ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ

ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಕೆ ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ
ಡೆಂಗ್ಯೂ
Follow us
ಆಯೇಷಾ ಬಾನು
|

Updated on: Sep 20, 2023 | 1:39 PM

ಬೆಂಗಳೂರು, ಸೆ.29: ರಾಜ್ಯದಲ್ಲಿ ನಿರಂತರ ಡೆಂಗ್ಯೂ(Dengue) ಜ್ವರ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಗೈಡ್​​ಲೈನ್ಸ್ ಬಿಡುಗಡೆ ಮಾಡಿದೆ. ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಖೆ(Karnataka Health Department) ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.

ಡೆಂಗ್ಯೂ ಲಕ್ಷಣಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಡೆಂಗ್ಯೂ ಈಡಿಸ್ ಎಂಬ ಸೊಳ್ಳೆ ಕಚ್ಚುವುದರಿಂದ ಬರುತ್ತದೆ. ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ತಗುಲುತ್ತದೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಡೆಂಗ್ಯೂಗೆ  ಔಷಧಿ ಇಲ್ಲವಾದರೂ  ರೋಗಲಕ್ಷಣಗಳನ್ನು ಗಮನಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ರೋಗ ಲಕ್ಷಣಗಳು ಹೀಗಿವೆ

ಡೆಂಗ್ಯೂ ತಡೆಗೆ ಏನು ಮಾಡಬೇಕು?

  • ಮೇಲ್ಛಾವಣಿಯ ಟ್ಯಾಂಕ್‌ಗಳು ಸೇರಿದಂತೆ ಎಲ್ಲಾ ನೀರಿನ ಪಾತ್ರೆಗಳನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಬೇಕು ಮತ್ತು ಚನ್ನಾಗಿ  ತೊಳೆದು, ಒಣಗಿಸಿ ಬಳಸಬೇಕು
  • ಮನೆಗಳ ಸುತ್ತಮುತ್ತಲಿನ ತ್ಯಾಜ್ಯ ಟಿನ್‌ಗಳು, ಟೈರ್‌ಗಳು ಮತ್ತು ಬಾಟಲಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.
  • ಏರ್ ಕೂಲರ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆಯಾದರೂ ಬದಲಾಯಿಸಬೇಕು
  • ಕೈ ಮತ್ತು ಕಾಲುಗಳನ್ನು ಮುಚ್ಚುವ ಪೂರ್ಣ ಉಡುಪುಗಳನ್ನು ಧರಿಸಬೇಕು
  • ಹಗಲಿನಲ್ಲಿ ಮಲಗುವ / ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ಸೊಳ್ಳೆ ಪರದೆಯನ್ನು ಬಳಸಬೇಕು.
  • ಡೆಂಗ್ಯೂ ಪೀಡಿತರು ತಪ್ಪದೇ ಸೊಳ್ಳೆ ಪರದೆ ಬಳಸಬೇಕು
  • ಡೆಂಗ್ಯೂ ಇರುವವರು ಸಾಕಷ್ಟು ನೀರಿನ ಅಂಶವಿರುವಗ ಪದಾರ್ಥಗಳನ್ನು ಸೇವಿಸಬೇಕು ಮತ್ತು ಗರಿಷ್ಠ ವಿಶ್ರಾಂತಿ ತೆಗೆದುಕೊಳ್ಳಬೇಕು
  • ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆಗಳನ್ನು ಅಳವಡಿಸಬೇಕು.

ಏನನ್ನು ಮಾಡಬಾರದು?

  • ಡೆಂಗ್ಯೂ ರೋಗಲಕ್ಷಣಗಳು ಕಂಡು ಬಂದರೆ  ಸ್ವಯಂ-ಔಷಧಿಗಳನ್ನು ತೆಗೆದುಕೊಳ್ಳುವ ಬದಲಿಗೆ ಆಸ್ಪತ್ರೆಗೆ ಭೇಟಿ ನೀಡಿ
  • ಡೆಂಗ್ಯೂ ಇರುವವರು ಯಾವುದೇ ಕಾರಣಕ್ಕೂ ಪೇನ್ ಕಿಲ್ಲರ್ ಮಾತ್ರಗಳನ್ನು ಬಳಸಬೇಡಿ.

     ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ