11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವೈದ್ಯ; ಅಂಥಾದ್ದೇನಾಗಿತ್ತು?

| Updated By: ಆಯೇಷಾ ಬಾನು

Updated on: Jun 15, 2022 | 2:56 PM

ಹೃದ್ರೋಗದಿಂದ ಬಳಲುತ್ತಿದ್ದ ಡಾ.ಪೃಥ್ವಿರಾಜ್ ಇದೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 11ನೇ ಮಹಡಿಯಿಂದ ಜಿಗಿದು ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವೈದ್ಯ; ಅಂಥಾದ್ದೇನಾಗಿತ್ತು?
ಡಾ.ಪೃಥ್ವಿರಾಜ್ ರೆಡ್ಡಿ
Follow us on

ಬೆಂಗಳೂರು: ಬೆಂಗಳೂರಿನಲ್ಲಿ 11ನೇ ಮಹಡಿಯಿಂದ ಜಿಗಿದು ವೈದ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಂಜಾನೆ 5ರ ಸುಮಾರಿಗೆ ಗೋದ್ರೇಜ್ ಅಪಾರ್ಟ್ಮೆಂಟ್ನಿಂದ ಕೆಳಗೆ ಹಾರಿ ಡಾ.ಪೃಥ್ವಿರಾಜ್ ರೆಡ್ಡಿ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೃದ್ರೋಗದಿಂದ ಬಳಲುತ್ತಿದ್ದ ಡಾ.ಪೃಥ್ವಿರಾಜ್ ಇದೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಪೃಥ್ವಿರಾಜ್ ರೆಡ್ಡಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಕೂಡ ಮೃತದೇಹ ಶಿಫ್ಟ್ ಮಾಡಲಾಗಿಲ್ಲ. ಮೃತ ವೈದ್ಯನ ಪೋಷಕರು ಆಂಧ್ರದಿಂದ ಆಗಮಿಸಲಿದ್ದಾರೆ. ಹೀಗಾಗಿ ಅವರಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇದನ್ನೂ ಓದಿ: Gokak Falls: ಅದೃಷ್ಟ ದುರಾದೃಷ್ಟಗಳ ನಡುವೆ ಹರಿಯುತ್ತಲೇ ಇರುವ ಘಟಪ್ರಭೆ

ನಂಬಿಸಿ ಬಾಲಕಿಯ ಅಪಹರಣ; ಆರೋಪಿಗೆ ನಾಲ್ಕು ವರ್ಷ ಜೈಲು, ಹತ್ತು ಸಾವಿರ ದಂಡ
ದಾವಣಗೆರೆ: ಪ್ರೀತಿಸುವುದಾಗಿ‌ ನಂಬಿಸಿ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗೆ ನಾಲ್ಕು ವರ್ಷ ಜೈಲು ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆಯ ಆಜಾದ್ ನಗರದ ನಿವಾಸಿ ಸುಭಾನ್ಗೆ 4 ವರ್ಷ ಜೈಲು, 10 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2019ರ ಮೇ ತಿಂಗಳಲ್ಲಿ ಆರೋಪಿ ಸುಭಾನ್ ಬಾಲಕಿಯನ್ನ ಅಪಹರಿಸಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದ. ಸಂತ್ರಸ್ತೆಯ ಅಜ್ಜಿ ಮಹಿಳಾ ಠಾಣೆಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಶ್ರೀಪಾದ ಎನ್, ಆರೋಪ ಸಾಭೀತಾದ ಹಿನ್ನೆಲೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಯ ಪರ ಸರ್ಕಾರಿ ಅಭಿಯೋಜಕಿ ರೇಖಾ ಕೋಟೆಗೌಡರ ವಾದ ಮಂಡನೆ ಮಾಡಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:30 pm, Wed, 15 June 22