49th GST Meeting: ಕರ್ನಾಟಕ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದ ಫೆ.18ರಂದು ದೆಹಲಿಯಲ್ಲಿ ನಡೆಯಲಿರುವ 49ನೇ ಜಿಎಸ್​ಟಿ ಸಭೆ

| Updated By: Rakesh Nayak Manchi

Updated on: Feb 14, 2023 | 6:07 PM

49ನೇ GST ಸಭೆ ದೆಹಲಿಯಲ್ಲಿ ಫೆಬ್ರವರಿ 18ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂದು ಬೆಳಗ್ಗೆ ದೆಹಲಿಗೆ ತೆರಳಲಿದ್ದು, ರಾಜ್ಯಕ್ಕೆ ಬರಬೇಕಿರುವ ಮೊತ್ತದ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ.

49th GST Meeting: ಕರ್ನಾಟಕ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದ ಫೆ.18ರಂದು ದೆಹಲಿಯಲ್ಲಿ ನಡೆಯಲಿರುವ 49ನೇ ಜಿಎಸ್​ಟಿ ಸಭೆ
ನಿರ್ಮಲ ಸೀತಾರಾಮನ್ ಮತ್ತು ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ದೆಹಲಿಯಲ್ಲಿ ಫೆಬ್ರವರಿ 18ರಂದು 49ನೇ GST ಸಭೆ (49th GST Meeting) ನಡೆಯಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ವಿವಿಧ ರಾಜ್ಯದಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಬಜೆಟ್ ಮಂಡಿಸಿದ ಮರುದಿನವೇ (ಫೆ.18) ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಬೊಮ್ಮಾಯಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಜಿಎಸ್​ಟಿ ಹಣವನ್ನು ಬಿಡುಗಡೆ ಮಾಡುವಂತೆ ಬೇಡಿಕೆ ಇಡುವ ಸಾಧ್ಯತೆ ಇದೆ. ಕೇಂದ್ರದಿಂದ ಕರ್ನಾಟಕಕ್ಕೆ 12,101 ಕೋಟಿ ಜಿಎಸ್​ಟಿ ಬಾಕಿ ಹಣ ಕರ್ನಾಟಕಕ್ಕೆ ಬರಬೇಕಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ಪಕ್ಷಗಳು ನಿರಂತರ ಬಸ್ ಯಾತ್ರೆ, ಜನಸಂಕಲ್ಪ ಯಾತ್ರೆ, ಪಂಚರತ್ನ ಯಾತ್ರೆ ಅಂತ ರಾಜ್ಯ ಪರ್ಯಟಣೆ ನಡೆಸುತ್ತಿವೆ. ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಲು ಹವಣಿಸುತ್ತಿದೆ. ಇನ್ನೊಂದೆಡೆ ಸಮ್ಮಿಶ್ರ ಸರ್ಕಾರ ಕೆಡವಿ ಅಧಿಕಾರಕ್ಕೆ ಏರಿದ ಬಿಜೆಪಿ ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಜಿಎಸ್​ಟಿ ಸಭೆಯನ್ನೂ ಬಿಜೆಪಿ ವರದಾನವನ್ನಾಗಿ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?

ಸಿಎಂ ಬೊಮ್ಮಾಯಿ ಅವರು ಮುಂದಿನ ವಿಧಾನಸಭೆ ಚುನಾವಣೆ ಇರುವುದನ್ನು ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದು ಹೆಚ್ಚು ಜಿಎಸ್​ಟಿ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಕೇಂದ್ರದ ನಾಯಕರು ರಾಜ್ಯಕ್ಕೆ ಮೇಲಿಂದ ಮೇಲೆ ಬರುತ್ತಿದ್ದು, ಚುನಾವಣೆ ದೃಷ್ಟಿಯಿಂದ ಕರ್ನಾಟಕ ಹೆಚ್ಚಿನ ಜಿಎಸ್​ಟಿ ಹಣ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಮುಖ್ಯಮಂತ್ರಿಯವರ ಈ ಭೇಟಿ ಮಹತ್ವ ಮಡೆದುಕೊಂಡಿದ್ದು, ಎಷ್ಟು ಜಿಎಸ್​ಟಿ ಹಣ ಕರ್ನಾಟಕಕ್ಕೆ ಬರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ