AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಬೀದಿ ನಾಯಿ ಮೇಲೆ ಉದ್ದೇಶಪೂರ್ವಕ ಕಾರು ಚಲಾಯಿಸಿ ವಿಕೃತಿ; ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಆಗ್ರಹ

Bengaluru Crime news; ಬೀದಿ ನಾಯಿ ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ಅದರ ಮೇಲೆ ಕಾರು ಹರಿಸಲಾಗಿದೆ ಎಂದು ಮಿನು ಸಿಂಗ್ ಎಂಬವರು ಸಾಮಾಜಿಕ ಮಾಧ್ಯಮ ತಾಣ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಘಟನೆಯ ಸಿಸಿಟಿವಿ ದೃಶ್ಯಗಳನ್ನು ಸಹ ಹಂಚಿಕೊಂಡಿದ್ದಾರೆ. ಬೆಂಗಳೂರು ಪೊಲೀಸರು ವಿಷಯ ತಿಳಿದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಬೀದಿ ನಾಯಿ ಮೇಲೆ ಉದ್ದೇಶಪೂರ್ವಕ ಕಾರು ಚಲಾಯಿಸಿ ವಿಕೃತಿ; ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on:Aug 12, 2023 | 4:24 PM

Share

ಬೆಂಗಳೂರು: ಬೀದಿ ನಾಯಿಯ (Stray Dog) ಮೇಲೆ ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ (Bellanduru) ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಆಗಸ್ಟ್ 8 ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು (CCTV Footage) ಸಾಮಾಜಿಕ ಮಾಧ್ಯಮ ಟ್ವಿಟರ್​​​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು ಘಟನೆ ಕುರಿತ ವಿವರ ಕೋರಿದ್ದಾರೆ.

ಬೀದಿ ನಾಯಿ ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ಅದರ ಮೇಲೆ ಕಾರು ಹರಿಸಲಾಗಿದೆ ಎಂದು ಮಿನು ಸಿಂಗ್ ಎಂಬವರು ಸಾಮಾಜಿಕ ಮಾಧ್ಯಮ ತಾಣ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಘಟನೆಯ ಸಿಸಿಟಿವಿ ದೃಶ್ಯಗಳನ್ನು ಸಹ ಹಂಚಿಕೊಂಡಿದ್ದಾರೆ. ಬೆಂಗಳೂರು ಪೊಲೀಸರು ವಿಷಯ ತಿಳಿದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಅಗತ್ಯ ಕ್ರಮಕ್ಕಾಗಿ ನಾವು ನಿಮ್ಮ ಮನವಿಯನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ರವಾನಿಸಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸರು ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ. ನರಳಾಡುತ್ತಿದ್ದ ನಾಯಿಯನ್ನು ಕಂಡ ಸ್ಥಳೀಯರು ರಕ್ಷಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಬೀದಿ ನಾಯಿ ಮೇಲೆ ಕಾರು ಚಲಾಯಿಸಿದ ಸಿಸಿಟಿವಿ ದೃಶ್ಯದ ಟ್ವೀಟ್

(warning: The visuals may be disturbing. Viewers’ discretion is advised)

ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಬೆಳಬಾರ ಗ್ರಾಮದಲ್ಲಿ ಬೀದಿ ನಾಯಿಯೊಂದು ಪ್ಲಾಸ್ಟಿಕ್ ಡಬ್ಬದಲ್ಲಿ ಇದ್ದ ಆಹಾರ ತಿನ್ನಲು ಹೋಗಿ ಅದರಲ್ಲಿ ತನ್ನ ಕುತ್ತಿಗೆಯನ್ನು ಸಿಲುಕಿಸಿಕೊಂಡು ಹೊರಬರಲಾರದೇ ಒದ್ದಾಡಿದ್ದ ಘಟನೆ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕುತ್ತಿಗೆಗೆ ಬಿದ್ದ ಡಬ್ಬದಿಂದಾಗಿ ಕಣ್ಣುಕಾಣದೇ ರಸ್ತೆಯಲ್ಲಿ ಹೇಗೆ ಬೇಕೋ ಹಾಗೆ ತಿರುಗಾಡುತಿದ್ದ ಈ ಶ್ವಾನವನ್ನು ಕೆಎಸ್ಆರ್​​ಟಿಸಿ ಬಸ್ ಚಾಲಕ ಆನಂದ್ ಹುಲಸ್ವಾರ್ ಎಂಬವವರು ಬಸ್ ನಿಲ್ಲಿಸಿ ರಕ್ಷಿಸಿ ಮಾನವೀಯತೆ ಮೆರೆದಿದ್ದರು. ಒಂದೆಡೆ ಬಸ್ ಚಾಲಕ ನಾಯಿಯ ಜೀವ ಉಳಿಸಿದ್ದರೆ ಈ ಘಟನೆಯಲ್ಲಿ ಕಾರು ಚಲಾಕ ಉದ್ದೇಶಪೂರ್ವಕ ನಾಯಿಯ ಹತ್ಯೆ ಮಾಡಲು ಮುಂದಾಗಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರು: ಸರ್ಕಾರಿ ಬಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ತಾಯಿ, ಮಗ ದುರ್ಮರಣ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಸಾವು

ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಕಿರಣ್ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಿರಣ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ.

ಬಾರ್​ನಲ್ಲಿ ನಡೆದ ಗಲಾಟೆ ಸಂಬಂಧ ಕಿರಣ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ಸಂಬಂಧ ಹಲಸೂರು ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ. ಆರೋಪಿಗಳಿಗಾಗಿ ಹಲಸೂರು ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Sat, 12 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ