ಬದ ವೇಳೆ ಅಪಾಯಕಾರಿ ಪಟಾಕಿಗಳನ್ನ ಸಿಡಿಸ್ತಿದ್ದು, ಅಮಾಯಕರು ಆಸ್ಪತ್ರೆ ಸೇರುವಂತಾಗಿದೆ. ಮೊನ್ನೆಯಿಂದ ಹಬ್ಬ ಶುರುವಾಗಿದ್ದು, ಎರಡನೇ ದಿನದಲ್ಲೇ ಬೆಂಗಳೂರುವೊಂದರಲ್ಲೇ, 90 ಕ್ಕೂ ಹೆಚ್ಚು ಜನ ಕಣ್ಣಿನ ಗಾಯದಿಂದ ಆಸ್ಪತ್ರೆ ಸೇರಿದ್ದಾರೆ.

ದೀಪಾವಳಿ ಪಟಾಕಿಯಿಂದ ಅವಾಂತರ: ಬೆಂಗಳೂರಿನಲ್ಲಿ 90ಕ್ಕೂ ಜನರ ಕಣ್ಣಿಗೆ ಹಾನಿ, ಗಾಳಿ ಗುಣಮಟ್ಟ ಕುಸಿತ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Oct 22, 2025 | 6:40 AM

Share

ಬೆಂಗಳೂರು, (ಅಕ್ಟೋಬರ್ 22): ದೀಪಾವಳಿ ಹಬ್ಬಕ್ಕೆ  (deepavali Festival) ಪಟಾಕಿ ಸಿಡಿಸುವ ಸಂಭ್ರಮದ ವೇಳೆ ಬೆಂಗಳೂರಿನಲ್ಲಿಮಕ್ಕಳು ಸೇರಿದಂತೆ 90ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯಗಳಾಗಿ ನಗರದ ವಿವಿಧ ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಟಾಕಿ (fire crackers) ) ಸಿಡಿಸುವವರಿಗಿಂತ ನೋಡುತ್ತಾ ನಿಂತವರು ಮತ್ತು ದಾರಿ ಹೋಕರೆ ಪಟಾಕಿಯಿಂದ ಹೆಚ್ಚು ಗಾಯಗೊಂಡಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ 51 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅದರಲ್ಲಿ 27 ಮಕ್ಕಳಿದ್ದಾರೆ. ಆರು ಜನರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಉಳಿದವರು ಹೊರ ರೋಗಿಗಳಾಗಿ ಮತ್ತು ಒಳ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. 51 ಜನರಲ್ಲಿ 38 ಜನರು ತಾವೇ ಪಟಾಕಿ ಸಿಡಿಸುವಾಗ ಗಾಯಗೊಂಡಿದ್ದಾರೆ. ಉಳಿದವರು ಬೇರೆಯವರು ಸಿಡಿಸಿದ ಪಟಾಕಿ ಕಿಡಿ ಸಿಡಿದು ಗಾಯಗೊಂಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 43 ಜನ್ರಿಗೆ ಚಿಕಿತ್ಸೆ ನೀಡಲಾಗಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 13 ಪ್ರಕರಣ ದಾಖಲಾಗಿದ್ರೆ, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 6 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು. ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಮೂವರು ಟ್ರೀಟ್‌ಮೆಂಟ್‌ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ; ಐವರು ಮಕ್ಕಳು ಸೇರಿ ಹಲವರಿಗೆ ಗಾಯ

ಶಾಶ್ವತ ದೃಷ್ಠಿ ಸಮಸ್ಯೆಗೆ ತುತ್ತಾದ ಯುವಕ!

ಪಟಾಕಿ ಸಿಡಿತದಿಂದ 90ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ನಿಜ. ಆದ್ರೆ ಕೆಲವರು ಕಣ್ಣನ್ನೇ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಪಟಾಕಿ ಸಿಡಿತದಿಂದ 20 ವರ್ಷದ ಯುವಕ ಶಾಶ್ವತ ದೃಷ್ಠಿ ಸಮಸ್ಯೆಗೆ ತುತ್ತಾಗಿದ್ದಾನೆ. ಪಟಾಕಿ ಸಿಡಿದು ಕಣ್ಣಿನ ದೃಷ್ಠಿ ಸಂಪೂರ್ಣ ಹಾನಿ ಆಗಿದೆ. ಬಿಹಾರ ಮೂಲದ ಯುವಕ ಬೆಂಗಳೂರಿನ ಅಕ್ಕಿಪೇಟೆಯಲ್ಲಿ ವಾಸವಾಗಿದ್ದು, ಇಡೀ ಕುಟುಂಬ ಈತನ ದುಡಿಮೆ ಮೇಲೆ ಅವಲಂಬನೆ ಆಗಿದೆ. ಸದ್ಯ ಮಿಂಟೋ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗ್ತಿದೆ.

ರಸ್ತೆಯಲ್ಲಿ ನಡೆದಕೊಂಡು ಹೋಗುತ್ತಿದ್ದ 67 ವರ್ಷದ ವಿದೇಶಿ ವ್ಯಕ್ತಿಯ ಕಣ್ಣಿಗೆ ಪಟಾಕಿಯ ಕಿಡಿ ಕಣ್ಣಿಗೆ ತಾಗಿ ಗಾಯಗೊಂಡಿದ್ದಾರೆ. ಅವರ ಕಣ್ಣಿನ ರೆಟಿನಾ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಹತ್ತು ವರ್ಷದ ಬಾಲಕ ಪಟಾಕಿ ಹಚ್ಚುವಾಗ ಕಿಡಿ ಸಿಡಿತದಿಂದ ಅವರ ಕಣ್ಣಿನ ರೆಪ್ಪೆ, ಕೂದಲು ಸುಟ್ಟಿದ್ದು, ಕಾರ್ನಿಯಾಗೆ ಪಟಾಕಿ ಕಣಗಳು ಸೇರಿ ಹಾನಿಯಾಗಿದೆ.

ಇದನ್ನೂ ಓದಿ: ದೀಪಾವಳಿಯಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಡೆಯಲು ಆರೋಗ್ಯ ಇಲಾಖೆ ನೀಡಿರುವ ಈ ಸಲಹೆಗಳನ್ನು ಪಾಲಿಸಿ

13 ವರ್ಷದ ಬಾಲಕನ ಕಣ್ಣಿಗೆ ತೀವ್ರ ಗಾಯ

ಪಟಾಕಿ ಸಿಡಿದು 13 ವರ್ಷದ ಬಾಲಕನ ಕಣ್ಣಿಗೆ ತೀವ್ರ ಗಾಯ ಆಗಿದೆ. ಬಾಲಕನಿಗೆ ಶೇಕಡಾ 70 ರಷ್ಟು ವಿಷನ್‌ ಸಮಸ್ಯೆ ಆಗಿದ್ದು, ಬಾಲಕನ ಕಣ್ಣಿಗೆ ಸರ್ಜರಿ ಅಗತ್ಯ ಎಂದು ವೈದ್ಯರು ಹೇಳಿದ್ದಾರೆ. 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ, ಸದ್ಯ ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಪಟಾಕಿ ಹೊಡೆಯುವಾಗ ಎಚ್ಚರಿಕೆ ವಹಿಸಿ!

ಪಟಾಕಿ ಸಿಡಿಸುವಾಗ ಹಲವರ ಕಣ್ಣಿಗೆ ಗಾಯವಾಗಿದ್ದು, ಇಂತಹ ಪ್ರಕರಣ ಆದಾಗ ಏನೂ ಮಾಡುವುದಕ್ಕೆ ಆಗಲ್ಲ. ಹೀಗಾಗಿ ಪಟಾಕಿ ಹೊಡೆಯುವಾಗ ಜನರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದೀಪಾವಳಿ ಹೊತ್ತಲ್ಲೇ ಹೆಚ್ಚಿದ ವಾಯುಮಾಲಿನ್ಯ!

ಲಕ್ಷ ಲಕ್ಷ ವಾಹನಗಳು ಹೊರಸೂಸೋ ಹೊಗೆಯಿಂದ ಬೆಂಗಳೂರಿನ ಪರಿಸರ ಹದಗೆಟ್ಟಿದೆ. ಇದರ ನಡುವೆ ದೀಪಾವಳಿ ಪಟಾಕಿಯಿಂದಾಗಿ ಮತ್ತಷ್ಟು ಹದಗೆಟ್ಟಿದೆ. BWSSB ಕಾಡುಬೀಸನಹಳ್ಳಿಯಲ್ಲಿ AQI ಅಂದ್ರೆ ಏರ್‌ ಕ್ವಾಲಿಟಿ ಇಂಡೆಕ್ಸ್‌ ಅರ್ಥಾತ್‌ ಗಾಳಿಯ ಗುಣಮಟ್ಟ 140 ಆಗಿದೆ. ಅಂದ್ರೆ ಇಲ್ಲೇ ಹೆಚ್ಚು ಮಾಲಿನ್ಯ ಆಗಿರುವುದು ಕಂಡುಬಂದಿದೆ. ಮೆಜೆಸ್ಟಿಕ್ ಭಾಗದಲ್ಲಿ ವಾಯು ಗುಣಮಟ್ಟ 116 ಆಗಿದ್ರೆ, BTM ಲೇಔಟ್ 90 ಆಗಿದೆ. ಬಾಪೂಜಿ ನಗರದಲ್ಲಿ 88 ಇದ್ದು, ಜಯನಗರದಲ್ಲಿ 80 AQI ದಾಖಲಾಗಿದೆ. ಇತರೆ ಏರಿಯಾಗಳಿಗೆ ಹೋಲಿಸಿದ್ರೆ ಹೆಬ್ಬಾಳ ಕಡಿಮೆ ವಾಯು ಮಾಲಿನ್ಯ ಆಗಿದ್ದು, ಇಲ್ಲಿ 79 AQI ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ