ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ

ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ.

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ
ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 14, 2024 | 9:39 PM

ಬೆಂಗಳೂರು, ಜೂ.14: ರಾಜ್ಯದ ಪತ್ರಕರ್ತ(Journalists)ರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂಧ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ನೇತೃತ್ವದಲ್ಲಿ ಶುಕ್ರವಾರ(ಜೂ.14) ವಾರ್ತಾ ಇಲಾಖೆಯಲ್ಲಿ ಭೇಟಿಯಾಗಿದ್ದ ನಿಯೋಗಕ್ಕೆ ಮಾಹಿತಿ ನೀಡಿದರು. ಹಿರಿಯ ಪತ್ರಕರ್ತರ ಮಾಸಾಶನಕ್ಕೆ ಇರುವ ಅಡೆ ತಡೆಗಳನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು. ಬಾಕಿ ಇರುವ ಪತ್ರಕರ್ತರ ಮಾಸಾಶನ ಅರ್ಜಿಗಳನ್ನು ಪರಿಗಣಿಸಿ ಮಾಸಾಶನ ಮಂಜೂರು ಮಾಡಬೇಕು. ಮಾನ್ಯತೆ ಪಡೆದ ಪತ್ರಕರ್ತರ ಬಸ್ ಪಾಸ್ ಕಾರ್ಡ್‌ಗಳನ್ನು ಕೂಡಲೇ ಕೊಡಬೇಕು ಎಂಬಿತ್ಯಾಧಿ ಬೇಡಿಕೆಗಳ ಬಗ್ಗೆ ಆಯುಕ್ತರ ಜೊತೆಗೆ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಪತ್ರಕರ್ತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರ ಬಳಿಯೂ ಪ್ರಸ್ತಾಪಿಸಿ ಮನವಿ ಸಲ್ಲಿಸಿದ್ದು, ಅವರು ವಾರ್ತಾ ಇಲಾಖೆ ಕಾರ್ಯದರ್ಶಿ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನುವುದನ್ನು ಗಮನಕ್ಕೆ ತರಲಾಯಿತು. ಸಂಘದ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಆಯುಕ್ತರಾದ ವಿಕಾಸ ಸುರಳಕರ, ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಇಲಾಖೆ ಬದ್ಧವಾಗಿದ್ದು, ಬೇಡಿಕೆಗಳನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು. ನಿಯೋಗದಲ್ಲಿ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಹಿರಿಯ ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಚಿತ್ರದುರ್ಗದ ಹಿರಿಯ ಪತ್ರಕರ್ತ ಹೆಂಜಾರಪ್ಪ, ಬೆಂಗಳೂರು ನಗರ ಘಟಕದ ಶಿವರಾಜು ಮತ್ತಿತರರಿದ್ದರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Fri, 14 June 24

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ