ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ. 16ರಂದು KPTCL ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ

|

Updated on: Mar 13, 2023 | 3:27 PM

ಮಾ.16ರಂದು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು KPTCL ನೌಕರರು ಮುಂದಾಗಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡಬಾರದೆಂದು ನಿರ್ಧರಿಸಲಾಗಿದೆ.

ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ. 16ರಂದು KPTCL ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ
ಕೆಪಿಟಿಸಿಎಲ್
Follow us on

ಬೆಂಗಳೂರು: ಸರ್ಕಾರಿ ನೌಕರರ ಸಂಘದ ಬಳಿಕ ಇದೀಗ KPTCL ನೌಕರರ ಸಂಘ ಮುಷ್ಕರಕ್ಕೆ ಮುಂದಾಗಿದೆ. ಮಾರ್ಚ್​ 16ರಂದು KPTCL ನೌಕರರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ವೇತನ ಪರಿಷ್ಕರಣೆಗೆ ಆಗ್ರಹಿಸಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಮಾ.16ರಂದು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು KPTCL ನೌಕರರು ಮುಂದಾಗಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟ ಬೆಸ್ಕಾಂ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಧರಣಿ ನಡೆಸಲು ನಿರ್ಧಾರ ಮಾಡಿದೆ. ಕೆಲಸಕ್ಕೆ ಸಂಪೂರ್ಣವಾಗಿ ಗೈರು ಹಾಜರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. KPTCL ನೌಕರರ ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡಬಾರದೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ: ರೇವಣ್ಣ ಕುಟುಂಬಕ್ಕೆ ಶಾಕ್: ಹಾಸನ ಟಿಕೆಟ್​ ಸಾಮಾನ್ಯ ಕಾರ್ಯಕರ್ತನಿಗೆ, ಇದಕ್ಕೆ ಬದ್ಧ ಎಂದ ಕುಮಾರಸ್ವಾಮಿ

ಈಗಾಗಲೇ ನಾವು ಮುಷ್ಕರ ಮಾಡುವುದಾಗಿ ಇಲಾಖೆಗೆ ಮಾಹಿತಿ ಕೊಟ್ಟಿದ್ದರು ನಮಗೆ ಸ್ಪಂದನೆ ಸಿಕ್ಕಿಲ್ಲ. ಆದರಿಂದ ನಾವು ಅನಿವಾರ್ಯವಾಗಿ ಮುಷ್ಕರ ಮಾಡುತ್ತಿದ್ದೇವೆ. ನಮಗೆ ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು, ಆದರೆ ಅದು ಆಗಿಲ್ಲ. ಸರ್ಕಾರಿ ನೌಕರರಿಗೆ ಮಧ್ಯಂತರ ಶೇಕಡಾ 17ರಷ್ಟು ವೇತನ ಪರಿಷ್ಕರಣೆ ಮಾಡಿದ್ದಾರೆ, ನಮಗೆ ಆಗಿಲ್ಲ. ನೌಕರರ ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡದಿರಲು ನಿರ್ಧಾರ ಮಾಡಿದ್ದೇವೆ. KPTCL ಹಾಗೂ ಎಸ್ಕಾಂಗಳ ನೌಕರರು/ಅಧಿಕಾರಿಗಳು ನ್ಯಾಯಯುತ ಬೇಡಿಕೆ ವೇತನ ಪರಿಷ್ಕರಣೆ ಆಗಲೇಬೇಕು. 01-04-2022 ರಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು. ವೇತನ ಪರಿಷ್ಕರಣೆ ಆಗಿ ಸುಮಾರು 5 ವರ್ಷ ಮೀರಿ 6 ವರ್ಷ ಆಗಿದೆ. ನಾವು ತುಂಬಾ ಆರ್ಥಿಕ ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಆಗುವ ಪರಿಣಾಮಕ್ಕೆ ನಾವು ಯಾವುದೆ ರೀತಿ ಜವಾಬ್ದಾರಿ ಅಲ್ಲ. ನಾವು ಕರ್ನಾಟಕದ ಜನತೆಗೆ ಕ್ಷಮೆ ಕೇಳುತ್ತೇವೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಮುಖಂಡರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ