ಬೆಂಗಳೂರು: ಬೀದಿ ನಾಯಿಯ (Stray Dog) ಮೇಲೆ ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ (Bellanduru) ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಆಗಸ್ಟ್ 8 ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು (CCTV Footage) ಸಾಮಾಜಿಕ ಮಾಧ್ಯಮ ಟ್ವಿಟರ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು ಘಟನೆ ಕುರಿತ ವಿವರ ಕೋರಿದ್ದಾರೆ.
ಬೀದಿ ನಾಯಿ ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ಅದರ ಮೇಲೆ ಕಾರು ಹರಿಸಲಾಗಿದೆ ಎಂದು ಮಿನು ಸಿಂಗ್ ಎಂಬವರು ಸಾಮಾಜಿಕ ಮಾಧ್ಯಮ ತಾಣ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಘಟನೆಯ ಸಿಸಿಟಿವಿ ದೃಶ್ಯಗಳನ್ನು ಸಹ ಹಂಚಿಕೊಂಡಿದ್ದಾರೆ. ಬೆಂಗಳೂರು ಪೊಲೀಸರು ವಿಷಯ ತಿಳಿದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಅಗತ್ಯ ಕ್ರಮಕ್ಕಾಗಿ ನಾವು ನಿಮ್ಮ ಮನವಿಯನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ರವಾನಿಸಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸರು ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ. ನರಳಾಡುತ್ತಿದ್ದ ನಾಯಿಯನ್ನು ಕಂಡ ಸ್ಥಳೀಯರು ರಕ್ಷಿಸಿ ಚಿಕಿತ್ಸೆ ಕೊಡಿಸಿದ್ದಾರೆ.
(warning: The visuals may be disturbing. Viewers’ discretion is advised)
Deliberate run over only because it’s just a dog on the road @BBMPCOMM @pfaindia @TOIBengaluru @CPBlr @AHVS_Karnataka @BangaloreMirror pic.twitter.com/yoTIkxE9CH
— Minu Singh (@MinuSin97928238) August 10, 2023
ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಬೆಳಬಾರ ಗ್ರಾಮದಲ್ಲಿ ಬೀದಿ ನಾಯಿಯೊಂದು ಪ್ಲಾಸ್ಟಿಕ್ ಡಬ್ಬದಲ್ಲಿ ಇದ್ದ ಆಹಾರ ತಿನ್ನಲು ಹೋಗಿ ಅದರಲ್ಲಿ ತನ್ನ ಕುತ್ತಿಗೆಯನ್ನು ಸಿಲುಕಿಸಿಕೊಂಡು ಹೊರಬರಲಾರದೇ ಒದ್ದಾಡಿದ್ದ ಘಟನೆ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕುತ್ತಿಗೆಗೆ ಬಿದ್ದ ಡಬ್ಬದಿಂದಾಗಿ ಕಣ್ಣುಕಾಣದೇ ರಸ್ತೆಯಲ್ಲಿ ಹೇಗೆ ಬೇಕೋ ಹಾಗೆ ತಿರುಗಾಡುತಿದ್ದ ಈ ಶ್ವಾನವನ್ನು ಕೆಎಸ್ಆರ್ಟಿಸಿ ಬಸ್ ಚಾಲಕ ಆನಂದ್ ಹುಲಸ್ವಾರ್ ಎಂಬವವರು ಬಸ್ ನಿಲ್ಲಿಸಿ ರಕ್ಷಿಸಿ ಮಾನವೀಯತೆ ಮೆರೆದಿದ್ದರು. ಒಂದೆಡೆ ಬಸ್ ಚಾಲಕ ನಾಯಿಯ ಜೀವ ಉಳಿಸಿದ್ದರೆ ಈ ಘಟನೆಯಲ್ಲಿ ಕಾರು ಚಲಾಕ ಉದ್ದೇಶಪೂರ್ವಕ ನಾಯಿಯ ಹತ್ಯೆ ಮಾಡಲು ಮುಂದಾಗಿದ್ದಾನೆ.
ಇದನ್ನೂ ಓದಿ: ಚಿಕ್ಕಮಗಳೂರು: ಸರ್ಕಾರಿ ಬಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ತಾಯಿ, ಮಗ ದುರ್ಮರಣ
ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಕಿರಣ್ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಿರಣ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ.
ಬಾರ್ನಲ್ಲಿ ನಡೆದ ಗಲಾಟೆ ಸಂಬಂಧ ಕಿರಣ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ಸಂಬಂಧ ಹಲಸೂರು ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ. ಆರೋಪಿಗಳಿಗಾಗಿ ಹಲಸೂರು ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:21 pm, Sat, 12 August 23