ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್‌ಬಾಗ್‌, ಕಬ್ಬನ್ ಪಾರ್ಕ್​ಗಿಂತಲೂ ಅತಿದೊಡ್ಡ ಪಾರ್ಕ್; ತೋಟಗಾರಿಕೆ ಇಲಾಖೆ ಹೊಸ ಪ್ಲಾನ್

ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ‌ ಲಾಲ್‌ಬಾಗ್‌, ಕಬ್ಬನ್ ಪಾರ್ಕ್ಗಿಂತಲೂ ದೊಡ್ಡ ಪಾರ್ಕ್ ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ತೋಟಗಾರಿಕಾ ಸಚಿವ ಮುನಿರತ್ನ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್‌ಬಾಗ್‌, ಕಬ್ಬನ್ ಪಾರ್ಕ್​ಗಿಂತಲೂ ಅತಿದೊಡ್ಡ ಪಾರ್ಕ್; ತೋಟಗಾರಿಕೆ ಇಲಾಖೆ ಹೊಸ ಪ್ಲಾನ್
ಕಬ್ಬನ್​ ಪಾರ್ಕ್​ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Sep 29, 2021 | 7:03 AM

ಬೆಂಗಳೂರು: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ದೊಡ್ಡ ಪಾರ್ಕ್ ಯಾವುದಾದರೂ ಇದೆಯಾ ಎಂದರೆ ಮೊದಲು ನೆನಪಾಗುವುದೇ ಲಾಲ್‌ಬಾಗ್‌, ಕಬ್ಬನ್ ಪಾರ್ಕ್ ಆದ್ರೆ ನಗರದಲ್ಲಿ ಅವುಗಳಿಗಿಂತಲೂ ಅತಿದೊಡ್ಡ ಪಾರ್ಕ್ ನಿರ್ಮಾಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಅಹಮದಾಬಾದ್‌ ಸೈನ್ಸ್ ಸಿಟಿ ಪಾರ್ಕ್ ಮಾದರಿಯಂತೆ ದೊಡ್ಡ ಉದ್ಯಾನ ನಿರ್ಮಿಸಲು ತೋಟಗಾರಿಕೆ ಇಲಾಖೆಯ ಸಚಿವ ಮುನಿರತ್ನ ಮುಂದಾಗಿದ್ದಾರೆ.

ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ‌ ಲಾಲ್‌ಬಾಗ್‌, ಕಬ್ಬನ್ ಪಾರ್ಕ್ಗಿಂತಲೂ ದೊಡ್ಡ ಪಾರ್ಕ್ ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ತೋಟಗಾರಿಕಾ ಸಚಿವ ಮುನಿರತ್ನ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಪಾರ್ಕ್ ನಿರ್ಮಾಣ ಬಗ್ಗೆ DPR ಸಿದ್ಧಪಡಿಸಲು‌ ಸೂಚಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 4ರಂದು ವಿಧಾನಸೌಧದಲ್ಲಿ ಸಭೆ ನಿಗದಿ ಮಾಡಲಾಗಿದೆ. ಬಹುತೇಕ ಬೆಂಗಳೂರು ಉತ್ತರ ಭಾಗದಲ್ಲಿ ಪಾರ್ಕ್ ನಿರ್ಮಾಣವಾಗಲಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತ ಸೇರಿದಂತೆ 4 ಕಡೆ ಬೇರೆ ಬೇರೆ ವಿಸ್ತೀರ್ಣದಲ್ಲಿ ಪಾರ್ಕ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಆದ್ರೆ ಸೋಮವಾರದಂದು ನಡೆಯುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುತ್ತೆ.

ಹೇಗಿರಲಿದೆ ಬೆಂಗಳೂರಿನ ಅತಿ ದೊಡ್ಡ ಪಾರ್ಕ್ ಗುಜರಾತ್ನ ಅಹಮದಾಬಾದ್ನಲ್ಲಿ 260 ಎಕರೆ ಜಾಗದಲ್ಲಿರುವ ಸೈನ್ಸ್ ಸಿಟಿ ಪಾರ್ಕ್ ಮಾದರಿಯಂತೆ ಪಾರ್ಕ್ ನಿರ್ಮಿಸುವ ಉದ್ದೇಶವನ್ನು ತೋಟಗಾರಿಕೆ ಇಲಾಖೆ ಹೊಂದಿದೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ‌ ಉದ್ಯಾನ ನಿರ್ಮಿಸಲು ತೀರ್ಮಾನ ಮಾಡಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತ ಸೇರಿ ಒಟ್ಟು ನಾಲ್ಕು ಕಡೆ ಬೇರೆ ಬೇರೆ ವಿಸ್ತೀರ್ಣದಲ್ಲಿ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣದ ಬಗ್ಗೆ ತೋಟಗಾರಿ ಇಲಾಖೆ ಪ್ಲಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Karnataka Weather Today: ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Published On - 7:03 am, Wed, 29 September 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM