7ನೇ ವೇತನ ಆಯೋಗದಲ್ಲಿ ಒಪಿಎಸ್​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ ನೌಕರರ ಸಂಘ

7ನೇ ವೇತನ ಆಯೋಗದಲ್ಲಿ ಒ​ಪಿಎಸ್​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಲಾಗಿದೆ. ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಕೆ ನೀಡಿದೆ.

7ನೇ ವೇತನ ಆಯೋಗದಲ್ಲಿ ಒಪಿಎಸ್​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ ನೌಕರರ ಸಂಘ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆ
Follow us
|

Updated on:Feb 21, 2023 | 9:23 PM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka Government Employees Association) ತುರ್ತು ಕಾರ್ಯಕಾರಿಣಿ ಸಭೆ ಇಂದು ನಡೆದಿದ್ದು, 7ನೇ ವೇತನ ಆಯೋಗದಲ್ಲಿ (7th Pay Commission) ಹಳೇ ಪಿಂಚಣಿ ನೀತಿ​ (Old Pension Scheme-OPS) ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 22ರಿಂದ 7 ದಿನಗಳ ಗಡುವು ನೀಡಲಾಗಿದೆ. ಒಂದು ವೇಳೆ ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1ರಿಂದಲೇ ಕರ್ತವ್ಯಕ್ಕೆ ಗೈರಾಗಲು ನೌಕರರು ಸಭೆಯಲ್ಲಿ ನಿರ್ಧಾರಿಸಿದ್ದಾರೆ.

ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ​ ವಂದಿತಾ ಶರ್ಮಾ ಅವರಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಇದೇ ವೇಳೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಮಾರ್ಚ್​​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ತೀರ್ಮಾನಿಸಲಾಗಿದೆ. ಅಲ್ಲದೆ, ಹಳೇ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಸರ್ಕಾರಿ ನೌಕರರು ಸರ್ಕಾರದ ಭಾಗ, 7ನೇ ವೇತನಾ ಆಯೋಗದ ಶಿಫಾರಸ್ಸುಗಳನ್ನು ಅವರೊಂದಿಗೆ ಚರ್ಚಿಸುತ್ತೇವೆ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್​ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆಯಾಗಿದೆ. ಬಜೆಟ್ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಬಜೆಟ್‌ ಮಂಡನೆಯ ವೇಳೆ ಎಲ್ಲವನ್ನೂ ಹೇಳಲು ಆಗುವುದಿಲ್ಲ. ಹೀಗಾಗಿ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಬಜೆಟ್‌ನಲ್ಲಿ ಹೇಳಿಲ್ಲ. ಆದರೆ, ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಲಾಗಿದ್ದು, ಇದೇ ವರ್ಷದಿಂದ ಅನುಷ್ಠಾನಕ್ಕೆ ಬರುತ್ತದೆ ಎಂದಿದ್ದರು. 7ನೇ ವೇತನ ಆಯೋಗದ ವರದಿ ಶೀಘ್ರವೇ ಬರಲಿದೆ. ವರದಿ ಜಾರಿಗಾಗಿ ಬಜೆಟ್​ನಲ್ಲಿ 6 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದರು.

ಸರ್ಕಾರಿ ನೌಕರರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ತಳ್ಳಾಟ

ರಾಜ್ಯ ಸರ್ಕಾರಿ ನೌಕರತ ಸಂಘ ಕಾರ್ಯಕಾರಣಿ ಸಭೆಯಲ್ಲಿ ತಳ್ಳಾಟ ನೂಕಾಟ ನಡೆಯಿತು. ನಾವೂ ವೇದಿಕೆಯಲ್ಲಿ ಮಾತನಾಡಬೇಕು ಎಂದು ಎನ್‌ಪಿಎಸ್‌ ಹೋರಾಟ ಸಂಘಟನೆಯ ಕೆಲ‌ ಸದಸ್ಯ ಪಟ್ಟು ಹಿಡಿದರು. ಆನಂತರ ಮಾತನಾಡಲು ಅವಕಾಶ ಕೊಡುತ್ತೇವೆ ಎಂದು ಹೇಳಲಾಯಿತು. ಈ ವೇಳೆ ಸಭೆಯ ವೇದಿಕೆ ಮುಂದೆ ಸಿಬ್ಬಂದಿಗಳ ನಡುವೆ ನೂಕಾಟ, ತಳ್ಳಾಟ ಆರಂಭವಾಯಿತು. ಬಹಿರಂಗ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದವರ ಮೇಲೆ ಹಲ್ಲೆ ಯತ್ನವೂ ನಡೆಯಿತು. NPS ಸಂಘಟನೆಯ ಮುಖಂಡರಿಗೆ ಚೇರ್ ಎಸೆಯಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Tue, 21 February 23