ಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ; ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷ 4,323 ಪ್ರಕರಣಗಳು ಪತ್ತೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು 4,323 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜೂನ್‌ನಲ್ಲಿ 689 ಡೆಂಗ್ಯೂ ಪ್ರಕರಣಗಳಿದ್ದರೆ, ಆಗಸ್ಟ್‌ನಲ್ಲಿ 1,589 ಕ್ಕೆ ಏರಿದೆ. ಜುಲೈ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,629 ಪ್ರಕರಣಗಳು ದಾಖಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ 12ರವರೆಗೆ 198 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆದರೆ, ಜ್ವರದಿಂದ ಸಾವನ್ನಪ್ಪಿರುವ ಯಾವುದೇ ಪ್ರಕರಣವನ್ನು ಆರೋಗ್ಯಾಧಿಕಾರಿಗಳು ಖಚಿತಪಡಿಸಿಲ್ಲ.

ಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ; ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷ 4,323 ಪ್ರಕರಣಗಳು ಪತ್ತೆ
ಡೆಂಗ್ಯೂ
Follow us
|

Updated on: Sep 15, 2023 | 7:37 AM

ಬೆಂಗಳೂರು, ಸೆ.15: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಡೆಂಗ್ಯೂ(Dengue) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹಂಚಿಕೊಂಡ ಅಂಕಿಅಂಶಗಳ ಪ್ರಕಾರ ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು 4,323 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜೂನ್‌ನಲ್ಲಿ 689 ಡೆಂಗ್ಯೂ ಪ್ರಕರಣಗಳಿದ್ದರೆ, ಆಗಸ್ಟ್‌ನಲ್ಲಿ 1,589 ಕ್ಕೆ ಏರಿದೆ. ಜುಲೈ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,629 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ ಪಾಲಿಕೆಯಿಂದ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 8 ರವರೆಗೆ 416 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

2019 ರಲ್ಲಿ 44,863 ಡೆಂಗ್ಯೂ ಪ್ರಕರಣಗಳಿದ್ದರೆ, 2020 ರಲ್ಲಿ 6,679ಕ್ಕೆ ಇಳಿದಿತ್ತು ಎಂದು ಬಿಬಿಎಂಪಿ ಹಂಚಿಕೊಂಡ ಅಂಕಿಅಂಶದಲ್ಲಿ ತಿಳಿದು ಬಂದಿದೆ. ಇನ್ನು 2021 ರಲ್ಲಿ 6,166 ಪ್ರಕರಣಗಳು ಮತ್ತು 2022 ರಲ್ಲಿ 5,589 ಪ್ರಕರಣಗಳು ಕಂಡುಬಂದಿದ್ದವು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ 12ರವರೆಗೆ 198 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆದರೆ, ಜ್ವರದಿಂದ ಸಾವನ್ನಪ್ಪಿರುವ ಯಾವುದೇ ಪ್ರಕರಣವನ್ನು ಆರೋಗ್ಯಾಧಿಕಾರಿಗಳು ಖಚಿತಪಡಿಸಿಲ್ಲ.

ಇದನ್ನೂ ಓದಿ: ಬೆಂಗಳೂರು: ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ವಾಂತಿ-ಜ್ವರಯಿದ್ದರೆ ನಿರ್ಲಕ್ಷಿಸದಿರಿ

ಕಳೆದ ವಾರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ PRISM-H (ಪ್ಲಾಟ್‌ಫಾರ್ಮ್ ಫಾರ್ ರಿಸರ್ಚ್, ಇಂಟಿಗ್ರೇಟೆಡ್ ಸರ್ವೆಲೆನ್ಸ್ ಮತ್ತು ಮ್ಯಾನೇಜ್‌ಮೆಂಟ್ ಆಫ್ ಹೆಲ್ತ್) ಅನ್ನು ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯ((IISc) AI ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್ (ARTPARK) ಕಚೇರಿಯಲ್ಲಿ ಅನಾವರಣಗೊಳಿಸಿದರು. ಇದು ಡೆಂಗ್ಯೂ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡುತ್ತದೆ.

ಮಳೆಗಾಲದಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗುತ್ತಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಜಾಗರೂಕರಾಗಿರಲು ಆರೋಗ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಬಹುದಾದ ನೀರಿನ ಅಡಚಣೆಯಾಗದಂತೆ ನೋಡಿಕೊಳ್ಳಲು ಬಿಬಿಎಂಪಿ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಗೆ ಸೂಚಿಸಿದ್ದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ