AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಲ್ಲಿ ಮುಂದಿನ 2 ದಿನ ಮಳೆ

Bangalore Rain Update: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಾಧಾನಿ ಬೆಂಗಳೂರಲ್ಲಿ ಇಂದು (ಡಿ.27) ಮತ್ತು‌ ನಾಳೆ (ಡಿ.28)‌ ಮಳೆಯಾಗುವ ಸಾಧ್ಯಾತೆ ಇದೆ.

Bangalore Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಲ್ಲಿ ಮುಂದಿನ 2 ದಿನ ಮಳೆ
ಮಳೆ
TV9 Web
| Edited By: |

Updated on:Dec 27, 2022 | 3:39 PM

Share

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರಲ್ಲಿ (Bengaluru Weather) ಇಂದು (ಡಿ.27) ಮತ್ತು‌ ನಾಳೆ (ಡಿ.28)‌ ಮಳೆಯಾಗುವ (Rain) ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇಂದು (ಡಿ.27) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೂಡ ಒಣಹಣೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರುನಲ್ಲಿ ಇಂದು ಕನಿಷ್ಠ ತಾಪಮಾನ 19 ಗರಿಷ್ಠ ತಾಪಮಾನ 26 ಡಿಗ್ರಿ ಇದ್ದು, ಚಳಿಯ ವಾತಾವರಣ ಇರಲಿದೆ. ಇಂದು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು ಕೆಲವೊಮ್ಮೆ ಹಗುರದಿಂದ – ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ವರುಣನ ಆರ್ಭಟ; ಡಿ. 29ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಂದ್ರೆ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ.

ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆ

ಮಳೆ ಸಾಧ್ಯತೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಕೂಲ್ ವೆದರ್ ಇನ್ನೂ ಎರಡು ದಿನ ಮುಂದುವರೆಯಲಿದೆ. ಇನ್ನು ಇದೇ ಡಿಸೆಂಬರ್ ತಿಂಗಳ ಆರಂಭದಲ್ಲಿ ಕರ್ನಾಟಕದಾದ್ಯಂತ ಒಂದು ವಾರ ಕಾಲ ಮೋಡಕವಿದ ವಾತಾವರಣದ ಜೊತೆ ತುಂತೂರು ಮಳೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Tue, 27 December 22