ಬೆಂಗಳೂರಿನ ಒಂದು ರಸ್ತೆಗೆ ಪಿಆರ್​ ತಿಪ್ಪೇಸ್ವಾಮಿ ಹೆಸರಿಡಲು ಬೇಡಿಕೆ: ನಾಳೆಯೇ ಚರ್ಚಿಸಿ ಕ್ರಮಕೈಗೊಳ್ಳುವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರಿನ ಒಂದು ರಸ್ತೆಗೆ ಪಿ.ಆರ್.ತಿಪ್ಪೇಸ್ವಾಮಿ ಹೆಸರಿಡಲು ಬೇಡಿಕೆಯಿದ್ದು, ನಾಳೆಯೇ ಬಿಬಿಎಂಪಿ ಆಯುಕ್ತರ ಜೊತೆ ಚರ್ಚಿಸಿ ಈ ಬಗ್ಗೆ ಕ್ರಮಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಒಂದು ರಸ್ತೆಗೆ ಪಿಆರ್​ ತಿಪ್ಪೇಸ್ವಾಮಿ ಹೆಸರಿಡಲು ಬೇಡಿಕೆ: ನಾಳೆಯೇ ಚರ್ಚಿಸಿ ಕ್ರಮಕೈಗೊಳ್ಳುವೆ ಎಂದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿImage Credit source: aninews
Follow us
|

Updated on:Mar 04, 2023 | 8:40 PM

ಬೆಂಗಳೂರು: ಬೆಂಗಳೂರಿನ ಒಂದು ರಸ್ತೆಗೆ ಪಿ.ಆರ್.ತಿಪ್ಪೇಸ್ವಾಮಿ (P R Thippeswamy) ಹೆಸರಿಡಲು ಬೇಡಿಕೆಯಿದ್ದು, ನಾಳೆಯೇ ಬಿಬಿಎಂಪಿ ಆಯುಕ್ತರ ಜೊತೆ ಚರ್ಚಿಸಿ ಈ ಬಗ್ಗೆ ಕ್ರಮಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಮೈಸೂರು ವತಿಯಿಂದ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಿದ್ದ ಪಿ.ಆರ್.ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖ್ಯಾತ ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಬದುಕು ಇತರರಿಗೆ ಪ್ರೇರಣೆ ಆಗಿತ್ತು. ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಇದಕ್ಕೆ ಅಗತ್ಯ ಸಹಕಾರ ನಾನು ನೀಡುತ್ತೇನೆ. ತಿಪ್ಪೇಸ್ವಾಮಿ ಗ್ರಂಥಗಳನ್ನು ಉಳಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮೈಸೂರು ವಿವಿಯಲ್ಲಿ ಇದಕ್ಕೆ ಸೂಕ್ತ ವ್ಯವಸ್ಥೆ ಮಾಡುವ ಬಗ್ಗೆ ಚರ್ಚಿಸುವೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಕಾಗಿನೆಲೆಯ ಕನಕ ಗುರುಪೀಠದ ಪೀಠಾಧ್ಯಕ್ಷ ನಿರಂಜನಾಂದಪುರಿಶ್ರೀಗಳು, ಚಿತ್ರಕಲಾ ಪರಿಷತ್ ಅಧ್ಯಕ್ಷ B.L.ಶಂಕರ್, ಮಾಜಿ ಸಚಿವ H.M.ರೇವಣ್ಣ, ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕ ರುದ್ರಣ್ಣ ಹರ್ತಿಕೋಟೆ ಭಾಗಿಯಾಗಿದ್ದರು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ ಕಳ್ಳಮಳ್ಳ ಇದ್ದಹಾಗೆ: ಸಚಿವ ಆರ್‌.ಅಶೋಕ್‌ ವಾಗ್ದಾಳಿ

ತಿಪ್ಪೇಸ್ವಾಮಿ ಚಿತ್ರ ಕಲೆಯಲ್ಲಿ ಅಪಾರ ಸಾಧನೆ ಮಾಡಿದ್ದಾರೆ: ಬಿಎಲ್​ ಶಂಕರ್  

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​ ಶಂಕರ್​ ಮಾತನಾಡಿ, ಕರ್ನಾಟಕದ ಚಿತ್ರಕಲಾ ಪರಿಷತ್ತನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ಪಿ.ಆರ್ ತಿಪ್ಪೇಸ್ವಾಮಿ ಅವರದು ಇದೆ. ಚಿತ್ರ ಕಲೆಯಲ್ಲಿ ಅಪಾರ ಸಾಧನೆಯನ್ನ ತಿಪ್ಪೇಸ್ವಾಮಿ ಅವರು ಮಾಡಿದ್ದಾರೆ. ನಿಜಲಿಂಗಪ್ಪ ಅವರು ಚಿತ್ರಕಲೆಯನ್ನು ಕಲೆ ನೀನು ಎಂದು ಹೇಳಿದ್ರು. ಅವಾಗ ಅವರು ಚಿತ್ರಕಲಾ ಕಲಿತಿದ್ದಾರೆ. ರಾಜ್ಯಕ್ಕೆ ಒಬ್ಬ ಒಳ್ಳೆಯ ಚಿತ್ರಕಲಾಕರಾಗಾರರು ಕೊಟ್ಟಿದ್ದಾರೆ. ಅವರ ಜನ್ಮ ಶತಮಾನೋತ್ಸವ ಈಡಿ ವರ್ಷ ಪೂರ್ತಿ ನಡೆಯಲಿದೆ. ಸಿಎಂ ಬೊಮ್ಮಾಯಿ ಅವರು ಕಲೆ ಸಾಹಿತ್ಯದಲ್ಲಿ ತುಂಬಾ ಆಸಕ್ತಿ ಇದೆ. ಸಾಂಸ್ಕೃತಿಕ ಚಿತ್ರಕಲೆಗಳನ್ನು ಬೆಳಸಬೇಕು ಎನ್ನುವ ಆಸೆ ಇದೆ. ಅವರಿಗೆ ತುಂಬಾ ಧನ್ಯವಾದಗಳು ಎಂದು ಹೇಳಿದರು.

ಇದನ್ನೂ ಓದಿ: Bengaluru Safe City project: ಏನಿದು ಸೇಫ್​ ಸಿಟಿ ಪ್ರಾಜೆಕ್ಟ್, ಬೆಂಗಳೂರಿಗೇಕೆ ಮುಖ್ಯ?

ತಿಪ್ಪೇಸ್ವಾಮಿ ನಮ್ಮ ಜೊತೆ ಇಲ್ಲದಿದ್ದರೂ ಅವರ ಚಿತ್ರಕಲೆ ನಮ್ಮೊಂದಿಗಿದೆ: ನಿರಂಜನಾನಂದಪುರಿಶ್ರೀ 

ನಿರಂಜನಾನಂದಪುರಿಶ್ರೀ ಮಾತನಾಡಿ, ಪಿ.ಆರ್.ತಿಪ್ಪೇಸ್ವಾಮಿ ಹುಟ್ಟಿದ ಊರಲ್ಲಿ ನಾನು ಹುಟ್ಟಿದ್ದು ನನ್ನ ಪುಣ್ಯ. ಮನುಷ್ಯ ಹುಟ್ಟುವುದು ಸಾಧನೆಯಲ್ಲ, ಏನ್ಮಾಡುತ್ತಾರೆನ್ನುವುದು ಮುಖ್ಯ. ಅದರಲ್ಲಿ P.R.ತಿಪ್ಪೇಸ್ವಾಮಿ ಸಾಧನೆ ದೊಡ್ಡದು. ತಿಪ್ಪೇಸ್ವಾಮಿ ನಮ್ಮ ಜೊತೆ ಇಲ್ಲದಿದ್ದರೂ ಅವರ ಚಿತ್ರಕಲೆ ನಮ್ಮೊಂದಿಗಿದೆ. ಈ ಹಿನ್ನೆಲೆ ಅವರು ನಮ್ಮೊಂದಿಗೆ ಇದ್ದಂತೆ. ಅವರ ಕೆಲಸಗಳಿಗೆ ಸಿಎಂ ಬೊಮ್ಮಾಯಿ ಅವರು ಸಾಥ್ ನೀಡಲಿ ಎಂದು ನಾನು ಸಹ ಕೇಳಿಕೊಳ್ಳುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 pm, Sat, 4 March 23

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್