ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ ಶಿವಕುಮಾರಗೆ ಸಮನ್ಸ್ ನೀಡಿದ ನ್ಯಾಯಾಲಯ

ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿ ಐವರಿಗೆ ನ್ಯಾಯಾಲಯ ಸಮನ್ಸ್​ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ ಶಿವಕುಮಾರಗೆ ಸಮನ್ಸ್ ನೀಡಿದ ನ್ಯಾಯಾಲಯ
ಡಿಕೆ ಶಿವಕುಮಾರ್
Follow us
| Updated By: ವಿವೇಕ ಬಿರಾದಾರ

Updated on:May 31, 2022 | 3:50 PM

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ (DK Shivakuamr)  ಸೇರಿ ಐವರಿಗೆ ನ್ಯಾಯಾಲಯ ಸಮನ್ಸ್​ ನೀಡಿದೆ. ದೆಹಲಿಯ (Delhi) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದೆ. ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೆ ಸಮನ್ಸ್ ಜಾರಿ ಮಾಡಲಾಗಿದೆ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕ ಕೋರ್ಟ್​​ನಿಂದ ಸಮನ್ಸ್ ಜಾರಿಯಾಗಿದೆ. ಜುಲೈ 1ರಂದು ಕೋರ್ಟ್​ಗೆ ಹಾಜರಾಗುವಂತೆ ಡಿಕೆಶಿ ಸೇರಿ ಐವರಿಗೆ ಸೂಚನೆ ನೀಡಲಾಗಿದೆ. ಬೇಸಿಗೆ ರಜೆ ಬಳಿಕ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಲು ಕೋರ್ಟ್ ನಿರ್ದರಿಸಿದೆ. ಜುಲೈ 1 ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಇದನ್ನು ಓದಿ: ಬಿಜೆಪಿ ಬೆಂಬಲದೊಂದಿಗೆ ರಾಜ್ಯಸಭಾ ಚುನಾವಣೆ ಕಣಕ್ಕಿಳಿದ ಮಾಧ್ಯಮ ಉದ್ಯಮಿ ಸುಭಾಷ್ ಚಂದ್ರ

ಡಿ.ಕೆ.ಶಿವಕುಮಾರ್  ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ  ಕೋರ್ಟ್‌ನಲ್ಲಿ ಮೇ 28 ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ವಿಕಾಸ್‌ ದುಲ್‌ರವರ ಪೀಠದಲ್ಲಿ ವಿಚಾರಣೆ ನಡೆದಿದ್ದು. ವಾದವನ್ನು ಆಲಿಸಿದ ಇಡಿ ವಿಶೇಷ ನ್ಯಾಯಾಲಾಯ ವಿಚಾರಣೆಯನ್ನು ಮೇ 31ಕ್ಕೆ ವಿಚಾರಣೆ ಮುಂದೂಡಿದ್ದರು. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಡಿಕೆಶಿಗೆ ಸಮನ್ಸ್ ನೀಡಿದೆ.

ಇದನ್ನು ಓದಿ: ಆಂಧ್ರದ ಮಾಜಿ ಶಾಸಕನ ಕಾರು ಮುಳಬಾಗಲಿನಲ್ಲಿ ಟ್ರ್ಯಾಕ್ಟರಿಗೆ ಡಿಕ್ಕಿ: ಯುವ ಟ್ರಾಕ್ಟರ್ ಚಾಲಕ ಸ್ಥಳದಲ್ಲೆ ಸಾವು

2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಐಟಿ ಅಧಿಕಾರಿಗಳು  ಡಿ.ಕೆ.ಶಿ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಎರಡೂವರೆ ವರ್ಷದ  ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.  2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:50 pm, Tue, 31 May 22