ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು: ಚೆನ್ನೈನಿಂದ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್, ಸ್ವಾಮೀಜಿ, ಶಾಸಕರು ಭೇಟಿ

ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ‌ ಆರೋಗ್ಯ ವಿಚಾರಿಸಿದ್ದಾರೆ.

ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು: ಚೆನ್ನೈನಿಂದ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್, ಸ್ವಾಮೀಜಿ, ಶಾಸಕರು ಭೇಟಿ
ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಮತ್ತು ರ್ಯೋಧನ ಐಹೊಳೆ
TV9kannada Web Team

| Edited By: Apurva Kumar Balegere

Sep 19, 2022 | 2:41 PM

ಬೆಳಗಾವಿ: ಡೆಪ್ಯುಟಿ ಸ್ಪೀಕರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ(Anand Mamani) ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಚೆನ್ನೈನಿಂದ ಬೆಂಗಳೂರು ಮನಿಪಾಲ ಆಸ್ಪತ್ರೆಗೆ(Manipal Hospital) ಆನಂದ ಮಾಮನಿ ಅವರನ್ನು ಶಿಫ್ಟ್​ ಮಾಡಲಾಗಿದೆ. ‌ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ಸ್ವಾಮೀಜಿ, ಶಾಸಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ‌ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ವಿಚಾರಣೆ ಬಳಿಕ ಚಂದ್ರಶೇಖರ ಸ್ವಾಮೀಜಿ ಮಾತನಾಡಿದ್ದು, ಆನಂದ ಮಾಮನಿ ಅವರ ಆರೋಗ್ಯ ಚೆನ್ನಾಗಿದೆ, ಯಾವುದೇ ಆತಂಕ ಇಲ್ಲ. ಆದಷ್ಟು ಬೇಗ ಆನಂದ ಮಾಮನಿ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡೋಣ. ಆನಂದ ಮಾಮನಿ ಆರೋಗ್ಯ ಚೇತರಿಕೆಗೆ ದೇವರಲ್ಲಿ ಪಾರ್ಥನೆ ಮಾಡಿ. ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಕೆಲ ದಿನಗಳ ಹಿಂದೆ ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada