ದೀಪಾವಳಿ: ಪಟಾಕಿ ಗಾಯಕ್ಕೆ ಚಿಕಿತ್ಸೆ ನೀಡಲು ಬೆಂಗಳೂರು ಆಸ್ಪತ್ರೆಗಳಿಂದ 24 ಗಂಟೆಯೂ ಸೇವೆ
ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು ನ.11: ದೀಪಾವಳಿ (Deepavali) ಹಬ್ಬದ ಸಂಭ್ರಮದ ನಡುವೆ ಪಟಾಕಿ (Firecrackers) ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯನಿರ್ವಹಿಸಲಿದ್ದಾರೆ.
ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್ಗಳನ್ನ ಮೀಸಲಿರಿಸಿದೆ. ಪಟಾಕಿ ದುರಂತ ಎದುರಿಸಲು ಮಿಂಟೋ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ತುರ್ತು ಚಿಕಿತ್ಸೆಗೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಔಷಧಿಗಳನ್ನು, ಐ ಡ್ರಾಪ್ಸ್ ಎಲ್ಲವನ್ನು ವಾರ್ಡ್ಗಳಲ್ಲಿ ಶೇಖರಿಸಿದೆ. ತುರ್ತು ಸಹಾಯವಾಣಿ – 9481740137, 08026707176 ಶುರು ಮಾಡಿದೆ.
ಇದನ್ನೂ ಓದಿ: ದೀಪಾವಳಿ: ಪಟಾಕಿ ಮಾರಾಟಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಸುತ್ತೋಲೆ
24X7 ಸೇವೆ ನೀಡಲು ವಿಕ್ಟೋರಿಯಾ ಆಸ್ಪತ್ರೆ ಸಿದ್ದತೆ
ಕಣ್ಣು ಮಾತ್ರವಲ್ಲದೆ ಪಟಾಕಿಯಿಂದ ಸುಟ್ಟು ಗಾಯವಾದರೇ ತುರ್ತು ಚಿಕಿತ್ಸೆ ನೀಡಲು ವಿಕ್ಟೋರಯಾ ಆಸ್ಪತ್ರೆಯಲ್ಲಿ ಒಂದು ಪ್ರತ್ಯೇಕ ವಾರ್ಡ್ ತೆರಯಲಾಗುತ್ತಿದೆ. ಪೋಷಕರು ಮತ್ತು ಮಕ್ಕಳು ಎಚ್ಚರಿಕೆಯಿಂದ ಪಟಾಕಿ ಸಿಡಿಸಿ ಅಂತ ವೈದ್ಯರು ಮನವಿ ಮಾಡಿದ್ದಾರೆ. ಅನಾಹುತಕ್ಕೆ ಅವಕಾಶ ಕೊಡದಂತೆ ಎಚ್ಚರಿಕೆ ನೀಡಿದ್ದಾರೆ. ಕಣ್ಣಿನ ಸಮಸ್ಯೆ ಇರುವವರು ಪಟಾಕಿಯಿಂದ ದೂರ ಇರಿ, ಸುರಕ್ಷಿತವಾಗಿರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಪಟಾಕಿ ಮೊದಲ ಪ್ರಕರಣ ದಾಖಲು: ಮಗುವಿನ ಕಣ್ಣಿಗೆ ಗಾಯ
ಪಟಾಕಿ ಸಿಡಿದು 7 ವರ್ಷದ ಮಗು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಗಾಯಾಳು ಮಗುವನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ