ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ವಾಂತಿ-ಜ್ವರಯಿದ್ದರೆ ನಿರ್ಲಕ್ಷಿಸದಿರಿ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ವಾಂತಿ-ಜ್ವರಯಿದ್ದರೆ ನಿರ್ಲಕ್ಷಿಸದಿರಿ
ಡೆಂಗ್ಯೂ
Follow us
ಆಯೇಷಾ ಬಾನು
|

Updated on: Sep 14, 2023 | 11:06 AM

ಬೆಂಗಳೂರು, ಸೆ.14: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಕಳೆದ ಕೆಲವು ದಿನಗಳಲ್ಲಿ 4,000 ಕ್ಕೂ ಹೆಚ್ಚು ಡೆಂಗ್ಯೂ(Dengue) ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣ ಸೋಂಕು ಕಂಡು ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ 103 ಡಿಗ್ರಿ, 104 ಡಿಗ್ರಿ ಜ್ವರದಿಂದ ಬಳಲುತ್ತಿರುವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಪ್ರಸ್ತುತ ನಮ್ಮ ವಾರ್ಡ್‌ಗಳಲ್ಲಿ 12 ಮಕ್ಕಳು ಡೆಂಗ್ಯೂ ಪೀಡಿತರಾಗಿದ್ದಾರೆ ಎಂದು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಮತ್ತು ವೈದ್ಯಕೀಯ ನಿರ್ದೇಶಕ ಡಾ.ನಾರಾಯಣಸ್ವಾಮಿ ತಿಳಿಸಿದರು.

ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ತಣ್ಣನೆಯ ಕೈಗಳು ಮತ್ತು ಪಾದಗಳು ಗಂಭೀರ ಅನಾರೋಗ್ಯದ ಸಂಕೇತವಾಗಬಹುದು. ಈಡಿಸ್‌ ಎಂಬ ಸೊಳ್ಳೆಗಳಿಂದ ಹರಡುವ ವೈರಲ್‌ ಸೋಂಕಿನಿಂದ ಡೆಂಗ್ಯೂ ಉಂಟಾಗುತ್ತದೆ. ಅಧಿಕ ಜ್ವರ ಹಾಗು ದೇಹದಲ್ಲಿ ನೋವು ಡೆಂಗ್ಯೂವಿನ ರೋಗಲಕ್ಷಣಗಳು. ಡೆಂಗ್ಯೂ ನಿರ್ಣಾಯಕ ಹಂತವನ್ನು ತಲುಪಿದ ನಂತರ, ರಕ್ತನಾಳಗಳಲ್ಲಿನ ದ್ರವಗಳು ಸೋರಿಕೆಯಾಗಲು ಪ್ರಾರಂಭಿಸುತ್ತವೆ. ಅದರ ಪರಿಣಾಮವಾಗಿ, ರಕ್ತವು ಕೇಂದ್ರೀಕೃತವಾಗಿರುತ್ತದೆ ಮತ್ತು ಪರಿಚಲನೆ ನಿಧಾನವಾಗುತ್ತದೆ. ಈ ಕಾರಣದಿಂದಾಗಿ ಪಾದ, ಮೂಗಿನ ತುದಿ, ಅಂಗೈಗಳಿಗೆ ಸಮರ್ಪಕವಾಗಿ ರಕ್ತ ಪೂರೈಕೆ ಆಗುವುದಿಲ್ಲ. “ನೀವು ನಿಮ್ಮ ಮಗುವಿನ ಕೈಯನ್ನು ನಿಮ್ಮ ಬೆರಳುಗಳಿಂದ ಹಿಸುಕಿದರೆ ಮತ್ತು ಮೂರು ಸೆಕೆಂಡುಗಳ ನಂತರ ಅದನ್ನು ಬಿಟ್ಟರೆ, ಸಾಮಾನ್ಯ ಬಣ್ಣವು ಹಿಂತಿರುಗದ ಕಾರಣ ನೀವು ಗುರುತುಗಳನ್ನು ಗಮನಿಸಬಹುದು. ಇದರಿಂದ ನಿಮ್ಮ ಮಗುವಿನ ಕೈಗೆ ರಕ್ತ ಸರಿಯಾದ ರೀತಿಯಲ್ಲಿ ಪೂರೈಕೆಯಾಗುತ್ತಿಲ್ಲ ಎಂಬುದನ್ನು ಗಮನಿಸಬಹುದು. ಮತ್ತು ಮಗುವಿಗೆ ಕಣ್ಣುಗಳ ಸುತ್ತ ಪಫಿನೆಸ್ ಅಥವಾ ಹೊಟ್ಟೆ ನೋವು ಕಾಣಿಸುತ್ತದೆ. ಆಗ ರಕ್ತ ಪರೀಕ್ಷೆ ಮಾಡಿಸಲೇ ಬೇಕು. ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು DHEE ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ಸಲಹೆಗಾರ ಶಿಶುವೈದ್ಯರು ಮತ್ತು ಮಕ್ಕಳ ತಜ್ಞರು ಆದ ಡಾ ಸುಪ್ರಜಾ ಚಂದ್ರಶೇಖರ್ ತಿಳಿಸಿದರು.

ಮೂರು ಅಥವಾ ಹೆಚ್ಚು ಬಾರಿ ವಾಂತಿ ಆಗುವುದು, ಅಲರ್ಜಿ, ಅಥವಾ ರಕ್ತಸ್ರಾವದಂತಹ ರೋಗಲಕ್ಷಣಗಳು ಕಂಡು ಬಂದರೆ ನಿರ್ಲಕ್ಷಿಸಬಾರದು. ಇಂತಹ ರೋಗಲಕ್ಷಣಗಳಿರುವ ಮಕ್ಕಳಿಗೆ ಚಿಕಿತ್ಸೆ ಅಗತ್ಯ. ಇನ್ನು ಚಿಕಿತ್ಸೆ ಶುರು ಮಾಡಿ ಐದನೇ ದಿನದ ನಂತರವೂ ಜ್ವರ ಕಡಿಮೆಯಾಗದಿದ್ದರೆ, ಮಗುವನ್ನು ಆಸ್ಪತ್ರೆಗೆ ದಾಖಲಿಸಬೇಕು ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ