AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಘಿ ಪ್ರಕರಣಗಳು ಬೆಂಗಳೂರು ಮತ್ತು ರಾಜ್ಯದಲ್ಲಿಯೂ ಹೆಚ್ಚಾಗುತ್ತಿವೆ: ಕಾರಣಗಳೇನು? ಏನು ಮಾಡಬೇಕು

ಏಪ್ರಿಲ್ ನಿಂದ ಮೇ 10ರವೆಗೆ ಪಾಲಿಕೆ ವ್ಯಾಪ್ತಿಯಲ್ಲಿ 930 ಪ್ರಕರಣ ದಾಖಲಾಗಿವೆ. 1974 ಟೆಸ್ಟ್ ಗಳಲ್ಲಿ 930 ಜನರಿಗೆ ಡೆಂಘಿ ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ ಒಟ್ಟು 2,500 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಮಳೆಯ ಹಿನ್ನೆಲೆ ಡೆಂಘಿ ನಿರ್ಲಕ್ಷ್ಯ ಮಾಡಿದ್ರೆ ಇನ್ನೂ ಹೆಚ್ಚಳ ಸಾಧ್ಯತೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಡೆಂಘಿ ಪ್ರಕರಣಗಳು ಬೆಂಗಳೂರು ಮತ್ತು ರಾಜ್ಯದಲ್ಲಿಯೂ ಹೆಚ್ಚಾಗುತ್ತಿವೆ: ಕಾರಣಗಳೇನು? ಏನು ಮಾಡಬೇಕು
ಡೆಂಘಿ ಪ್ರಕರಣಗಳು ಬೆಂಗಳೂರು ಮತ್ತು ರಾಜ್ಯದಲ್ಲಿಯೂ ಹೆಚ್ಚಾಗುತ್ತಿವೆ
ನವೀನ್ ಕುಮಾರ್ ಟಿ
| Edited By: ಸಾಧು ಶ್ರೀನಾಥ್​|

Updated on: May 13, 2024 | 11:42 AM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಕಾಲರಾ, ಹೀಟ್ ವೇವ್ ನಡುವೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಬೇಸಿಗೆ ಮಳೆ ಜೋರಾಗಿಯೇ ಬೀಳುತ್ತಿದೆ. ಬಿಸಿಲು-ಮಳೆ ಮಧ್ಯೆ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಶುರುವಾಗಿವೆ. ಒಂದು ತಿಂಗಳಿನಲ್ಲಿ ಸಾವಿರಾರು ಡೆಂಘಿ ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಮಳೆಯಿಂದಲೂ ಡೆಂಘಿ ಪ್ರಕರಣ (Dengue) ಹೆಚ್ಚಾಗುತ್ತಿದೆಯಂತೆ. ಪ್ರತಿನಿತ್ಯ 50-60 ಪ್ರಕರಣಗಳು ನಗರದ ನಾನಾ ಭಾಗಗಳಲ್ಲಿ ದಾಖಲಾಗುತ್ತಿವೆ. ಏಪ್ರಿಲ್ ನಿಂದ ಮೇ 10ರವೆಗೆ ಪಾಲಿಕೆ ವ್ಯಾಪ್ತಿಯಲ್ಲಿ 930 ಪ್ರಕರಣ ದಾಖಲಾಗಿವೆ (Health).

ಒಟ್ಟು 1974 ಟೆಸ್ಟ್ ಗಳಲ್ಲಿ 930 ಜನರಿಗೆ ಡೆಂಘಿ ಪಾಸಿಟಿವ್ ಬಂದಿದೆ. ಇನ್ನು ರಾಜ್ಯದಲ್ಲಿ ಒಟ್ಟು 2,500 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಮಳೆಯ ಹಿನ್ನೆಲೆ ಡೆಂಘಿ ನಿರ್ಲಕ್ಷ್ಯ ಮಾಡಿದ್ರೆ ಇನ್ನೂ ಹೆಚ್ಚಳ ಸಾಧ್ಯತೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಗಮನಾರ್ಹವೆಂದರೆ ನಗರದ ಸೌತ್ ಝೋನ್ ನಲ್ಲಿ ಅತಿಹೆಚ್ಚು 453 ಪ್ರಕರಣಗಳು ದಾಖಲುಗೊಂಡಿವೆ. ಡೆಂಘಿ ಪ್ರಕರಣ ತಾಂಡವವಾಡುತ್ತಿರುವುದು ಆರೋಗ್ಯ ಇಲಾಖೆಗೆ ಇದೀಗ ತಲೆ ಬಿಸಿಯಾಗಿದೆ. ಡೆಂಘಿ ತಡೆಗೆ ಬಿಬಿಎಂಪಿ ಪಾಲಿಕೆ ಮುಂದಾಗಿದೆ.

Also Read: ರಾಮನಗರದಲ್ಲಿ ರಣಬಿಸಿಲು: 500 ಕೋಟಿ ಮೌಲ್ಯದ ಮಾವು ಲಾಸ್! 28 ‌ಸಾವಿರ ರೈತ ಕುಟುಂಬಗಳು ಸಂಷಕ್ಟದಲ್ಲಿ

ನಗರದಲ್ಲಿ ಬಿಬಿಎಂಪಿ ವಲಯವಾರು ಡೆಂಘಿ ಪ್ರಕರಣ ಕಾಣಿಸಿಕೊಂಡಿರುವುದು ನೋಡೋದಾದ್ರೆ… ’ * ಬೊಮ್ಮನಹಳ್ಳಿ ಝೋನ್ – 20 ಪ್ರಕರಣ * ದಾಸರಹಳ್ಳಿ ಝೋನ್ – 2 ಪ್ರಕರಣ * ಈಸ್ಟ್ ಝೋನ್ – 224 ಪ್ರಕರಣ * ಮಹದೇವಪುರ ಝೋನ್ – 97 ಪ್ರಕರಣ * ಆರ್ ಆರ್ ನಗರ ಝೋನ್ – 18 ಪ್ರಕರಣ * ಸೌತ್ ಝೋನ್ – 453 ಪ್ರಕರಣ * ವೆಸ್ಟ್ ಝೋನ್ – 99 ಪ್ರಕರಣ * ಯಲಹಂಕ – 17 ಪ್ರಕರಣ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ