ಪಟಾಕಿ ಸದ್ದು: ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ ಕುಸಿದ ಗಾಳಿಯ ಗುಣಮಟ್ಟ ಸೂಚ್ಯಂಕ

ನಿಯಮಗಳನ್ನು ಗಾಳಿಗೆ ತೂರಿ ಪಟಾಕಿ ಸಿಡಿಸಿದ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ಕುಸಿತಕಂಡಿದೆ. ಹೌದು ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ 100ರ ಗಡಿದಾಟಿದೆ. ಹಾಗಾದ್ರೆ, ರಾಜ್ಯ ರಾಜಧಾನಿಯಲ್ಲಿ ಯಾವೆಲ್ಲಾ ಏರಿಯಾಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.

ಪಟಾಕಿ ಸದ್ದು:  ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ ಕುಸಿದ ಗಾಳಿಯ ಗುಣಮಟ್ಟ ಸೂಚ್ಯಂಕ
ಬೆಂಗಳೂರಿನಲ್ಲಿ ಕುಸಿದ ಗಾಳಿಯ ಗುಣಮಟ್ಟ ಸೂಚ್ಯಂಕ
Follow us
Poornima Agali Nagaraj
| Updated By: ರಮೇಶ್ ಬಿ. ಜವಳಗೇರಾ

Updated on:Nov 01, 2024 | 3:10 PM

ಬೆಂಗಳೂರು, (ನವೆಂಬರ್ 01): ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಎಲ್ಲೆಡೆ ಪಟಾಕಿ ಸದ್ದು ಜೋರಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ನಿನ್ನೆ(ಅಕ್ಟೋಬರ್  31) ರಾತ್ರಿ ಇಡೀ ಪಟಾಕಿಯದ್ದೇ ಹೊಗೆ ಹಾಗೂ ಶಬ್ಧದ್ದೇ ಸದ್ದು. ಹೀಗಾಗಿ ಒಂದೇ ದಿನದಲ್ಲಿ ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟದಲ್ಲಿ ಕುಸಿತಕಂಡಿದೆ. ನಿಯಮಗಳನ್ನು ಗಾಳಿಗೆ ಪಟಾಕಿ ಸಿಡಿಸಿದ ಪರಿಣಾಮ ಗಾಳಿಯ ಗುಣಮಟ್ಟ ಸೂಚ್ಯಂಕ 100ರ ಗಡಿದಾಟಿದೆ. ಕಳೆದ ಒಂದು ತಿಂಗಳಿಂದ‌ ಕಡಿಮೆ ಮಾಲಿನ್ಯ ಇತ್ತು. ಆದ್ರೆ, ದೀಪಾವಳಿ ಹಬ್ಬ ಹಿನ್ನೆಲೆ‌ ಪಟಾಕಿಯ ಸದ್ದಿಗೆ ನಗರದಲ್ಲಿ ಮಾಲಿನ್ಯ ಹೆಚ್ಚಾಗಿದೆ.

ದೀಪಾವಳಿ ಹಬ್ಬಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಸಿರು ಪಟಾಕಿ ಮಾರುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಇನ್ನು ಸರ್ಕಾರವೂ ಸಹ ಹಸಿರು ಪಟಾಕಿ ಮಾಡಬೇಕು. ಅಲ್ಲದೇ ಇದೇ ಸಮಯದಲ್ಲಿ ಪಟಾಕಿ ಸಿಡಿಸಬೇಕೆಂದು ಸಮಯ ನಿಗದಿ ಮಾಡಿತ್ತು. ಆದ್ರೆ, ಜನ ಕೇಳಬೇಕಲ್ಲ. ವರ್ಷಕ್ಕೆ ಒಂದೇ ದಿನ ಬರುವ ದೊಡ್ಡ ಹಬ್ಬ ದೀಪಾವಳಿ. ಅಂಗಡಿ ಮುಂಗಟ್ಟು ಪೂಜೆ ಮಾಡಿ ಭರ್ಜರಿ ಪಟಾಕಿ ಸಿಡಿಸಿ ಎಂಜಾಯ್ ಮಾಡಿದ್ದಾರೆ. ಹೀಗಾಗಿ ಮಾಲಿನ್ಯ ಹೆಚ್ಚಳವಾಗಿದೆ.

ಇದನ್ನೂ ಓದಿ:  ಕೊಪ್ಪಳ: ಎಗ್ ರೈಸ್, ಆಮ್ಲೆಟ್ ತಿನ್ನುವ ಮುನ್ನ ಎಚ್ಚರ

ಸದ್ಯ ಬೆಂಗಳೂರಿನ ಯಾವ್ಯಾವ ಏರಿಯಾದಲ್ಲಿ‌ ಎಷ್ಟೆಷ್ಟು ಇದೆ ಎಂದು ನೋಡುವುದಾದರೆ, ಬಿಟಿಎಂ ಲೇಔಟ್ – ಕಳೆದ ವಾರ 48 AQ ಇತ್ತು. ಈಗ 143 Aqಗೆ ಏರಿಕೆಯಾಗಿದೆ.

  • ಬಾಪುಜಿನಗರ- 79AQನಿಂದ 117 AQಗೆ ಹೆಚ್ಚಳ
  • ಸಿಟಿ ರೈಲ್ವೆ ಸ್ಟೇಷನ್ ಮೆಜೆಸ್ಟಿಕ್- 78 AQನಿಂದ 150AQಗೆ ಏರಿಕೆ
  • ಹೆಬ್ಬಾಳ – 64 AQ – 126AQ
  • ಹೊಂಬೆಗೌಡ ನಗರ – 47 AQ -9 9Aq
  • ಜಯನಗರ5th ಬ್ಲಾಕ್ – 59 AQ – 113 AQ
  • ಜಿಗಣಿ – 53 AQ – 131 AQ
  • ಕಸ್ತೂರಿ ನಗರ – 58 AQ – 131 AQ
  • ಆರ್ ವಿ ಸಿ ಇ ಮಲ್ಲಸಾಂದ್ರಾ- 102 AQ -122 AQ
  • ಸಾನೇಗುರುವಹಳ್ಳಿ – 40 AQ – 72 AQ
  • ಶಿವಪುರ – 58 AQ – 128 AQ
  • ಸಿಲ್ಕ್‌ ಬೋರ್ಡ್‌ನಲ್ಲಿ ಕಳೆದ ವಾರ AQI 108 ಇತ್ತು, ಈಗ 110

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Fri, 1 November 24

ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ