ಬೆಂಗಳೂರಿನಲ್ಲಿ ಹೆಚ್ಚಾದ ಡೆಂಗ್ಯೂ: ಆರೋಗ್ಯ ಅಧಿಕಾರಿಗಳ ಸಭೆ ಕರೆದು ಕ್ರಮಕ್ಕೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್

| Updated By: ಆಯೇಷಾ ಬಾನು

Updated on: Sep 07, 2023 | 2:42 PM

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಹೆಚ್ಚು ಪ್ರಕರಣ ಪತ್ತೆಯಾದ ಕಡೆ ಹೆಚ್ಚಿನ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಪೂರ್ವ ವಲಯ ಸಾವಿರಕ್ಕೂ ಅಧಿಕ ಪ್ರಕರಣದಿಂದ ಮುನ್ನುಗುತ್ತಿದೆ. ಬೆಂಗಳೂರು ಡೆಂಗ್ಯೂ ಹಬ್ ಆಗ್ತಾ ಇರೋದನ್ನ ಕಡಿವಾಣ ಹಾಕಲು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಾದ ಡೆಂಗ್ಯೂ: ಆರೋಗ್ಯ ಅಧಿಕಾರಿಗಳ ಸಭೆ ಕರೆದು ಕ್ರಮಕ್ಕೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್
ಸಚಿವ ದಿನೇಶ್ ಗುಂಡೂರಾವ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು, ಸೆ.07: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ(Dengue) ಕಾಯಿಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ(BBMP) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಅವರು ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯ ಆರೋಗ್ಯ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇನ್ನು ಬಿಬಿಎಂಪಿ ಆರೋಗ್ಯ ವರದಿಯಲ್ಲಿ ಆಗಸ್ಟ್ ಒಂದೇ ತಿಂಗಳಲ್ಲಿ ಬರೊಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿ ಆಗಿವೆ. ಜನವರಿಯಿಂದ ಸೆಪ್ಟೆಂಬರ್ 7ರ ವರೆಗೆ 4926 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವ್ಯಾವ ಭಾಗದಲ್ಲಿ ಡೆಂಗ್ಯೂ ಹೆಚ್ಚಿದೆ ಅನ್ನೋ ಮಾಹಿತಿಯನ್ನು ಪಡೆದಿದ್ದಾರೆ. ಹೆಚ್ಚು ಪ್ರಕರಣ ಪತ್ತೆಯಾದ ಕಡೆ ಹೆಚ್ಚಿನ ಕ್ರಮ ವಹಿಸಲು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಪೂರ್ವ ವಲಯ ಸಾವಿರಕ್ಕೂ ಅಧಿಕ ಪ್ರಕರಣದಿಂದ ಮುನ್ನುಗುತ್ತಿದೆ. ಬೆಂಗಳೂರು ಡೆಂಗ್ಯೂ ಹಬ್ ಆಗ್ತಾ ಇರೋದನ್ನ ಕಡಿವಾಣ ಹಾಕಲು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು

ಕಳೆದ ಮೂರು ವರ್ಷ ಹೋಲಿಕೆ ಮಾಡಿದ್ರೆ ಈ ಭಾರಿಯೇ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೋಲಿಕೆ ಮಾಡಿದ್ರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಸಚಿವ ದಿನೇಶ್ ಗುಂಡೂರಾವ್ ಬಿಬಿಎಂಪಿ ವಲಯವಾರು ಡೆಂಗ್ಯೂ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಡೆಂಗ್ಯೂ ಹೀಗೆ ದಿಢೀರ್ ಸ್ಫೋಟಗೊಳ್ಳಲು ಏನು ಕಾರಣ? ಎಂಬ ಬಗ್ಗೆ ಮಾಹಿತಿ ಪಡೆದು ಡೆಂಗ್ಯೂ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಡೆಂಗ್ಯೂ ವಲಯವಾರು ಪ್ರಕರಣ

  • ಬೊಮ್ಮನಹಳ್ಳಿ -272 ಪ್ರಕರಣ
  • ದಾಸರಹಳ್ಳಿ -73
  • ಬೆಂಗಳೂರು ಪೂರ್ವ ವಲಯ -1218
  • ಮಹದೇವಪುರ -875
  • ಆರ್ ಆರ್ ನಗರ -457
  • ಬೆಂಗಳೂರು ದಕ್ಷಿಣ -1003
  • ಬೆಂಗಳೂರು ಪಶ್ಚಿಮ -635
  • ಯಲಹಂಕ -393

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ  ಮೇಲೆ ಕ್ಲಿಕ್ ಮಾಡಿ