ಬೆಂಗಳೂರು, ಸೆ.29: ರಾಜ್ಯದಲ್ಲಿ ನಿರಂತರ ಡೆಂಗ್ಯೂ(Dengue) ಜ್ವರ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಕೇಂದ್ರದ ಮಾರ್ಗಸೂಚಿ ಅನ್ವಯ ಡೆಂಗ್ಯೂ ನಿಯಂತ್ರಣ ಸಂಬಂಧ ರಾಜ್ಯ ಆರೋಗ್ಯ ಇಲಾಖೆ(Karnataka Health Department) ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಡೆಂಗ್ಯೂ ಈಡಿಸ್ ಎಂಬ ಸೊಳ್ಳೆ ಕಚ್ಚುವುದರಿಂದ ಬರುತ್ತದೆ. ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ತಗುಲುತ್ತದೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಡೆಂಗ್ಯೂಗೆ ಔಷಧಿ ಇಲ್ಲವಾದರೂ ರೋಗಲಕ್ಷಣಗಳನ್ನು ಗಮನಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.
ಇದನ್ನೂ ಓದಿ: Dengue Hemorrhagic Fever: ಡೆಂಗ್ಯೂ ಹೆಮರಾಜಿಕ್ ಫೀವರ್ ಎಂದರೇನು? ಇದರ 8 ಅಪಾಯಕಾರಿ ಲಕ್ಷಣಗಳಿವು
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ