ಚಂದ್ರಮಾನ ಯುಗಾದಿ ಹಬ್ಬವನ್ನ ಧಾರ್ಮಿಕ ಹಬ್ಬವನ್ನಾಗಿ ಆಚರಿಸಲು ನಿರ್ಧರಿಸಿದ ಧಾರ್ಮಿಕ ಮತ್ತು ದತ್ತಿ ಇಲಾಖೆ
ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ್ದ 1200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಹೊಸ ವರ್ಷದ ಮೊದಲ ದಿನವನ್ನ ಆಚರಿಸಲು ಎಲ್ಲಾ ರೀತಿಯಲ್ಲಿ ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹೇಳಿದ್ದಾರೆ.
ಬೆಂಗಳೂರು: ಚಂದ್ರಮಾನ ಯುಗಾದಿ (Ugadi) ಹಬ್ಬವನ್ನು ಧಾರ್ಮಿಕ ಹಬ್ಬವನ್ನಾಗಿ ಆಚರಿಸಲು ಧಾರ್ಮಿಕ ಮತ್ತು ದತ್ತಿ ಇಲಾಖೆ (Department of Religious and Charity) ನಿರ್ಧರಿಸಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿಶೇಷ ಪೂಜೆ, ಭಕ್ತಾದಿಗಳಿಗೆ ಉಚಿತವಾಗಿ ಬೇವು ಬೆಲ್ಲ, ಪಾನಕ ಮಜ್ಜಿಗೆ ಜೊತೆ ತೀರ್ಥ, ಪ್ರಸಾದವೂ ಕೂಡ ನೀಡುವ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಬನಶಂಕರಿ, ದೊಡ್ಡಗಣಪತಿ ಹಾಗೂ ಕಾಡು ಮಲ್ಲೇಶ್ವರ ದೇವಾಲಯದಲ್ಲಿ (Temple) ವಿಶೇಷ ಪೂಜೆ ಸಲ್ಲಿಸಲು ನಿಧರ್ರಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ್ದ 1200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಹೊಸ ವರ್ಷದ ಮೊದಲ ದಿನವನ್ನ ಆಚರಿಸಲು ಎಲ್ಲಾ ರೀತಿಯಲ್ಲಿ ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹೇಳಿದ್ದಾರೆ.
ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ
ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. 1 ಹಾಗೂ 3 ದಿನದ ಪಾಸ್ ಅನ್ನು ಬಿಎಂಆರ್ಸಿಎಲ್ ಪರಿಚಯಿಸುತ್ತಿದೆ. ಒಂದು ದಿನದ ಪಾಸ್ಗೆ 200 ರೂಪಾಯಿಯನ್ನು ಬಿಎಂಆರ್ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್ಲಿಮಿಟೆಡ್ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ. ಈ ಕುರಿತು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಯುಗಾದಿ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ
ಯುಗಾದಿ ಹಬ್ಬದ ಹಿನ್ನಲೆ ಕೆಎಸ್ಆರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆಯನ್ನು ಕೆಎಸ್ಆರ್ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ ಮೂಲಕ ಟಿಕೆಟ್ ಮುಂಗಡ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ.
ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್ಸಿಎಲ್
Published On - 4:39 pm, Thu, 31 March 22